ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ಬಿಜೆಪಿ ಪಕ್ಷದಲ್ಲಿದ್ದರೂ ನನಗೆ ಉತ್ತಮ ಸ್ನೇಹಿತರಾಗಿದ್ದರು. ಅವರ ಅಗಲಿಕೆ ವೈಯಕ್ತಿಯವಾಗಿ ದುಃಖ ತರಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.
Extremely sad to hear the news of the demise of Shri H.N.#AnanthKumar. He was without doubt one of the towering political talents of his generation – a sharp debater, who used knowledge, experience and wit to wonderful effect. I express my condolences to his family and colleagues pic.twitter.com/dSXtAsbXyX
— Dr. G Parameshwara (@DrParameshwara) November 12, 2018
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅನಂತ ಕುಮಾರ್ ನನಗೆ ಅತ್ಯಂತ ಆತ್ಮೀಯರು. ಆರು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಸಾಕಷ್ಟು ಜನ ಪರ ಕೆಲಸ ಮಾಡಿದ್ದಾರೆ. ಪಕ್ಷಾತೀತವಾಗಿ ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರೊಬ್ಬ ಸಜ್ಜನ ರಾಜಕಾರಣಿಯಾಗಿದ್ದರು. ರಾಜಕೀಯ ಸಿದ್ಧಾಂತ ಬೇರೆಯೇ ಇದ್ದರೂ ಸಾರ್ವಜನಿಕ ಬದುಕಿನಲ್ಲಿ ಮಾದರಿಯಾಗಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
ಬಹುಶಃ ಅವರ ಆರೋಗ್ಯದ ಬಗ್ಗೆ ಮೊದಲೇ ತಿಳಿದಿದ್ದರೆ ಇಂಥ ಅನಾಹುತವಾಗುತ್ತಿರಲಿಲ್ಲ. ಇತ್ತೀಚೆಗೆ ವಾಜಪೇಯಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಇಬ್ಬರು ಅಕ್ಕ ಪಕ್ಕ ಕುಳಿತಿದ್ದವು. ಆಗಲೂ ಅವರು ಆರೋಗ್ಯವಂತರಾಗಿಯೇ ಕಂಡರು. ಅವರ ಕೆಲಸವನ್ನು ಪಕ್ಷಾತೀತವಾಗಿ ಎಲ್ಲರೂ ಸ್ಮರಿಸುವಂಥದ್ದು. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಶೋಕ ವ್ಯಕ್ತಪಡಿಸಿದರು.