Karnataka Budget 2021: ಬಿಎಸ್‌ವೈ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು?

ಒಟ್ಟು ಬೆಂಗಳೂರು ನಗರ ಅಭಿವೃದ್ಧಿಗೆ 7,795 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಆದರೆ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಬೆಂಗಳೂರಿಗೆ ಕಡಿಮೆ ಅನುದಾನ ನೀಡಲಾಗಿದೆ. ಕಳೆದ ಬಾರಿ ಬೆಂಗಳೂರು 9.000 ಕೋಟಿ ರೂಪಾಯಿ ನೀಡಲಾಗಿತ್ತು.  

Written by - Yashaswini V | Last Updated : Mar 8, 2021, 01:10 PM IST
  • ನಿರ್ಭಯಾ ಯೋಜನೆಯಡಿ 7,500 ಸಿಸಿ ಕ್ಯಾಮರಾ ಅಳವಡಿಕೆ ಮಾಡಲು ಬಜೆಟ್ ನಲ್ಲಿ ನಿರ್ಧಾರ
  • ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 33 ಕೋಟಿ ರೂಪಾಯಿ
  • ವಿಮಾನ ನಿಲ್ದಾಣದ ಪಕ್ಕದಲ್ಲಿ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಸ್ಥಾಪಿಸಲು ಬಜೆಟ್ ಅನುಮೋದನೆ
Karnataka Budget 2021: ಬಿಎಸ್‌ವೈ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? title=
Karnataka Budget 2021-22

ಬೆಂಗಳೂರು: ರಾಜ್ಯದ ಬೊಕ್ಕಸಕ್ಕೆ ಬೃಹತ್ ಮೊತ್ತದ ತೆರಿಗೆ ನೀಡುವ ಬೆಂಗಳೂರಿಗೆ ಇಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (Chief Minister B.S. Yediyurappa) ಮಂಡಿಸಿದ ಈ ಬಾರಿಯ ಬಜೆಟ್‌ನಲ್ಲಿ ಏನೇನು ಲಭ್ಯವಾಗಲಿದೆ ಎಂಬುದರ ವಿವರ ಇಲ್ಲಿದೆ‌...

ಒಟ್ಟು ಬೆಂಗಳೂರು ನಗರ ಅಭಿವೃದ್ಧಿಗೆ 7,795 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಆದರೆ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಬೆಂಗಳೂರಿಗೆ ಕಡಿಮೆ ಅನುದಾನ ನೀಡಲಾಗಿದೆ. ಕಳೆದ ಬಾರಿ ಬೆಂಗಳೂರು 9.000 ಕೋಟಿ ರೂಪಾಯಿ ನೀಡಲಾಗಿತ್ತು.

ಬೆಂಗಳೂರಿನಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಗರದಾದ್ಯಂತ ನಿರ್ಭಯಾ ಯೋಜನೆಯಡಿ 7,500 ಸಿಸಿ ಕ್ಯಾಮರಾ ಅಳವಡಿಕೆ ಮಾಡಲು ಬಜೆಟ್ ನಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಾದ ವಿಕ್ಟೋರಿಯಾ ಮತ್ತು ಜಯದೇವ ಆಸ್ಪತ್ರೆಯಲ್ಲಿ ಅಂಗಾಗ ಕಸಿ ಮಾಡುವುದಕ್ಕಾಗಿ ಈ ಬಜೆಟ್ ನಲ್ಲಿ 28 ಕೋಟಿ ರೂಪಾಯಿ ನೀಡಲಾಗಿದೆ. ಇದಲ್ಲದೆ ಕೆ.ಸಿ. ಜನರಲ್ ಆಸ್ಪತ್ರೆ ವಿಸ್ತರಣೆಗೆ 20 ಕೋಟಿ ರೂಪಾಯಿ ಕೊಡಲಾಗಿದೆ. ಕೆ.ಸಿ. ಜನರಲ್ ಆಸ್ಪತ್ರೆಯ 57 ವಾರ್ಡ್ ಗಳಲ್ಲಿ ಜನಾರೋಗ್ಯ ಕೇಂದ್ರ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ - ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ 'ಭರ್ಜರಿ ಗುಡ್ ನ್ಯೂಸ್'..!

ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 33 ಕೋಟಿ ರೂಪಾಯಿಗಳನ್ನು ನೀಡಲಾಗಿದೆ‌.‌ 

ಬೆಂಗಳೂರು ಬಗಿಲಲ್ಲಿ ಇರುವ ನಂದಿಬೆಟ್ಟ ಹಾಗೂ ಕೆಮಂನಗುಡ್ಡಿಯ ಪ್ರವಾಸು ಸ್ಥಳಗಳನ್ನು ಅಂತರರಾಷ್ಟ್ರೀಯ ಪರಿಸರ ಪ್ರವಾಸೋದ್ಯಮ ತಾಣವಾಗಿ ಏರ್ಪಡಿಸಲು ನಿರ್ಧರಿಸಲಾಗಿದೆ.

ಬೆಂಗಳೂರು ಉತ್ತರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದನ್ನು ನಿರ್ಮಿಸಲು ಬಜೆಟ್ ನಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು ಉಪನಗರ ರೈಲು ಅಭಿವೃದ್ಧಿಗೆ 15,767 ಕೋಟಿ ರೂಪಾಯಿ ಮೀಸಲು ಇಡಲಾಗಿದೆ‌. 6 ವರ್ಷದಲ್ಲಿ ಬೆಂಗಳೂರು ಸಬ್ ಅರ್ಬನ್ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ‌.

ಮೈಸೂರು ಲ್ಯಾಂಪ್ ವರ್ಕ್ಸ್ ನಿಯಮಿತಕ್ಕೆ ಸೇರಿದ‌ ಜಾಗದಲ್ಲಿ ಎಕ್ಸಪೀರಿಯನ್ಸ್ ಬೆಂಗಳೂರು (Bengaluru) ಕೇಂದ್ರ ಆರಂಭಿಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ - Karnataka Budget 2021: ಬಜೆಟ್ ನಿಂದ ನಿವೇಶನ ಜಾಗ ಖರೀದಿದಾರರಿಗೆ ಭರ್ಜರಿ ಸಿಹಿ ಸುದ್ದಿ..!

ಬೈಯಪ್ಪನಹಳ್ಳಿ ಎನ್‌ಜಿಇಎಫ್‌ನಲ್ಲಿ 105 ಎಕರೆ ಪ್ರದೇಶದಲ್ಲಿ ವೃಕ್ಷೋದ್ಯಾನ ಮಾಡಲು ಬಜೆಟ್ ಅನುಮೋದನೆ ಸಿಕ್ಕಿದೆ.

ಕೋರಮಂಗಲ ಕಣಿವೆ ರಾಜಕಾಲುವೆ ಅಭಿವೃದ್ಧಿಗೆ 169 ಕೋಟಿ ರೂಪಾಯಿಗಳನ್ನು ನೀಡಲಾಗಿದೆ.

ವಿಮಾನ ನಿಲ್ದಾಣದ ಪಕ್ಕದಲ್ಲಿ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಸ್ಥಾಪಿಸಲು ಬಜೆಟ್ ಅನುಮೋದನೆ ಸಿಕ್ಕಿದೆ‌.

ಡಿಸೆಂಬರ್ 2022ರ ಒಳಗೆ 41ಕಿ.ಮೀ. ಉದ್ದದ ಮತ್ತೊಂದು ಮೆಟ್ರೋ ಕಾಮಗಾರಿ ಮಾರ್ಗ ನಿರ್ಮಿಸಬೇಕೆಂದು ತೀರ್ಮಾನಿಸಲಾಗಿದೆ.

ಇದನ್ನೂ ಓದಿ - Karnataka budget 2021: ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸಭಾತ್ಯಾಗ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News