ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಅರಿಶಿನವನ್ನು ಈ ರೀತಿ ಸೇವಿಸಿ!

turmeric to loose weight :  ಕೆಲವು ಸರಳ ವಿಧಾನಗಳನ್ನು ಅನುಸರಿಸುವ ಮೂಲಕ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು. 

Written by - Ranjitha R K | Last Updated : Feb 6, 2024, 12:56 PM IST
  • ಅರಿಶಿನವು ಪೋಷಕಾಂಶಗಳು ಮತ್ತು ಔಷಧೀಯ ಗುಣಗಳನ್ನು ಹೊಂದಿದೆ.
  • ಇವು ವಿವಿಧ ಕಾಯಿಲೆಗಳನ್ನು ಗುಣಪಡಿಸಲು ಮತ್ತು ಅವುಗಳಿಂದ ನಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.
  • ಅರಿಶಿನವನ್ನು ಸರಿಯಾಗಿ ಸೇವಿಸುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.
ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಅರಿಶಿನವನ್ನು ಈ ರೀತಿ ಸೇವಿಸಿ! title=

ಬೆಂಗಳೂರು : ಬೊಜ್ಜು ಇಂದಿನ ದಿನಗಳಲ್ಲಿ ಅನೇಕರಿಗೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ.  ಜೀವನಶೈಲಿ ಮತ್ತು ಆಹಾರ ಪದ್ಧತಿಯ ಬದಲಾವಣೆಯಿಂದ ನಮ್ಮ ತೂಕ ದಿನೇ ದಿನೇ ಹೆಚ್ಚಾಗುತ್ತಾ ಹೋಗುತ್ತದೆ. ಒಮ್ಮೆ ತೂಕ ಹೆಚ್ಚಾದ ನಂತರ ಅದನ್ನು ಕಳೆದುಕೊಳ್ಳುವುದು  ಬಹಳ ಕಷ್ಟದ ಕೆಲಸ. 

ಜನರು ತೂಕ ಇಳಿಸಿಕೊಳ್ಳಲು ವಿವಿಧ ವಿಧಾನಗಳನ್ನು ಪ್ರಯತ್ನಿಸುತ್ತಾರೆ. ಅನೇಕ ಜನರು ವಿವಿಧ ರೀತಿಯ ವ್ಯಾಯಾಮಗಳನ್ನು ಮಾಡುತ್ತಾರೆ.ಕೆಲವರು ಕಟ್ಟುನಿಟ್ಟಾದ ಆಹಾರದ ನಿರ್ಬಂಧಗಳ ಮೊರೆ ಹೋಗುತ್ತಾರೆ. ಇದೆಲ್ಲದರ ಹೊರತಾಗಿ ಕೆಲವು ಸರಳ ವಿಧಾನಗಳನ್ನು ಅನುಸರಿಸುವ ಮೂಲಕ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು. 

ಇದನ್ನೂ ಓದಿ : ಹಸಿರು ಅಲೋವೆರಾಗಿಂತ 22 ಪಟ್ಟು ಹೆಚ್ಚು ಶಕ್ತಿಶಾಲಿ ಕೆಂಪು ಆಲೋವಿರಾ ! ಇದರ ಪ್ರಯೋಜನ ಕೂಡಾ ಅದ್ಭುತ

ಅಡಿಗೆ ಮಸಾಲೆಗಳು : 
ನಮ್ಮ ಭಾರತೀಯ ಅಡುಗೆಮನೆಗಳಲ್ಲಿ ನಾವು ವಿವಿಧ ರೀತಿಯ ಮಸಾಲೆಗಳನ್ನು ಬಳಸುತ್ತೇವೆ. ಈ ಮಸಾಲೆಗಳು ಆಹಾರದ ರುಚಿಯನ್ನು ಹೆಚ್ಚಿಸುತ್ತವೆ. ಮಾತ್ರವಲ್ಲ  ಅನೇಕ ಆರೋಗ್ಯ ಪ್ರಯೋಜನಗಳನ್ನು ಕೂಡಾ ನೀಡುತ್ತವೆ. ಇವುಗಳ ಮೂಲಕ ನಾವು ನಮ್ಮ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.ಅರಿಶಿನವು ತೂಕ ನಷ್ಟಕ್ಕೆ ಸಹಾಯ ಮಾಡುವ ಪ್ರಬಲವಾದ ಮಸಾಲೆಗಳಲ್ಲಿ ಒಂದಾಗಿದೆ.

 ಅರಶಿನ :
ನಮ್ಮ ಹೆಚ್ಚಿನ ಅಡುಗೆಗಳಲ್ಲಿ ಅರಿಶಿನವನ್ನು ಬಳಸುತ್ತೇವೆ. ಅರಿಶಿನವು ನಮ್ಮ ಆಹಾರಕ್ಕೆ ಸುಂದರವಾದ ಬಣ್ಣವನ್ನು ನೀಡುವುದರ ಜೊತೆಗೆ ಆರೋಗ್ಯವನ್ನು ಸುಧಾರಿಸುತ್ತದೆ. ಇದಲ್ಲದೇ ತೂಕ ಇಳಿಸುವಲ್ಲಿ ಅರಿಶಿನದ ಪಾತ್ರ ಮಹತ್ವದ್ದಾಗಿದೆ. 

ತೂಕವನ್ನು ಕಳೆದುಕೊಳ್ಳಲು ಅರಿಶಿನವನ್ನು ವಿವಿಧ ರೀತಿಯಲ್ಲಿ ಬಳಸಬಹುದು :
ಅರಿಶಿನ ಮತ್ತು ಶುಂಠಿ :

ತೂಕವನ್ನು ಕಳೆದುಕೊಳ್ಳಲು ಶುಂಠಿಯ ಜೊತೆಗೆ ಅರಿಶಿನವನ್ನು ಸೇವಿಸಬಹುದು. ಇವೆರಡನ್ನು ಒಟ್ಟಿಗೆ ಸೇವಿಸುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಒಂದು ಲೋಟ ನೀರಿನಲ್ಲಿ ಒಂದು ಇಂಚು ಶುಂಠಿ ಮತ್ತು ಎರಡು ಚಿಟಿಕೆ ಅರಿಶಿನ ಪುಡಿಯನ್ನು ಸೇರಿಸಿ ಚೆನ್ನಾಗಿ ಕುದಿಸಿ. ನಂತರ ಅದನ್ನು ಫಿಲ್ಟರ್ ಮಾಡಿ ಸೇವಿಸಬಹುದು.

ಇದನ್ನೂ ಓದಿ : White hair treatment: ಬಿಳಿ ಕೂದಲನ್ನು 4 ವಾರಗಳಲ್ಲಿ ಶಾಶ್ವತ ಕಪ್ಪಾಗಿಸುವ ಅದ್ಭುತ ಮನೆಮದ್ದು!

ತೂಕ ನಷ್ಟಕ್ಕೆ ಅರಿಶಿನ ನೀರು :
ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರನ್ನು ಕುಡಿಯುವುದು ಉತ್ತಮ ಹವ್ಯಾಸ. ಇದರಿಂದ ನಮ್ಮ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ತ್ವರಿತವಾಗಿ ಕಡಿಮೆ ಮಾಡುವುದು ಸಾಧ್ಯವಾಗುತ್ತದೆ. ಇದಕ್ಕಾಗಿ ಅರಿಶಿನ ತುಂಡುಗಳನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುದಿಸಬೇಕು. ಕುದಿಯಲು ಇಟ್ಟ ನೀರು ಅರ್ಧದಷ್ಟಾಗುವವರೆಗೆ ಕುದಿಸಬೇಕು. ನಂತರ ಈ ನೀರಿಗೆ ಸ್ವಲ್ಪ ಜೇನುತುಪ್ಪ ಅಥವಾ ನಿಂಬೆ ರಸ ಬೆರೆಸಿ ಸೇವಿಸಬೇಕು. ಇದರಿಂದ ದೇಹದ ತೂಕ ಕ್ರಮೇಣ ಕಡಿಮೆಯಾಗುತ್ತದೆ.

ತೂಕ ನಷ್ಟಕ್ಕೆ ಅರಿಶಿನ ಹಾಲು :
ವೇಗವಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಅರಿಶಿನ ಹಾಲನ್ನು ಕುಡಿಯಬಹುದು.  ಸ್ವಲ್ಪ ಅರಶಿನವನ್ನು ಹುರಿದು ಅದಕ್ಕೆ ಹಾಲನ್ನು ಸೇರಿಸಿ. ಹಾಲು ಬಿಸಿಯಾದ ಮೇಲೆ ಗ್ಯಾಸ್ ನಿಂದ ಇಳಿಸಿ. ಪ್ರತಿ ರಾತ್ರಿ ಮಲಗುವ ಮುನ್ನ ಈ ರೀತಿ ಅರಶಿನ ಹಾಲನ್ನು ಕುಡಿಯುವುದರಿಂದ ತೂಕ ಕಡಿಮೆಯಾಗುತ್ತದೆ.ಇದಲ್ಲದೆ, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಉತ್ತಮ ನಿದ್ರೆ ನೀಡುತ್ತದೆ.

ಅರಿಶಿನ ಮತ್ತು ಜೇನುತುಪ್ಪ :
ಅರಿಶಿನ ಮತ್ತು ಜೇನುತುಪ್ಪದ ಸಂಯೋಜನೆಯು ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಇದಕ್ಕಾಗಿ ಒಂದು ಚಮಚ ಜೇನುತುಪ್ಪವನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಅರಿಶಿನ ಪುಡಿಯನ್ನು ಬೆರೆಸಿ ಸೇವಿಸಿ. 

ಇದನ್ನೂ ಓದಿ : Remedy for Long Hair: ನೈಸರ್ಗಿಕವಾಗಿ ಉದ್ದನೆಯ ಕೂದಲು ಬಯಸುವವರಿಗೆ ತುಂಬಾ ಪ್ರಯೋಜನಕಾರಿ ಮನೆಮದ್ದುಗಳು

ಅರಿಶಿನ ಮತ್ತು  ಚಕ್ಕೆ : 
ಚಕ್ಕೆ ಮತ್ತು ಅರಿಶಿನ ಮಿಶ್ರಣವು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಬಹಳ ಸಹಾಯಕವಾಗಿದೆ. ಈ ಎರಡನ್ನೂ ಒಟ್ಟಿಗೆ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು. ಇದಕ್ಕಾಗಿ ಒಂದು ಲೋಟ ನೀರನ್ನು ಬಿಸಿ ಮಾಡಿ.ಇದಕ್ಕೆ ಚಕ್ಕೆ ಮತ್ತು ಚಿಟಿಕೆ ಅರಿಶಿನ ಪುಡಿಯನ್ನು ಸೇರಿಸಿ ಚೆನ್ನಾಗಿ ಕುದಿಸಿ. ನಂತರ ಅದನ್ನು ಫಿಲ್ಟರ್ ಮಾಡಿ ಕುಡಿಯಿರಿ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆಯ ಕೊಬ್ಬು ಕಡಿಮೆಯಾಗುತ್ತದೆ ಮತ್ತು ದೇಹದ ತೂಕ ಕಡಿಮೆಯಾಗುತ್ತದೆ.

ಅರಿಶಿನ ಸೇವನೆಯ ಇತರ ಪ್ರಯೋಜನಗಳು :
ಅರಿಶಿನವು ಪೋಷಕಾಂಶಗಳು ಮತ್ತು ಔಷಧೀಯ ಗುಣಗಳನ್ನು ಹೊಂದಿದೆ.ಇವು ವಿವಿಧ ಕಾಯಿಲೆಗಳನ್ನು ಗುಣಪಡಿಸಲು ಮತ್ತು ಅವುಗಳಿಂದ ನಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಅರಿಶಿನವನ್ನು ಸರಿಯಾಗಿ ಸೇವಿಸುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಅಧಿಕ ರಕ್ತದೊತ್ತಡದಿಂದ ಮಧುಮೇಹದವರೆಗೆ ಹಲವಾರು ರೋಗಗಳನ್ನು ಅರಿಶಿನದಿಂದ ಗುಣಪಡಿಸಬಹುದು. 

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News