ತುಮಕೂರು: ಸೋಮಣ್ಣ ವಸತಿ ಸಚಿವರಾಗಿದ್ದ ಸಂದರ್ಭದಲ್ಲಿ ಒಂದೇ ಒಂದು ಮನೆ ಬಡವರಿಗೆ ಹಂಚಿಕೆ ಮಾಡಿಲ್ಲ. ಒಂದೇ ಒಂದು ಮನೆ ಬಡವರಿಗೆ ಕಟ್ಟಿಸಿದ್ದ ನಿದರ್ಶನವಿದ್ದರೆ ಅದರ ದಾಖಲೆ ಬಡವರ ಮುಂದಿಟ್ಟು ಕೆಲಸಗಾರ ಎಂದು ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.
ತುಮಕೂರು ಲೋಕಸಭಾ ಕ್ಷೇತ್ರದ ಕೆಬಿ ಕ್ರಾಸ್‌ನಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿಯಾದ ಮುದ್ದಹನುಮೇಗೌಡ ಅವರಿಗೆ ಮತ ನೀಡಿ ಆಶೀರ್ವದಿಸುವಂತೆ ಅವರು ಮನವಿ ಮಾಡಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಬಿಜೆಪಿ ಸದಸ್ಯರು ಆಯ್ಕೆಯಾಗಿದ್ದರು. ಅದರಲ್ಲಿ ಬಸವರಾಜ್ ಕೂಡ ಒಬ್ಬರು. ಬರಗಾಲ ಬಂದರೂ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಕರ್ನಾಟಕಕ್ಕೆ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ ಹಣವನ್ನೂ ಕೊಡಲಿಲ್ಲ. ಅವರೇ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಕೊಡುತ್ತೇವೆ ಎಂದು ಒಂದು ರೂಪಾಯಿ ಕೊಡಲಿಲ್ಲ. ಕರ್ನಾಟಕಕ್ಕೆ ಇಷ್ಟೆಲ್ಲಾ ಅನ್ಯಾಯವಾಗಿದೆ ಎಂದು ದೂರಿದರು.
ಇದನ್ನೂ ಓದಿ: ಬಿಜೆಪಿ ಭರವಸೆಗಳನ್ನು ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ
ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ? ಮಾತನಾಡದಿದ್ದರೆ ಇವರು ಲೋಕಸಭೆಗೆ ಯಾಕೆ ಹೋಗಬೇಕು? ಎಂದು ಪ್ರಶ್ನಿಸಿದರು.
ಸೋಮಣ್ಣನವರನ್ನು ಲೋಕಸಭೆಗೆ ಕಳಿಸಿದರೆ, ನಿಮ್ಮ ಸಮಸ್ಯೆಗಳನ್ನು ಪ್ರಸ್ತಾಪ ಮಾಡುತ್ತಾರೆಯೇ? ನಿಮ್ಮ ಪರವಾಗಿ ಧ್ವನಿ ಎತ್ತುತ್ತಾರೆಯೇ? ನರೇಂದ್ರ ಮೋದಿ ಅವರ ಮುಂದೆ ನಿಲ್ಲಲು ಧೈರ್ಯ ಇದೆಯೇ? ಎಲ್ಲಾ ಸಂಸದರು ನರೇಂದ್ರ ಮೋದಿ ಅವರನ್ನು ಕಂಡರೆ ಗಡ ಗಡ ಎಂದು ನಡುಗುತ್ತಾರೆ. ಇಂಥವರನ್ನು ಲೋಕಸಭೆಗೆ ಕಳಿಸಿದರೆ ಸಮಸ್ಯಗೆ ಪರಿಹಾರ ಸಿಗುವುದೇ? 27 ಜನ ಸಂಸದರಿಂದ ಕರ್ನಾಟಕದ ಜನರ ಹಿತವನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಅದಕ್ಕಾಗಿ ಸೋಮಣ್ಣ ಅವರನ್ನು ಯಾವ ಕಾರಣಕ್ಕೂ ಬೆಂಬಲಿಸಬಾರದು ಎಂದು ಆಗ್ರಹಿಸಿದರು.
ಮುದ್ದಹನುಮೇಗೌಡರು 2014 ರಿಂದ 2019 ರವರೆಗೆ ಲೋಕಸಭಾ ಸದಸ್ಯರಾಗಿದ್ದರು. ಜನರ ಧ್ವನಿಯಾಗಿ 50 ವರ್ಷಗಳ ಕಾಲ ನಿಮ್ಮ ಧ್ವನಿಯಾಗಿ ಸಮರ್ಥವಾಗಿ ಪ್ರತಿನಿಧಿಸಿದ್ದಾರೆ. ಕೊಬ್ಬರಿ ರೈತರು ಹಾಗೂ ಎಲ್ಲರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಕರ್ನಾಟಕದ ಅಭಿವೃದ್ಧಿ ಬಗ್ಗೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿ ಪರಿಹಾರ ಕೊಡಿಸುವ ಕೆಲಸವನ್ನು ಮಾಡಿದ್ದರು ಎನ್ನುವುದು ಇತಿಹಾಸ. ಇಂಥವರನ್ನು ಕಳಿಸಬೇಕೋ ಅಥವಾ ಬಾಯಿ ಬಿಡದವರನ್ನು ಕಳಿಸಬೇಕೊ ಎಂದು ತೀರ್ಮಾನ ಮಾಡಬೇಕು ಎಂದು ಮನವಿ ಮಾಡಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವಾದ ಇಂದು ಅವರನ್ನು ಸ್ಮರಿಸಿದ್ದೇವೆ.ಹೆಣ್ಣುಮಕ್ಕಳ ಪ್ರಗತಿಯಾಗದೆ ಈ ಸಮಾಜದಲ್ಲಿ ಪ್ರಗತಿ ಸಾಧ್ಯವಿಲ್ಲ, ಅವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು. ರೈತರಿಗೆ, ಹಿಂದುಳಿದವರಿಗೆ, ಅಸಮಾನತೆಯಿಂದ ನರಳುವ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಿದಾಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ. ಸಮಾನತೆಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎನ್ನುವುದು ಅವರ ಆಶಯವಾಗಿತ್ತು ಎಂದು ಹೇಳಿದರು.
ಇದನ್ನೂ ಓದಿ: ಮಂಡ್ಯ ಅಖಾಡಕ್ಕೆ ಇಂದು ಮಾಜಿ ಪ್ರಧಾನಿ ಎಂಟ್ರೀ
ನಮ್ಮ ದೇಶದ ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆಗೆ ಸರಿಹೊಂದುವ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಸ್ವಾತಂತ್ರ್ಯ, ಸಮಾನತೆ , ಭ್ರಾತೃತ್ವದ ತತ್ವಗಳನ್ನು ಸ್ಪಷ್ಟವಾಗಿ ಪ್ರತಿಪಾದಿಸಿದ್ದಾರೆ. ಸಮಾನತೆ ಎಲ್ಲರಿಗೂ ದೊರಕಬೇಕು.ಎಲ್ಲಾರೂ ಒಂದು ತಾಯಿಯ ಮಕ್ಕಳಂತೆ ಬದುಕುವ ವಾತಾವರಣ ನಿರ್ಮಾಣವಾಗಬೇಕು. ಇದನ್ನೇ ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕೆಂದು ಹೇಳಿದ್ದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುಟ್ಟರಂಗಶೆಟ್ಟಿ ಹಾಗೂ ನನ್ನ ವಿರುದ್ಧ ಸೋತ ವಿ.ಸೋಮಣ್ಣ ಅವರನ್ನು ಇಲ್ಲಿಗೆ ಕರೆದುಕೊಂಡು ಬಂದು ನಿಲ್ಲಿಸಿದ್ದಾರೆ. ಸೋಮಣ್ಣ ವಸತಿ ಸಚಿವರಾಗಿದ್ದ ಸಂದರ್ಭದಲ್ಲಿ ಒಂದೇ ಒಂದು ಮನೆ ಬಡವರಿಗೆ ಹಂಚಿಕೆ ಮಾಡಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ 14.46 ಲಕ್ಷ ಮನೆಗಳನ್ನು ಕಟ್ಟಿಸಿದ್ದೇವೆ. ಸೋಮಣ್ಣ ಒಂದೇ ಒಂದು ಮನೆ ಬಡವರಿಗೆ ಕಟ್ಟಿಸಿದ್ದ ನಿದರ್ಶನವಿದ್ದರೆ ಅದರ ದಾಖಲೆ ಬಡವರ ಮುಂದಿಟ್ಟು ಕೆಲಸಗಾರ ಎಂದು ಹೇಳಲಿ ಎಂದು ಸವಾಲು ಹಾಕಿದರು.
ಬಿಜೆಪಿಯವರ ಮನೆದೇವರೇ ಸುಳ್ಳು. ರಾಜ್ಯದಲ್ಲಿ 2019 ರಿಂದ 2023ರವರೆಗೆ ಬಿಜೆಪಿ ನಾಯಕರು ಕೇವಲ ಲೂಟಿ ಮಾಡಿದ್ದಾರೆ. ಬಡವರಿಗೆ ಮನೆ ಕಟ್ಟಿಕೊಡಲು ವಿಫಲವಾದ ಬಿಜೆಪಿಯ ವಿ.ಸೋಮಣ್ಣ ಲೋಕಸಭೆಯಲ್ಲಿ ಏನು ಮಾಡುತ್ತಾರೆ. ಮುದ್ದು ಹನುಮೇಗೌಡರು ಪ್ರಾಮಾಣಿಕ ವ್ಯಕ್ತಿಯಾಗಿದ್ದು, ಹಿಂದುಳಿದ, ದಲಿತರ, ರೈತರ ಹಾಗೂ ಬಡವರ ಪರ ನಾಯಕರಾಗಿದ್ದಾರೆ. ರಾಜ್ಯದ ಧ್ವನಿಯಾಗಿ ಲೋಕಸಭೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಾರೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.
ಕ ನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.