ಸರಿಯಾದ ಸಮಯಕ್ಕೆ ಬಸ್ ಬಾರದೆ ಶಾಲಾ ವಿದ್ಯಾರ್ಥಿಗಳು ಪರದಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಕಳಿ ಗ್ರಾಮದಲ್ಲಿ ನಡೆದಿದೆ. ಸಂಜೆ ಶಾಲೆ ಬಿಟ್ಟರು ಸಂಜೆ ಸಮಯದಲ್ಲಿ ಸರಿಯಾದ ಸಮಯಕ್ಕೆ ಬಸ್ ಬಾರದ ಹಿನ್ನಲೆ ವಿದ್ಯಾರ್ಥಿಗಳು ರಾತ್ರಿವರೆಗೂ ಕಾದು ಬಳಿಕ ಗ್ರಾಮಸ್ಥರು ರಾಯಬಾಗ ಬಸ್ ಡಿಪೋ ಮ್ಯಾನೇಜರ್ ಗೆ ತರಾಟೆಗೆ ತೆಗೆದುಕೊಂಡ ಬಳಿಕ ಬಸ್ ಕಳುಹಿಸಿದ ಹಿನ್ನಲೆ ವಿದ್ಯಾರ್ಥಿಗಳು ಮನೆಗೆ ಸೇರುವಂತಾಗಿದೆ. ಕಳೆದ ಒಂದು ವಾರದಿಂದಲೂ ಇದೆ ಪರಿಸ್ಥಿತಿ ಇದ್ದು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ..
ಜಿದ್ದಾ ಜಿದ್ದಿನ ಅಖಾಡವಾಗಿ ಮಾರ್ಪಟ್ಟಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದೆ. ಇಂದು ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದ್ದು, ಬುಧವಾರ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ
ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅವರ ಪುತ್ರನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಆರ್ಯನ್ನಿಂದ ಅನಯಾ ಆಗಿ ಬದಲಾಗಿದ್ದಾರೆ.
ರಾಮನಗರದ ಸಮೀಪದ ಜಯಪುರ ಗ್ರಾಮದಲ್ಲಿರುವ ಶ್ರೀ ಚಾಮುಂಡೇಶ್ವರಿಯ ಪವಾಡ ಬಸಪ್ಪನ ಪುಣ್ಯಕ್ಷೇತ್ರದಲ್ಲಿ25 ಅಡಿ ಎತ್ತರದ ಕಪ್ಪು ವರ್ಣದಲ್ಲಿ ನಿರ್ಮಿಸಲಾದ ಶ್ರೀ ಚಾಮುಂಡೇಶ್ವರಿ ವಿಗ್ರಹ ಲೋಕಾರ್ಪಣೆ ಗೊಳಿಸಲಾಯಿತು.ವಿಗ್ರಹ ಲೋಕಾರ್ಪಣೆ ಹಿನ್ನಲೆಯಲ್ಲಿ ಬೆಳಗ್ಗೆಯಿಂದ ದೇವಾಲಯ ಆವರಣದಲ್ಲಿ ದೇಗುಲದ ಗುಡ್ಡಪ್ಪ ಸುಖೇಂದ್ರ ನೇತೃತ್ವದಲ್ಲಿ ಹೋಮ ಹವನ ಹಾಗು ದೇವಿಗೆ ಅಭಿಷೇಕ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯ ನೆರವೇರಿದವು. ರಾಜ್ಯದ ಹಲವು ಕಡೆಯಿಂದ ನೂರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು.ಭಕ್ತರಿಗೆ ಅನ್ನಸಂತಪರ್ಣೆ ಕೂಡ ನಡೆಯಿತು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತೆರೆದುಕೊಂಡ ಮೊದಲ ಹಗರಣ ಅಂದ್ರೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬೆಳಕಿಗೆ ಬಂದ 187 ಕೋಟಿ ರೂಪಾಯಿ ಹಗರಣ. ಚಂದ್ರಶೇಖರ್ ಎಂಬ ಅಧಿಕಾರಿಯ ಆತ್ಮಹತ್ಯೆಯ ಮೂಲಕ ಬೆಳಕಿಗೆ ಬಂದ ಈ ಹಗರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ 89 ಕೋಟಿ ದುರ್ಬಳಕೆ ಕೇಸ್ ಗೆ ಸಂಬಂಧಪಟ್ಟಂತೆ ಇಂದು ಮಹತ್ವದ ತೀರ್ಪು ಹೊರಬೀಳುವ ಸಾಧ್ಯತೆಗಳಿದೆ.
ಬಹಿರಂಗ ಪ್ರಚಾರದ ಕೊನೆಯ ಗಳಿಗೆಯಲ್ಲಿ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ನೀಡಿದ ಹೇಳಿಕೆ ಸಾಕಷ್ಟು ಸದ್ದು ಗದ್ದಲಕ್ಕೆ ಕಾರಣವಾಗುತ್ತಿದೆ. ಕುಮಾರಸ್ವಾಮಿಯವರನ್ನು ನಾನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು. ಅವರು ನನ್ನನ್ನು ಕುಳ್ಳ ಅಂತಿದ್ರು” ಎಂದು ಜಮೀರ್ ಅಹ್ಮದ್ ಖಾನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.