Food For Men's Health: ಒತ್ತಡ ಭರಿತ ಜೀವನಶೈಲಿ ಮತ್ತು ಸರಿಯಾಗಿ ಆಹಾರ ಕ್ರಮವನ್ನು ಅನುಸರಿಸದೇ ಇರುವುದು ಪುರುಷರ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಅದರಲ್ಲೂ ಮುಖ್ಯವಾಗಿ ಅವರ ಲೈಂಗಿಕ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಜೀವನಶೈಲಿಯಲ್ಲಿ ಬದಲಾವಣೆ ಮಾಡದಿದ್ದರೆ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ವೇಗವಾಗಿ ಕಡಿಮೆಯಾಗಲು ಆರಂಭವಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ವೀರ್ಯದ ಗುಣಮಟ್ಟ ಮತ್ತು ಪ್ರಮಾಣವನ್ನು ಹೆಚ್ಚಿಸಲು, ಜನರು ವಿವಿಧ ರೀತಿಯ ಔಷಧಿಗಳ ಮೊರೆ ಹೋಗುತ್ತಾರೆ. ಅದಾಗ್ಯೂ, ಕೆಲವರಿಗೆ ಔಷಧಿಗಳಿಂದ ಹೆಚ್ಚು ಪ್ರಯೋಜನವಾಗುವುದಿಲ್ಲ. ಇಂತಹ ಸಂದರ್ಭಗಳಲ್ಲಿ ನೀವು ಒಣದ್ರಾಕ್ಷಿ, ಖರ್ಜೂರ ಮತ್ತು ಅಂಜೂರದ ಹಣ್ಣುಗಳನ್ನು ಸೇವಿಸಬಹುದು. ಈ ಮೂರು ಆಹಾರ ಪದಾರ್ಥಗಳು ಪುರುಷರ ಆರೋಗ್ಯಕ್ಕೆ (Men's Health) ಅದ್ಭುತವಾದ ಪ್ರಯೋಜನಗಳನ್ನು ನೀಡುತ್ತವೆ ಎಂದು ಹೇಳಲಾಗುತ್ತದೆ.
ಪುರುಷರು ನಿಗದಿತ ಪ್ರಮಾಣದಲ್ಲಿ ಒಣದ್ರಾಕ್ಷಿ, ಖರ್ಜೂರ ಮತ್ತು ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ ಲೈಂಗಿಕ ಸಮಸ್ಯೆಗಳು ನಿವಾರಣೆಯಾಗುತ್ತವೆ ಮತ್ತು ಪುರುಷರು ವೀರ್ಯಾಣು ಸಂಖ್ಯೆಯನ್ನು ಕಡಿಮೆ ಮಾಡುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಎಂದು ಹಲವು ಅಧ್ಯಯನಗಳಿಂದ ತಿಳಿದುಬಂದಿದೆ.
ಇದನ್ನೂ ಓದಿ- Benefits Of Ragi-Milk: ನಿತ್ಯ ರಾತ್ರಿ ಮಲಗುವ ಮುನ್ನ ಹಾಲಿನಲ್ಲಿ ರಾಗಿ ಬೆರೆಸಿ ಕುಡಿದರೆ ಸಿಗುತ್ತೆ ಅದ್ಭುತ ಲಾಭ
ಪುರುಷರು ಒಣದ್ರಾಕ್ಷಿ, ಖರ್ಜೂರ ಮತ್ತು ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ ಸಿಗುವ ಅನುಕೂಲಗಳ ಬಗ್ಗೆ ತಿಳಿಯೋಣ...
1. ಒಣದ್ರಾಕ್ಷಿ ಸೇವನೆ (Consumption of raisins) :
ಒಣದ್ರಾಕ್ಷಿಗಳ ಸೇವನೆಯು (Consumption of raisins) ಪುರುಷರು ಅನೇಕ ಗಂಭೀರ ಸಮಸ್ಯೆಗಳಿಂದ ಮುಕ್ತಿ ಹೊಂದಲು ಸಹಾಯ ಮಾಡುತ್ತದೆ. ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಎ ಇದೆ, ಇದು ಪುರುಷರ ಎಲ್ಲಾ ಲೈಂಗಿಕ ಸಮಸ್ಯೆಗಳಿಗೆ ಪ್ರಯೋಜನಕಾರಿ ಎನ್ನಲಾಗಿದೆ. ಪ್ರತಿನಿತ್ಯ ಒಣದ್ರಾಕ್ಷಿ ಸೇವಿಸುವುದರಿಂದ ಪುರುಷರ ವೀರ್ಯಾಣು ಸಂಖ್ಯೆ ಮತ್ತು ವೀರ್ಯ ಗುಣಮಟ್ಟ ಹೆಚ್ಚುತ್ತದೆ. ಇದರಿಂದಾಗಿ ಲೈಂಗಿಕ ಸಮಸ್ಯೆಗಳು ಸಹ ಕೊನೆಗೊಳ್ಳುತ್ತವೆ.
2. ಖರ್ಜೂರದ ಬಳಕೆ (Consumption of Dates):
ಪ್ರಸಿದ್ಧ ಆಯುರ್ವೇದ ವೈದ್ಯ ಅಬ್ರಾರ್ ಮುಲ್ತಾನಿಯವರ ( Ayurveda doctor Abrar Multani) ಪ್ರಕಾರ, ಖರ್ಜೂರದ ಆರೋಗ್ಯಕರ ಪ್ರಯೋಜನಗಳ ಬಗ್ಗೆ ಹಲವು ರೀತಿಯ ಸಂಶೋಧನೆಗಳು ನಡೆದಿವೆ, ಇದರಲ್ಲಿ ಖರ್ಜೂರವನ್ನು ತಿನ್ನುವುದರಿಂದ ವೀರ್ಯಾಣುಗಳ ಸಂಖ್ಯೆ ಮತ್ತು ಗುಣಮಟ್ಟ ಹೆಚ್ಚುತ್ತದೆ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ ಎಂದು ಕಂಡುಬಂದಿದೆ. ಖರ್ಜೂರಗಳು ಎಸ್ಟ್ರಾಡಿಯೋಲ್ ಮತ್ತು ಫ್ಲೇವನಾಯ್ಡ್ಸ್ ಎಂಬ ಎರಡು ಪ್ರಮುಖ ಸಂಯುಕ್ತಗಳನ್ನು ಹೊಂದಿರುತ್ತವೆ, ಇದು ಪುರುಷರಿಗೆ ವಿಶೇಷವಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ- Side Effects of Lemon Water: ನಿಂಬೆ ನೀರಿನ ಪ್ರಯೋಜನಗಳು ತಿಳಿದಿವೆ, ಆದರೆ ಅನಾನುಕೂಲತೆಗಳ ಬಗ್ಗೆ ತಿಳಿದಿದೆಯೇ
3. ಅಂಜೂರದ ಹಣ್ಣುಗಳ ಸೇವನೆ (Consumption of figs) :
ಆಯುರ್ವೇದ ವೈದ್ಯ ಅಬ್ರಾರ್ ಮುಲ್ತಾನಿಯವರ ಪ್ರಕಾರ , ಅಂಜೂರದ ಹಣ್ಣುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಪುರುಷರ ಫಲವತ್ತತೆ ಸುಧಾರಿಸುತ್ತದೆ. ವೀರ್ಯಾಣುಗಳ ಸಂಖ್ಯೆ ಹೆಚ್ಚಾಗುತ್ತದೆ. ಅಂಜೂರದಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ, ಆದ್ದರಿಂದ ಇದು ದೇಹವನ್ನು ಇತರ ಅನೇಕ ರೋಗಗಳಿಂದ ದೂರವಿರಿಸುತ್ತದೆ. ಲೈಂಗಿಕ ಸಮಸ್ಯೆಗಳಿಂದ ಬಳಲುತ್ತಿರುವ ಯಾವುದೇ ಪುರುಷರು ಅಂಜೂರದ ಹಣ್ಣುಗಳನ್ನು ಹಾಲಿನೊಂದಿಗೆ (Figs with Milk) ತಿನ್ನಬಹುದು. ಇದರಲ್ಲಿರುವ ಖನಿಜಗಳು ಮತ್ತು ಜೀವಸತ್ವಗಳು ಹೊಸ ಕೋಶಗಳನ್ನು ಅಭಿವೃದ್ಧಿಪಡಿಸುತ್ತವೆ. ಇದು ಪುರುಷರಿಗೆ ಹೆಚ್ಚು ಪ್ರಯೋಜನಕಾರಿ ಎಂದು ವಿವರಿಸಿದ್ದಾರೆ.
ಸೂಚನೆ: ಇಲ್ಲಿ ನೀಡಿರುವ ಮಾಹಿತಿಯು ಯಾವುದೇ ವೈದ್ಯಕೀಯ ಸಲಹೆಗೆ ಬದಲಿಯಾಗಿಲ್ಲ. ಇದನ್ನು ಶಿಕ್ಷಣದ ಉದ್ದೇಶಕ್ಕಾಗಿ ಮಾತ್ರ ನೀಡಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.