ರೋಡ್ ಶೋ ಮಾಡಿದ ಪ್ರಧಾನಿ ಮೋದಿಯವರು ರಾಜೀನಾಮೆ ನೀಡುವರೇ?: ಕಾಂಗ್ರೆಸ್

ಬಿಜೆಪಿ ಪಕ್ಷದಲ್ಲಿ ನೈತಿಕ ಹೊಣೆ ಹೊರುವವರು ಯಾರು? ರಾಜೀನಾಮೆ ಕೊಡುವವರು ಯಾರು? ರೋಡ್ ಶೋ ಮಾಡಿದ ಪ್ರಧಾನಿ ಮೋದಿಯವರು ರಾಜೀನಾಮೆ ನೀಡುವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Written by - Puttaraj K Alur | Last Updated : May 26, 2023, 08:42 PM IST
  • ಜೆಡಿಎಸ್ ಪಕ್ಷದ ಚುನಾವಣಾ ಸೋಲಿಗೆ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರಾಜೀನಾಮೆ ಕೊಟ್ಟರಂತೆ
  • ಆಟಕ್ಕೂ-ಲೆಕ್ಕಕ್ಕೂ ಇಲ್ಲದ ಇಬ್ರಾಹಿಂರನ್ನು ಬಲಿಪಶು ಮಾಡುತ್ತಿರುವ ಕುಮಾರಸ್ವಾಮಿ ನೈತಿಕ ಹೊಣೆ ಹೊರುವುದಿಲ್ಲವೇ?
  • ರೋಡ್ ಶೋ ಮಾಡಿದ ಪ್ರಧಾನಿ ಮೋದಿ ರಾಜೀನಾಮೆ ನೀಡುವರೇ? ಎಂದು ಪ್ರಶ್ನಿಸಿದ ಕಾಂಗ್ರೆಸ್
ರೋಡ್ ಶೋ ಮಾಡಿದ ಪ್ರಧಾನಿ ಮೋದಿಯವರು ರಾಜೀನಾಮೆ ನೀಡುವರೇ?: ಕಾಂಗ್ರೆಸ್ title=
ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ. ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ ಮೂಲಕ ಅಬ್ಬರ ಪ್ರಚಾರ ನಡೆಸಿದ ಪ್ರಧಾನಿ ಮೋದಿಯವರು ರಾಜೀನಾಮೆ ನೀಡುವರೇ? ಎಂದು ಪ್ರಶ್ನಿಸಿದೆ.

ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಜೆಡಿಎಸ್ ಪಕ್ಷದ ಚುನಾವಣಾ ಸೋಲಿಗೆ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರಾಜೀನಾಮೆ ಕೊಟ್ಟರಂತೆ. ಆಟಕ್ಕೂ-ಲೆಕ್ಕಕ್ಕೂ ಇಲ್ಲದ ಇಬ್ರಾಹಿಂರನ್ನು ಬಲಿಪಶು ಮಾಡುತ್ತಿರುವ ಕುಮಾರಸ್ವಾಮಿ ನೈತಿಕ ಹೊಣೆ ಹೊರುವುದಿಲ್ಲವೇ?’ ಎಂದು ಕಾಂಗ್ರೆಸ್ ಕುಟುಕಿದೆ.

ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಮುಂದುವರಿಕೆ

‘ಅಂದಹಾಗೆ ಬಿಜೆಪಿ ಪಕ್ಷದಲ್ಲಿ ನೈತಿಕ ಹೊಣೆ ಹೊರುವವರು ಯಾರು? ರಾಜೀನಾಮೆ ಕೊಡುವವರು ಯಾರು? ರೋಡ್ ಶೋ ಮಾಡಿದ ಪ್ರಧಾನಿ ಮೋದಿಯವರು ರಾಜೀನಾಮೆ ನೀಡುವರೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪ್ರೇಮ ರಾಜಕಾರಣವೇ..?

‘ಪ್ರಕರಣ ದಾಖಲಿಸಿದ್ದು ದ್ವೇಷ ರಾಜಕಾರಣ ಎನ್ನುತ್ತಿರುವ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರೇ, ತಾವು ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಕೊಲೆಗೆ ಕರೆ ನೀಡಿದ್ದು "ಪ್ರೇಮ ರಾಜಕಾರಣ" ಎನಿಸಿಕೊಳ್ಳುತ್ತದೆಯೇ? ರಾಜ್ಯದ ಮುತ್ಸದ್ದಿ ನಾಯಕನನ್ನು ಕೊಲೆ ಮಾಡುವಂತೆ ಕರೆ ಕೊಟ್ಟರೂ ಸುಮ್ಮನಿದ್ದರೆ ಕಾನೂನು ಸಂವಿಧಾನಗಳಿಗೆ ಮಾಡುವ ಅಪಚಾರವಾಗಲಿದೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: President Of JDS Party: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿಸಿಎಂ ಇಬ್ರಾಹಿಂ ಮುಂದುವರಿಕೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News