ಸ್ವಂತ ಉದ್ಯಮ ಪ್ರಾರಂಭಿಸಲು ನಿಮಗೊಂದು ಸುವರ್ಣಾವಕಾಶ..!

 ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ವತಿಯಿಂದ ಸಂಕಲ್ಪ ಯೋಜನೆಯಡಿಯಲ್ಲಿ ಪ್ರತಿಭಾನ್ವಿತರಿಗೆ ಕಿರುಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನ ಹಾಗೂ ಉತ್ತೇಜನ ಕಾರ್ಯಕ್ರಮವನ್ನು ಕರ್ನಾಟಕ ಕೌಶಲ್ಯಅಭಿವೃದ್ಧಿ ನಿಗಮವು ಮೈಸೂರಿನ ಸ್ಫೂರ್ತಿ ಪರ್ಫಾರ್ಮನ್ ಸಲ್ಯೂಷನ್ಸ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದೆ.

Written by - Zee Kannada News Desk | Last Updated : Feb 18, 2022, 08:17 PM IST
  • ಈ ಕಾರ್ಯಕ್ರಮದಡಿಯಲ್ಲಿ ಉದ್ಯಮ ಪ್ರಾರಂಭಿಸಲು ಸರ್ಕಾರದಿಂದ ಯಾವುದೇ ರೀತಿಯ ಸಹಾಯಧನ ಇರುವುದಿಲ್ಲ.ಕಾರ್ಯಕ್ರಮದಲ್ಲಿ ನೋಂದಣಿ ಮಾಡಿಕೊಂಡು ಭಾಗವಹಿಸಲು ಯಾವುದೇ ರೀತಿಯಾದ ಶುಲ್ಕವಿರುವುದಿಲ್ಲ.
ಸ್ವಂತ ಉದ್ಯಮ ಪ್ರಾರಂಭಿಸಲು ನಿಮಗೊಂದು ಸುವರ್ಣಾವಕಾಶ..! title=

ಬೆಂಗಳೂರು:  ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ವತಿಯಿಂದ ಸಂಕಲ್ಪ ಯೋಜನೆಯಡಿಯಲ್ಲಿ ಪ್ರತಿಭಾನ್ವಿತರಿಗೆ ಕಿರುಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನ ಹಾಗೂ ಉತ್ತೇಜನ ಕಾರ್ಯಕ್ರಮವನ್ನು ಕರ್ನಾಟಕ ಕೌಶಲ್ಯಅಭಿವೃದ್ಧಿ ನಿಗಮವು ಮೈಸೂರಿನ ಸ್ಫೂರ್ತಿ ಪರ್ಫಾರ್ಮನ್ ಸಲ್ಯೂಷನ್ಸ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದೆ.

ಕಿರು ಉದ್ಯಮ ಪ್ರಾರಂಭಿಸಲು ತಳಮಟ್ಟದ ಕಿರು ಉದ್ಯಮಿಗಳಿಗೆ ವಿವಿಧ ಕೌಶಲ್ಯಗಳನ್ನು ಕಲಿಯಲು ಮತ್ತು ವ್ಯವಹಾರ ಜ್ಞಾನವನ್ನು ಪಡೆಯಲು ಸಹಾಯ ಮಾಡುವುದು ಸರ್ಕಾರದ ಈ ವಿನೂತನ ಕಾರ್ಯಕ್ರಮ ಉದ್ದೇಶವಾಗಿದೆ.

ಇದನ್ನೂ ಓದಿ: By2Love: ಧನ್ವೀರ್‌-ಶ್ರೀಲೀಲಾ 'ಬೈ ಟು ಲವ್'ಗೆ ಪ್ರೇಕ್ಷಕ ಪ್ರಭು ಫಿದಾ.!

ಕಿರು ಉದ್ಯಮಿಗಳಿಗೆ ಬೇಕಾಗುವ ಜ್ಞಾನ, ಕೌಶಲ್ಯ ಮತ್ತು ವ್ಯವಹಾರ ಜ್ಞಾನವನ್ನು ಪಡೆಯಲು ಅಗತ್ಯವಿರುವ ತರಬೇತಿ, ಮಾರ್ಗದರ್ಶನ ಮತ್ತು ಸಂಬಂಧಪಟ್ಟ ಸಂಸ್ಥೆಗಳಲ್ಲಿ ನೋಂದಣಿ ಮಾಡಿಸಲು ಬೇಕಾಗುವ ಸಲಹೆಗಳನ್ನು ಹಾಗೂ ಬೇರೆ ಬೇರೆ ಕ್ಷೇತ್ರಗಳಲ್ಲಿ ಅನುಭವವಿರುವ ಪರಿಣಿತರು ಮತ್ತು ಮಾರ್ಗದರ್ಶಕರು ಉಚಿತವಾಗಿ ಮಾರ್ಗದರ್ಶನ ನೀಡಿ ಕಿರು ಉದ್ಯಮಿಗಳು ಯಶಸ್ವಿ ಉದ್ಯಮಿಗಳಾಗಲು ಸಹಕರಿಸುತ್ತಾರೆ.

ಈ ಕಿರು ಉದ್ಯಮಶೀಲತೆ ಕಾರ್ಯಕ್ರಮವು (NEP) ತಳಮಟ್ಟದ ಕಿರು ಉದ್ಯಮಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಮತ್ತು ಮಹಿಳೆಯರಿಗೆ ವಿಶೇಷ ಗಮನವನ್ನು ನೀಡುವ ಕಾರ್ಯಕ್ರಮವಾಗಿದೆ. ಉದ್ಯಮಶೀಲತೆಯನ್ನು ಪ್ರಾರಂಭಿಸುವ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಎದುರಾಗುವ ಹಲವಾರು ಸವಾಲುಗಳನ್ನು ಎದುರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಕ್ರೇಜಿಸ್ಟಾರ್ ರವಿಚಂದ್ರನ್ ಫ್ಯಾನ್ಸ್ ಗೆ ಗುಡ್ ನ್ಯೂಸ್.. ZEE5 ಒಟಿಟಿಯಲ್ಲಿ ಈ ದಿನದಂದು 'ದೃಶ್ಯ-2' ಸ್ಟ್ರೀಮಿಂಗ್!

ಈ ಕಾರ್ಯಕ್ರಮದಡಿಯಲ್ಲಿ ಉದ್ಯಮ ಪ್ರಾರಂಭಿಸಲು ಸರ್ಕಾರದಿಂದ ಯಾವುದೇ ರೀತಿಯ ಸಹಾಯಧನ ಇರುವುದಿಲ್ಲ.ಕಾರ್ಯಕ್ರಮದಲ್ಲಿ ನೋಂದಣಿ ಮಾಡಿಕೊಂಡು ಭಾಗವಹಿಸಲು ಯಾವುದೇ ರೀತಿಯಾದ ಶುಲ್ಕವಿರುವುದಿಲ್ಲ.

ಈ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಿಕೊಳ್ಳಲು ಹಾಗೂ ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ: 9741501631 ಹಾಗೂ ವೆಬ್‍ಸೈಟ್ www.kaushalkar.com/nep/ ಅಥವಾ ಇ-ಮೇಲ್: nepksdc@gmail.com ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News