ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ?

ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Last Updated : May 22, 2022, 11:09 AM IST
  • ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವಜೋಡಿ ಆತ್ಮಹತ್ಯೆ ಶಂಕೆ
  • ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಸುಟ್ಟು ಕರಕಲಾದ ಕಾರು ಪತ್ತೆ
  • ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಜೋಡಿಯಿಂದ ಕುಟುಂಬಸ್ಥರಿಗೆ ಮೆಸೇಜ್
ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ? title=
ಯುವಜೋಡಿ ಆತ್ಮಹತ್ಯೆ ಶಂಕೆ

ಉಡುಪಿ: ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಸುಟ್ಟು ಕರಕಲಾದ ಕಾರು ಪತ್ತೆಯಾಗಿದೆ. ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಅಗ್ನಿಗಾಹುತಿಯಾಗಿರುವ ಕಾರು ಪತ್ತೆಯಾಗಿದೆ.

ಇನ್ನು ಕಾರಿನಲ್ಲಿಯೇ ಸುಟ್ಟು ಕರಕಲಾಗಿರುವವರನ್ನು ಬೆಂಗಳೂರಿನ ಮುನಿಯಪ್ಪ ಲೇಔಟ್ ನಿವಾಸಿ ನಿವಾಸಿ ಯಶವಂತ ಯಾದವ್(23) ಮತ್ತು ಚೋಳನಾಯಕನಹಳ್ಳಿ ನಿವಾಸಿ ಜ್ಯೋತಿ(23) ಎಂದು ಗುರುತಿಸಲಾಗಿದೆ. ಕಳೆದ 3 ದಿನಗಳ ಹಿಂದೆ‌ ಇವರಿಬ್ಬರ ಬಗ್ಗೆ ನಾಪತ್ತೆ ಪ್ರಕರಣ ದಾಖಲಾಗಿತ್ತು. ನಿನ್ನೆ ಮಂಗಳೂರಿಗೆ ಬಂದು ಹುಸೇನ್ ಎಂಬುವರಿಂದ ಕಾರು ಬಾಡಿಗೆ ಪಡೆದುಕೊಂಡಿದ್ದರಂತೆ.

ಇದನ್ನೂ ಓದಿ: ಕಟ್ಟಡದಿಂದ ಬಿದ್ದ ಯುವತಿ ಸ್ಥಳದಲ್ಲೇ ಸಾವು: ರಕ್ಷಿಸಲು ಹೋದ ಯುವಕ ಹೇಳಿದ್ದು ಹೀಗೆ!

ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿಗಾಹುತಿಯಾಗಿದ್ದ ಕಾರನ್ನು ನೋಡಿ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಬೆಂಕಿ ನಂದಿಸಿದಾಗ ಸುಟ್ಟು ಕರಕಲಾದ ಇಬ್ಬರ ಶವಗಳು ಪತ್ತೆಯಾಗಿವೆ.

ಘಟನೆಯಲ್ಲಿ ಸ್ವಿಫ್ಟ್ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.  

ಆತ್ಮಹತ್ಯೆಗೂ ಮುನ್ನ ಕುಟುಂಬಸ್ಥರಿಗೆ ಮೆಸೇಜ್!

ಮೇ 18ರಂದು ಮಧ್ಯಾಹ್ನ ಮನೆಯಿಂದ ಈ ಜೋಡಿ ತೆರಳಿತ್ತು. ಮರುದಿನ ಅಂದರೆ ಮೇ 19ರಂದು ಹುಡುಗಿಯ ಪೋಷಕರು ಹಾಗೂ 20ರಂದು ಹುಡುಗನ ಪೋಷಕರು ನಾಪತ್ತೆಯಾಗಿರುವ ಬಗ್ಗೆ ಹೆಬ್ಬಾಳ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಈ ಜೋಡಿ ಕುಟುಂಬಸ್ಥರಿಗೆ ಮೆಸೇಜ್ ಮಾಡಿತ್ತು. ‘ನಾವು ಆತ್ಮಹತ್ಯೆ ಮಾಡಿಕೊಳ್ತಿದ್ದಿವಿ’ ಎಂದು ನಿನ್ನೆ ರಾತ್ರಿಯಷ್ಟೇ ಮೇಸೆಜ್ ಮಾಡಿದ್ದ ಜೋಡಿ ಆತ್ಮಹತ್ಯೆಗೆ ಶರಣಾಗಿದೆ.

ಇದನ್ನೂ ಓದಿ: ಮಹದೇವಪುರ ವ್ಯಾಪ್ತಿಯಲ್ಲೂ ರಾಜಕಾಲುವೆಗಳ ಒತ್ತುವರಿ.. ಶೀಘ್ರ ತೆರವಿಗೆ ಸೂಚನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News