Hair care tips: ಕೂದಲಿನ ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ನಾವು ನಮ್ಮ ದಿನಚರಿಯಲ್ಲಿ ಕೆಲವು ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ಕರಿಬೇವಿನ ಸೊಪ್ಪಿನಿಂದ ಕೂದಲಿನ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಆದರೆ ಅದನ್ನು ಹೇಗೆ ಬಳಸುವುದು ಎಂದು ತಿಳಿದಿರುವುದು ಬಹಳ ಮುಖ್ಯ.
ನೀವು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಬಯಸಿದರೆ ಮೆಂತ್ಯ, ನೆಲ್ಲಿಕಾಯಿ ಮತ್ತು ಒಂದು ಹಿಡಿ ಕರಿಬೇವಿನ ಎಲೆಗಳನ್ನು ಬೆರೆಸಿ ಪೇಸ್ಟ್ ಮಾಡಿ. ಇದನ್ನು ನಿಮ್ಮ ಕೂದಲಿಗೆ ಹಚ್ಚಿ 30 ರಿಂದ 40 ನಿಮಿಷಗಳ ಕಾಲ ಹಾಗೆ ಬಿಡಿ. ನಂತರ ನಿಮ್ಮ ಕೂದಲನ್ನು ಸಾಮಾನ್ಯ ನೀರಿನಿಂದ ತೊಳೆಯಿರಿ. ಹೀಗೆ ಮಾಡುವುದರಿಂದ ದಟ್ಟ ಕೂದಲು ನಿಮ್ಮದಾಗುತ್ತದೆ.
ಇದನ್ನೂ ಓದಿ: ಬೇಸಿಗೆ ಬೇಗೆಗೆ ಬಾಯಲ್ಲಿ ಹುಣ್ಣು ಆಗುತ್ತಿದೆಯೇ..! ಹಾಗಿದ್ದರೇ ಇಲ್ಲಿದೆ ಪರಿಹಾರ
ನೀವು ತಲೆಹೊಟ್ಟು ಸಮಸ್ಯೆಯಿಂದ ಬಳಲುತ್ತಿದ್ದರೆ, ಕರಿಬೇವಿನ ಎಲೆಗಳು ಮತ್ತು ಮೊಸರನ್ನು ನಿಮ್ಮ ಕೂದಲಿಗೆ ಹಚ್ಚಬಹುದು. ಈ ಹೇರ್ ಪ್ಯಾಕ್ ಹಚ್ಚುವುದರಿಂದ ತಲೆಹೊಟ್ಟು ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.
ನಿಮ್ಮ ಕೂದಲು ನಿರ್ಜೀವವಾಗಿದ್ದರೆ, ಕರಿಬೇವಿನ ಎಲೆಗಳನ್ನು ತೆಂಗಿನ ಎಣ್ಣೆಯಲ್ಲಿ ಕುದಿಸಿ, ತಲೆಗೆ ಹಚ್ಚಿ. ಹೀಗೆ ಮಾಡುವುದರಿಂದ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.
ನೀವು ಕೂದಲಿಗೆ ಗೋರಂಟಿ ಹಚ್ಚುತ್ತಿದ್ದರೆ, ಗೋರಂಟಿಯಲ್ಲಿ ಕರಿಬೇವಿನ ಎಲೆಗಳನ್ನು ಬೆರೆಸಿ ಹಚ್ಚಿಕೊಳ್ಳಿ. ಇದರಿಂದ ಕಪ್ಪು ಮತ್ತು ದಪ್ಪ ಕೂದಲು ನಿಮ್ಮದಾಗುತ್ತದೆ.
ಇದನ್ನೂ ಓದಿ: ಕುತ್ತಿಗೆಯ ಸುತ್ತಲಿನ ಕಪ್ಪು ಕಲೆಗೆ ಇಲ್ಲಿದೆ ಶಾಶ್ವತ ಪರಿಹಾರ
ಹೇರ್ ಕಂಡೀಷನಿಂಗ್ ಮಾಡಲು ಬಯಸಿದರೆ, ಗೋರಂಟಿ ಎಲೆಗಳಲ್ಲಿ ಕರಿಬೇವಿನ ಎಲೆಗಳನ್ನು ಮಿಶ್ರಣ ಮಾಡಿ. ಇದಕ್ಕೆ ಮೊಟ್ಟೆ ಮತ್ತು ತೆಂಗಿನ ಎಣ್ಣೆಯನ್ನು ಸೇರಿಸಿ. ಈ ಪೇಸ್ಟ್‌ನ್ನು ಕೂದಲಿಗೆ ಹಚ್ಚಿ. ಹೀಗೆ ಮಾಡುವುದರಿಂದ ಹೇರ್ ಕಂಡೀಷನಿಂಗ್ ಮಾಡಬಹುದು. ನಯವಾದ, ಹೊಳೆಯುವ ಕೂದಲು ನಿಮ್ಮದಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ಜೀ ಕನ್ನಡ ನ್ಯೂಸ್ ಅದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.