ಡಿಸೆಂಬರ್ 10 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಈಗಾಗಲೇ ಬೆಳಗಾವಿಯಲ್ಲಿ ನಗರ ಪೊಲೀಸ್‌ ಇಲಾಖೆ ಸಿದ್ಧತೆ ಆರಂಭಿಸಿದೆ. 

Last Updated : Nov 14, 2018, 06:03 PM IST
ಡಿಸೆಂಬರ್ 10 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ title=

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 10 ರಿಂದ 21ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ದಿನಾಂಕಗಳನ್ನು ಮುಖ್ಯಮಂತ್ರಿ ಸಚಿವಾಲಯ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದೆ. 

ಕಳೆದ ಹಲವು ವರ್ಷಗಳಿಂದ ಚಳಿಗಾಲದ ಅಧಿವೇಶನವನ್ನು ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ನಡೆಸುತ್ತಾ ಬಂದಿದೆ. ಈ ಬಾರಿಯೂ ಸುಮಾರು 10 ದಿನಗಳ ಕಾಲ ಸುವರ್ಣ ವಿಧಾನಸೌಧದಲ್ಲಿ ಉಭಯ ಸದನಗಳ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ.

ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಈಗಾಗಲೇ ಬೆಳಗಾವಿಯಲ್ಲಿ ನಗರ ಪೊಲೀಸ್‌ ಇಲಾಖೆ ಸಿದ್ಧತೆ ಆರಂಭಿಸಿದೆ. ಬೈಕ್‌, ಕಾರು ಸೇರಿದಂತೆ ಬಂದೋಬಸ್ತ್‌ಗೆ ಬಳಸುವ ಎಲ್ಲ ಮಾದರಿ ವಾಹಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ. 

Trending News