40% ಆರೋಪಕ್ಕೆ ಕಾಂಗ್ರೆಸ್ ನವರು ಏನು ದಾಖಲೆ ಕೊಟ್ಟಿದ್ದರು: ಬಸವರಾಜ ಬೊಮ್ಮಾಯಿ

ಎಲ್ಲಾ ವರ್ಗದ ಜನರಿಗೆ ಭ್ರಷ್ಟಾಚಾರದ ಬಿಸಿ ಮುಟ್ಟಿದೆ. ಮುಖ್ಯಮಂತ್ರಿಗಳ ವರ್ತನೆ ಭ್ರಷ್ಟಾಚಾರ ಮುಚ್ಚಿ ಹಾಕುವ ಪ್ರಯತ್ನ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ. 

Written by - Prashobh Devanahalli | Edited by - Ranjitha R K | Last Updated : Jan 6, 2025, 01:21 PM IST
  • ರಾಜ್ಯದಲ್ಲಿ ಗಾಳಿಗೆ ತೆರಿಗೆ ಹಾಕುವ ದಿನಗಳು ದೂರ ಇಲ್ಲ
  • ರಾಜ್ಯ ಸರ್ಕಾರದ ವಿರುದ್ದ ಬಸವರಾಜ ಬೊಮ್ಮಾಯಿ ಆಕ್ರೋಶ
  • ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳಕುತ್ತಿದೆ - ಬೊಮ್ಮಾಯಿ
40% ಆರೋಪಕ್ಕೆ ಕಾಂಗ್ರೆಸ್ ನವರು ಏನು ದಾಖಲೆ ಕೊಟ್ಟಿದ್ದರು: ಬಸವರಾಜ ಬೊಮ್ಮಾಯಿ title=

ಹುಬ್ಬಳ್ಳಿ : ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ, ನಮ್ಮ ಆಡಳಿತದಲ್ಲಿ 40 % ಸರಕಾರ ಎಂದರಲ್ಲ ಆವಾಗ ಏನು ದಾಖಲೆ ಕೊಟ್ಟಿದ್ದರು. ಇದುವರೆಗೂ ದಾಖಲೆ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸರಕಾರ ಯಾವ ರೀತಿ ನಡೆದುಕೊಳ್ಳತ್ತಿದೆ ಅಂತಾ ಗೊತ್ತು. ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳಕುತ್ತಿದೆ. ಯಾವುದೇ ಅಭಿವೃದ್ಧಿ ಕೆಲಸ ಇಲ್ಲ. ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಯಾವುದೇ ಇಲಾಖೆಯಲ್ಲಿ ಕೆಲಸ ಆಗತ್ತಿಲ್ಲ. ಜನಸಾಮಾನ್ಯರು, ಗುತ್ತಿಗೆದಾರರು, ಎಲ್ಲಾ ವರ್ಗದ ಜನರಿಗೆ ಭ್ರಷ್ಟಾಚಾರದ ಬಿಸಿ ಮುಟ್ಟಿದೆ. ಮುಖ್ಯಮಂತ್ರಿಗಳ ವರ್ತನೆ ಭ್ರಷ್ಟಾಚಾರ ಮುಚ್ಚಿ ಹಾಕುವ ಪ್ರಯತ್ನ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ. 

ಇದನ್ನೂ ಓದಿ :  ಬೆಂಗಳೂರಿನಲ್ಲಿ "ಎರಡು" ಮಕ್ಕಳಲ್ಲಿ ಮಾನವ ಮೆಟಾಪ್ನ್ಯೂಮೊವೈರಸ್ (HMPV) ಪ್ರಕರಣಗಳು ಪತ್ತೆ

ಬಿಜೆಪಿ ಯೋಜನೆಗಳು :
ನಾವು ಗ್ಯಾರಂಟಿ ಜಾರಿ ಮಾಡಿದ್ದೇವೆ ನೀವು ಏನು ಮಾಡಿದ್ದೀರಿ ಎನ್ನುವ ಕಾಂಗ್ರೆಸ್ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವಧಿಯಲ್ಲಿ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಯೋಜನೆ ಜಾರಿ ಮಾಡಿದ್ದೇವೆ‌. ಹೆಣ್ಣು ಮಗು ಹುಟ್ಟಿದರೆ ಭಾಗ್ಯಲಕ್ಷೀ ಯೋಜನೆ ಜಾರಿ ಮಾಡಿದ್ದೇವೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದೇವೆ. ಇವೆಲ್ಲವನ್ನು ಕಾಂಗ್ರೆಸ್ ಕೊಟ್ಟಿದಿಯಾ ಎಂದು ಮರು ಪ್ರಶ್ನೆ ಮಾಡಿದ್ದಾರೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಸಾಕಷ್ಟು ಸೌಲಭ್ಯ ಒದಗಿಸಿ ಕೊಟ್ಟಿದ್ದೇವೆ.   ಇವರೇನು ಮಾಡಿದ್ದಾರೆ? ಒಂದೇ ಒಂದು ರಸ್ತೆ ಸರಿ ಇಲ್ಲ ಎಂದು ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಾಂಗ್ರೆಸ್ ಅಂಬೇಡ್ಕರ್ ವಿರೋಧಿ : 
ಡಾ.ಅಂಬೇಡ್ಕರ್ ಬದುಕಿದ್ದಾಗ ಕಾಂಗ್ರೆಸ್ ಹೇಗೆ ನಡೆದುಕೊಂಡಿದೆ ಅನ್ನುವುದು ಇವತ್ತಿನ ಯುವ ಜನತೆಗೆ ಬಹಿರಂಗವಾಗಿದೆ. ಸಂಸತ್ತಿನಲ್ಲಿ ಎರಡು ದಿನ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ಸಂವಿಧಾನ ವಿರೋಧಿ ಹಾಗೂ ಅಂಬೇಡ್ಕರ್ ವಿರೋಧಿ ಅನ್ನುವುದು ಸ್ಪಷ್ಟವಾಗಿದೆ. ತಾವು ಮಾಡಿರುವ ಅಪರಾಧವನ್ನು ಮುಚ್ಚಿ ಹಾಕಿಕೊಳ್ಳಲು ಅಮಿತ್ ಶಾ ಅವರ ಹೇಳಿಕೆಯನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ.ಅವರಿಗೆ ಅಂಬೇಡ್ಕರ್ ಬಗ್ಗೆ ಗೌರವ ಇದ್ದರೆ, ಮೊದಲು ಅಂಬೇಡ್ಕರ್ ಗೆ ಅವರ ಹಿರಿಯರು ಮಾಡಿರುವ ಅಪಮಾನಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲಿ ಎಂದು ಹೇಳಿದರು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಜನ ವಿರೋಧಿ ತೀರ್ಮಾನ : 
ಬಸ್ ದರ ಏರಿಕೆ ಜನ ವಿರೋಧಿ ತೀರ್ಮಾನ, ಜನರೇ ಈ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಅವರು ಶಕ್ತಿ ಯೋಜನೆ ಮಾಡಿ ಅದಕ್ಕೆ ನೀಡಬೇಕಾದ ಹಣ ಸರಿಯಾಗಿ ನೀಡುತ್ತಿಲ್ಲ. ಆ ಯೋಜನೆಯಿಂದ ಯುವಜನತೆಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹೆಚ್ಚಿನ ಬಸ್ ಗಳನ್ನೂ ನೀಡುತ್ತಿಲ್ಲ. ನಾನು ಸಿಎಂ ಆಗಿದ್ದಾಗ ಘೋಷಣೆ ಮಾಡಿರುವ ಬಸ್ ಗಳೇ ಈಗ ಬರುತ್ತಿವೆ. ಸಾಲ ಅವರ ಕಾಲದಿಂದಲೂ ಇದೆ. ಕೊವಿಡ್ ಸಂದರ್ಭದಲ್ಲಿ ತೊಂದರೆ ಆದಾಗ ಯಡಿಯೂರಪ್ಪ ಅವರು ಸಹಾಯ ಮಾಡಿದ್ದರು. ನಮ್ಮ ಕಾಲದಲ್ಲಿ ಯಾವುದೇ ಹೊರೆಯಾಗದಂತೆ ನೋಡಿಕೊಂಡಿದ್ದೇವು. ಇವರು ಡಿಸೇಲ್ ದುಡ್ಡು ಕಟ್ಟಲು ಆಗದ ಪರಿಸ್ಥಿತಿ ತಂದಿದ್ದಾರೆ. ಅವರು ಗ್ಯಾರೆಂಟಿ ಯೋಜನೆಗಳಿಗೆ ಸರಿಯಾಗಿ ಸಂಪನ್ಮೂಲ ಕ್ರೋಢಿಕರಣ ಮಾಡಲಾಗದೇ ಜನರ ಮೇಲೆ ತೆರಿಗೆ ಭಾರ ಹಾಕುತ್ತಿದ್ದಾರೆ. ಕೇವಲ ಸಾರಿಗೆ ದರ ಹೆಚ್ಚಳವಲ್ಲ, ನೀರಿನ ದರ ಹೆಚ್ಚಳ, ವಿದ್ಯುತ್ ದರ ಹೆಚ್ಚಳ, ಹಾಲಿನ ದರ ಈಗಾಗಲೇ ಹೆಚ್ಚಳ ಮಾಡಿದ್ದಾರೆ.ಸ್ಟ್ಯಾಂಪ್ ಡ್ಯೂಟಿ, ಮೋಟರ್ ವೆಹಿಕಲ್ ತೆರಿಗೆ, ಪೆಟ್ರೋಲ್ ಡಿಸೇಲ್ ತೆರಿಗೆ ಹೆಚ್ಚಳ ಮಾಡಿದ್ದಾರೆ. ಜನಸಾಮಾನ್ಯರು ಬಳಸುವ ಜಲ್ಲಿಕಲ್ಲಿನ ಮೇಲೆ ತೆರಿಗೆ, ಪಶ್ಚಿಮ ಘಟ್ಟದಿಂದ ಬರುವ ನೀರಿನ ಮೇಲೆ ತೆರಿಗೆ ಹಾಕಲು ಯೋಚನೆ ಮಾಡಿದ್ದಾರೆ. ಗಾಳಿಗೆ ತೆರಿಗೆ ಹಾಕುವ ದಿನಗಳು ದೂರ ಇಲ್ಲ ಎದ್ನು ಆರೋಪಿಸಿದ್ದಾರೆ. 

ವಿತಂಡವಾದ
ಬಸ್ ದರ ಏರಿಕೆಗೂ ರೈಲ್ವೆ ದರ ಏರಿಕೆಗೂ ಹೋಲಿಕೆ ಮಾಡಿ ವಿತಂಡವಾದ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿಗಳು ನಮ್ಮ ರಾಜ್ಯದ ಸಮಸ್ಯೆ ಬಗ್ಗೆ ಮಾತನಾಡಲಿ. ರಾಜ್ಯದಲ್ಲಿ ರಸ್ತೆ ಗುಂಡಿಗಳು ಬಿದ್ದಿವೆ. ಚಂದ್ರನ ಮೇಲೂ ಗುಂಡಿಗಳಿವೆ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News