ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ? ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

H.D. Kumaraswamy: ಬೆಂಗಳೂರು -ಮೈಸೂರು ಮೂಲಸೌಕರ್ಯ ಕಾರಿಡಾರ್ (NICE) ಯೋಜನೆಗಾಗಿ ವಶಪಡಿಸಿಕೊಂಡ ಭೂಮಿಗೆ ವರ್ಷಗಳೇ ಕಳೆದಿದ್ದರೂ ಈವರೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡದ ಬಗ್ಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಆ ಬಗ್ಗೆ ರಾಜ್ಯ ಸರಕಾರ ಏನು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

Written by - Savita M B | Last Updated : Jan 12, 2025, 09:19 PM IST
  • ಪಕ್ಷದ ರಾಜ್ಯದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು
  • ಹಾಗಿದ್ದರೂ ಈ ಸರ್ಕಾರ ಗಾಢನಿದ್ರೆಯಲ್ಲಿದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ? ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ title=

ಬೆಂಗಳೂರು:  ಪಕ್ಷದ ರಾಜ್ಯದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ನೈಸ್ ಯೋಜನೆ ಹೆಸರಿನಲ್ಲಿ ರೈತರ ಭೂಮಿಯನ್ನು ಲೂಟಿ ಹೊಡೆಯಲಾಗಿದೆ. ಅಧಿಕಾರಿಗಳು, ಕೆಐಎಡಿಬಿ ಅಧಿಕಾರಿಗಳು, ಕಾಂಗ್ರೆಸ್ ನಾಯಕರು ಎಲ್ಲಾ ಸೇರಿ ರೈತರ ಭೂಮಿಯನ್ನು ಕೊಳ್ಳೆ ಹೊಡೆದಿದ್ದಾರೆ.

22 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಕೊಡದ ಅಧಿಕಾರಿಗಳ ಉದಾಸೀನತೆ, ಗಾಢನಿದ್ರೆಯ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಆದರೂ ಈ ರಾಜ್ಯ ಸರ್ಕಾರ ರೈತರ ಹಿತ ಮರೆತು ಗಾಢನಿದ್ರೆಯಲ್ಲಿದೆ. ರಸ್ತೆ ಮಾಡುತ್ತೇವೆ ಎಂದು ಹೇಳಿ ರೈತರ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ. ಟಿ.ಬಿ.ಜಯಚಂದ್ರ ಅವರ ನೇತೃತ್ವದ ಸದನ ಸಮಿತಿ ಇಡೀ ಯೋಜನೆಯನ್ನೇ ಸರ್ಕಾರ ವಶಕ್ಕೆ ಪಡೆದು ಉನ್ನತ ತನಿಖೆ ನಡೆಸಬೇಕು ಎಂದು ಶಿಫಾರಸು ಮಾಡಿತ್ತು. ಹಾಗಿದ್ದರೂ ಈ ಸರ್ಕಾರ ಗಾಢನಿದ್ರೆಯಲ್ಲಿದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಎರಡು ತಿಂಗಳ ಒಳಗಾಗಿ ರೈತರಿಗೆ ಪರಿಹಾರ ಕೊಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. 2019 ಏಪ್ರಿಲ್ 22ಕ್ಕೆ ಅನ್ವಯ ಆಗುವಂತೆ ರೈತರು ಕಳೆದುಕೊಂಡಿರುವ ಭೂಮಿಗೆ  ಮಾರುಕಟ್ಟೆ ಮೌಲ್ಯ ನಿರ್ಧರಿಸಬೇಕು ಎಂದು ಕೋರ್ಟ್ ಆದೇಶ ಕೊಟ್ಟಿದೆ. ಸುಪ್ರೀಂ ಕೋರ್ಟ್ ಆದೇಶ ಬಂದು ಎಷ್ಟು ದಿನವಾಯಿತು. ಸದಾ ಎಂ.ಬಿ.ಪಾಟೀಲ್ ಅವರೇ ಏನು ಮಾಡುತ್ತಿದ್ದೀರಿ? ಪರಿಹಾರ ಕೊಡಿಸದೆ ಏನು ಮಾಡುತ್ತೀರಿ? ಎಂದು ಖಾರವಾಗಿ ಪ್ರಶ್ನೆ ಮಾಡಿದರು ಕುಮಾರಸ್ವಾಮಿ ಅವರು.

ತೆರಿಗೆ ಪಾಲು; ಕಾಂಗ್ರೆಸ್ ಪಕ್ಷದ್ದೇ ತಪ್ಪು:
ಕೇಂದ್ರ ಸರಕಾರದ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಐವತ್ತು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಮಾಡಿರುವ ತಪ್ಪುಗಳೇ ಇದಕ್ಕೆಲ್ಲ ಕಾರಣ. ನೆಹರು ಅವರ ಕಾಲದಲ್ಲಿ ಹಣಕಾಸು ಆಯೋಗದ ಪರಿಕಲ್ಪನೆಯನ್ನು ಜಾರಿಗೆ ತಂದು ಅಲ್ಲಿಂದ ಆ ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ತೆರಿಗೆ ಪಾಲು ಕೊಡುವ ಪದ್ಧತಿ ಜಾರಿಗೆ ತರಲಾಯಿತು. ಈಗಲೂ ಅದೇ ಪದ್ಧತಿ ಆಧಾರದ ಮೇಲೆ ರಾಜ್ಯಕ್ಕೆ ತೆರಿಗೆ ಹಣವನ್ನು ಹಂಚಲಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ತೆರಿಗೆ ಅನ್ಯಾಯ ಎಂದು ಕೂಗಾಡುತ್ತಿರುವ ಕಾಂಗ್ರೆಸ್ಸಿಗರು, ಹಣಕಾಸು ಆಯೋಗದ ನಿಯಮಗಳಿಗೆ ತಿದ್ದುಪಡಿ ತಂದು ತೆರಿಗೆ ಹಂಚಿಕೆ ಪಾಲನ್ನು ಹೆಚ್ಚಿಸಿಕೊಳ್ಳಲು ಕ್ರಮ ವಹಿಸಬೇಕಿತ್ತು. ಮನಮೋಹನ್ ಸರಕಾರ ಹತ್ತು ವರ್ಷ ಇತ್ತು. ಆಗ ರಾಜ್ಯ ಕಾಂಗ್ರೆಸ್ ನಾಯಕರು ಏನು ಮಾಡುತ್ತಿದ್ದರು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News