ಸಾರ್ವಜನಿಕ ಜೀವನದಲ್ಲಿ ಇರಲು ಯಡಿಯೂರಪ್ಪ ನಾಲಾಯಕ್: ಸಿದ್ದರಾಮಯ್ಯ ಟೀಕೆ

ಯಡಿಯೂರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Last Updated : Feb 11, 2019, 06:00 PM IST
ಸಾರ್ವಜನಿಕ ಜೀವನದಲ್ಲಿ ಇರಲು ಯಡಿಯೂರಪ್ಪ ನಾಲಾಯಕ್: ಸಿದ್ದರಾಮಯ್ಯ ಟೀಕೆ title=

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸಾರ್ವಜನಿಕ ಜೀವನದಲ್ಲಿ ಇರಲು ನಾಲಾಯಕ್ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪ ಅವರು ಶಾಸಕರ ಖರೀದಿ ಸಂಬಂಧ ಆಡಿಯೋ  ವಿಚಾರವಾಗಿ ಪ್ರತಿಕ್ರಿಯಿಸುತ್ತಾ ಅದು ತಮ್ಮ ಧ್ವನಿ ಅಲ್ಲ, ಮಿಮಿಕ್ರಿ ಮಾಡಲಾಗಿದೆ. ಒಂದು ವೇಳೆ ಅದು ನನ್ನದೇ ಧ್ವನಿ ಆಗಿದ್ದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಆದರೀಗ ಆ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದೇ ಸಂದರ್ಭದಲ್ಲಿ ಭಾನುವಾರ ಹುಬ್ಬಳ್ಳಿಗೆ ಆಗಮಿಸಿ ಭಾಷಣ ಮಾಡಿದ್ದ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ರೈತರ ಸಾಲ ಪೂರ್ಣ ಮನ್ನಾ ಮಾಡದೆ ಮೋಸ ಮಾಡಿದೆ ಎಂದು ದೂರುತ್ತಾರೆ. ಆದರೆ ಕೇಂದ್ರ ಸರ್ಕಾರ ಏಕೆ ರೈತರ ಸಾಲ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದರಲ್ಲದೆ, ಮೋದಿಗೆ ಸುಳ್ಳು ಹೇಳುವುದು ಬಿಟ್ಟು ಮತ್ತೇನೂ ಬರುವುದಿಲ್ಲ ಎಂದು ಟೀಕಿಸಿದರು.

Trending News