ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಯಡಿಯೂರಪ್ಪ

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ನೆಲಮಂಗಲದ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದರು.

Last Updated : Apr 14, 2018, 02:54 PM IST
ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಯಡಿಯೂರಪ್ಪ title=

ಬೆಂಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ನೆಲಮಂಗಲದ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದರು.

ನೆಲಮಂಗಲದ ಮೈಲನಹಳ್ಳಿಯ ಮಂಜುಳಾ ಮತ್ತು ನರಸಿಂಹಮೂರ್ತಿ ಅವರ ಮನೆಗೆ ಭೇಟಿ ನೀಡಿದ ಯಡಿಯೂರಪ್ಪ ಅವರು, ಅವರ ಮನೆಯಲ್ಲಿ ಇಡ್ಲಿ, ಉಪ್ಪಿಟ್ಟು ಸೇವನೆ ಮಾಡಿದರು. ಇವರೊಂದಿಗೆ ಸಿ.ಪಿ.ಯೋಗೇಶ್ವರ್​, ಎಂ.ಜಿ.ನಾಗರಾಜ್​ ಮತ್ತು ಸಚ್ಚಿದಾನಂದ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಅಂಬೇಡ್ಕರ್​ ಅವರ ಬಗ್ಗೆ ಜನರಿಗೆ ಪರಿಚಯಿಸುವ ಕೆಲಸವನ್ನು ಮೋದಿ ಮಾಡಿದ್ದಾರೆ. ಶಿಕ್ಷಣ, ಸಾಮಾಜಿಕ ಕ್ಷೇತ್ರದಲ್ಲಿ ದಲಿತ ಸಮುದಾಯದವರ ಜೊತೆ ತಾವು ಸದಾ ಇರುವುದಾಗಿಯೂ, ದಲಿತರ ಅಭಿವೃದ್ಧಿಗೆ ಶ್ರಮಿಸುವುದಾಗಿಯೂ ಯಡಿಯೂರಪ್ಪ ಹೇಳಿದರು.

Trending News