ವಾರಾಂತ್ಯದ ಕರ್ಪ್ಯೂನಲ್ಲಿ ಯಾವುದೆಲ್ಲಾ ತೆರೆದಿರುತ್ತದೆ? ಇಲ್ಲಿವೆ ಮಾರ್ಗಸೂಚಿಗಳು

ಸಾರ್ವಜನಿಕರು ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಚಡುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 05 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ.

Written by - Zee Kannada News Desk | Last Updated : Jan 7, 2022, 02:47 PM IST
  • ಸಾರ್ವಜನಿಕರು ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಚಡುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 05 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ.
ವಾರಾಂತ್ಯದ ಕರ್ಪ್ಯೂನಲ್ಲಿ  ಯಾವುದೆಲ್ಲಾ ತೆರೆದಿರುತ್ತದೆ? ಇಲ್ಲಿವೆ ಮಾರ್ಗಸೂಚಿಗಳು title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಾರ್ವಜನಿಕರು ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಚಡುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 05 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ.

ಇದನ್ನೂ ಓದಿ: Bangalore Corona Cases Update: ಬೆಂಗಳೂರಿನಲ್ಲಿ ಕೊರೊನಾ ಮಹಾಸ್ಪೋಟ

ವಾರಾಂತ್ಯದ ಕರ್ಪ್ಯೂ ಮಾರ್ಗಸೂಚಿಗಳು: 

1. ತುರ್ತು, ಅತ್ಯಾವಶ್ಯಕ ಸೇವೆಗಳು ಮತ್ತು ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಮುಂತಾದವುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸತಕ್ಕದ್ದು ಮತ್ತು ಅವುಗಳ ಅಧಿಕಾರಿ, ಸಿಬ್ಬಂದಿಗೆ ಅನಿಬರ್ಂಧಿತ ಓಡಾಟಕ್ಕೆ ಅವಕಾಶ ನೀಡತಕ್ಕದ್ದು.
2. ಎಲ್ಲಾ ಸಾರ್ವಜನಿಕ ಉದ್ಯಾನಗಳು ಮುಚ್ಚಿರತಕ್ಕದ್ದು.
3. ಮಾಹಿತಿ ತಂತ್ರಜ್ಞಾನ ಉದ್ದಿಮೆಗಳು ಒಳಗೊಂಡಂತೆ ಎಲ್ಲಾ ಉದ್ದಿಮೆಗಳ ಕಾರ್ಯಾಚರಣೆಗೆ ಕಫ್ರ್ಯೂನಿಂದ ವಿನಾಯತಿ ನೀಡಿದೆ. ನೌಕರರು ಆಯಾ ಸಂಘ, ಸಂಸ್ಥೆಗಳು ನೀಡುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸುವ ಮೂಲಕ ಸಂಚರಿಸಲು ಅನುಮತಿಸುವುದು.
4. ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುವ ರೋಗಿಗಳು, ಅವರ ಪರಿಚಾರಕರು, ವ್ಯಕ್ತಿಗಳಿಗೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಉದ್ದೇಶಿಸಿರುವ ವ್ಯಕ್ತಿಗಳಿಗೆ ಕನಿಷ್ಠ ರುಜುವಾತನ್ನು ಹಾಜರುಪಡಿಸಿ ಸಂಚರಿಸಲು ಅನುಮತಿಸತಕ್ಕದ್ದು.
5. ಬೇಕರಿ, ಆಹಾರ, ದಿನಸಿ, ಹಣ್ಣು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತುಗಳು, ಮಾಂಸ ಮತ್ತು ಮೀನು, ಪಶು ಆಹಾರದ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಅನುಮತಿಸಿದೆ. ಸಾರ್ವಜನಿಕ ವಿತರಣೆಯ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಿದೆ. ಜನರು ತಮ್ಮ ಮನೆಯ ಹೊರಗೆ ಓಡಾಡುವುದನ್ನು ಕಡಿಮೆ ಮಾಡುವುದಕ್ಕಾಗಿ 24x7 ಅವಧಿಯಲ್ಲಿ ಸಾಮಗ್ರಿಗಳನ್ನು ಮನೆಮನೆಗೆ ವಿತರಿಸಲು (Home Delivery) ಪೆÇ್ರೀತ್ಸಾಹಿಸತಕ್ಕದ್ದು. ಈ ಎಲ್ಲಾ ಕಾರ್ಯಾಚರಣೆಗಳು ಕೋವಿಡ್-19ರ ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಕ್ಕೆ ಒಳಪಟ್ಟಿರತಕ್ಕದ್ದು.
6. ರೆಸ್ಟೋರೆಂಟ್ ಮತ್ತು ಹೋಟೆಲ್‍ಗಳಲ್ಲಿ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮಾತ್ರ ಅನುಮತಿಸತಕ್ಕದ್ದು.
7. ರೈಲುಗಳ ಸಂಚಾರಕ್ಕೆ ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿಸಿದೆ. ವಿಮಾನ, ರೈಲು ಮತ್ತು ರಸ್ತೆ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುವು ಮಾಡಿಕೊಡುವುದಕ್ಕಾಗಿ ವಿಮಾನ ನಿಲ್ದಾಣಗಳಿಗೆ, ರೈಲ್ವೆ ನಿಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ (ಕಂಪನಿಗಳು ನಿರ್ವಹಿಸುವ ಕ್ಯಾಬಗಳು ಸೇರಿದಂತೆ) ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಸಿಂಧುವಾದ ಪ್ರಯಾಣ ದಾಖಲೆ ಅಥವಾ ಟಿಕೇಟನ್ನು ಪ್ರದರ್ಶಿಸಿದ ನಂತರ ಮತ್ತು ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸುವ ಷರತ್ತಿಗೊಳಪಟ್ಟು ಮಾತ್ರವೇ ಅಂಹತ ಸಂಚಾರಕ್ಕೆ ಅನುಮತಿಸುವುದು.
8. ಕೋವಿಡ್-19 ಸಮುಚಿತ ವರ್ತನೆಗಳನ್ನು (CAB) ಹಾಗೂ ಅಸ್ತಿತ್ವದಲ್ಲಿರುವ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು ಹೊರಾಂಗಣಗಳಲ್ಲಿ 200 ಜನರು ಮೀರದಂತೆ ಹಾಗೂ ಒಳಾಂಗಣಗಳಲ್ಲಿ 100 ಜನರು ಮೀರದಂತೆ ಮದುವೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅನುಮತಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News