Weight Loss At Home: ಮಖಾನಾ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಹೇರಳ ಪ್ರಮಾಣದಲ್ಲಿ ಪೋಷಕಾಂಶಗಳಿವೆ, ಈ ಕಾರಣದಿಂದಾಗಿ ಇದನ್ನು ಸೂಪರ್ಫುಡ್ ಪರಿಗಣಿಸಲಾಗುತ್ತದೆ. ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಆಂಟಿಆಕ್ಸಿಡೆಂಟ್ಗಳಂತಹ ಪೋಷಕಾಂಶಗಳು ಇದರಲ್ಲಿವೆ. ಇದನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಇದು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಇದರ ಸೇವನೆಯು ಅಧಿಕ ರಕ್ತದ ಸಕ್ಕರೆ ಮತ್ತು ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಜೊತೆಗೆ, ಇದು ತೂಕ ಇಳಿಕೆಗೆ ಇದು ಸಹಾಯಮಾಡುತ್ತದೆ. ನಿಯಮಿತವಾಗಿ ಮಖಾನಾ ಸೇವನೆಯಿಂದ ಕೆಲವೇ ದಿನಗಳಲ್ಲಿ ನೀವು ಹೊಟ್ಟೆ ಭಾಗದ ಕೊಬ್ಬನ್ನು ಕರಗಿಸಬಹುದು.
ತೂಕ ಇಳಿಕೆಗೆ ಮಖಾನಾ ಹೇಗೆ ಪ್ರಯೋಜನಕಾರಿಯಾಗಿದೆ?
ಮಖಾನಾ ಫೈಬರ್ ಮತ್ತು ಪ್ರೊಟೀನ್ ಆಗರವಾಗಿದೆ, ಇದು ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ಇದೇ ವೇಳೆ ಇದರಲ್ಲಿ ಕ್ಯಾಲೋರಿಗಳು ಮತ್ತು ಕೊಬ್ಬಿನ ಪ್ರಮಾಣವು ಕಡಿಮೆಯಾಗಿರುತ್ತವೆ. ಇದನ್ನು ತಿನ್ನುವುದರಿಂದ ಹೊಟ್ಟೆ ತುಂಬಾ ಹೊತ್ತು ತುಂಬಿರುವ ಅನುಭವವಾಗುತ್ತದೆ ಮತ್ತು ಮತ್ತೆ ಮತ್ತೆ ಹಸಿವಾಗುವುದಿಲ್ಲ. ಈ ಕಾರಣದಿಂದಾಗಿ ನೀವು ಅತಿಯಾಗಿ ತಿನ್ನುವುದನ್ನು ತಪ್ಪಿಸುತ್ತೀರಿ, ಇದು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಉತ್ತಮ ಕೊಬ್ಬು ಇದ್ದು, ಇದು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ತೂಕ ಇಳಿಕೆಗೆ ಈ ರೀತಿ ಮಖಾನಾ ಸೇವಿಸಿ
ಹುರಿದು ತಿನ್ನಿ
ತೂಕ ಇಳಿಕೆಗೆ ಮಖಾನವನ್ನು ತುಪ್ಪದಲ್ಲಿ ಹುರಿದು ತಿನ್ನಬಾನುದು. ನೀವು ಹುರಿದ ಮಖಾನಾವನ್ನು ಹಸಿರು ಚಹಾದೊಂದಿಗೆ ಬ್ರೇಕ್ ಫಾಸ್ಟ್ ನಂತರ ಅಥವಾ ಸಂಜೆಯ ಹೊತ್ತು ಸೇವಿಸಬಹುದು. ಇದು ತಿನ್ನಲು ರುಚಿಕರವಾಗಿರುವುದರ ಜೊತೆಗೆ, ತೂಕ ಕಡಿಮೆ ಮಾಡಲು ಕೂಡ ಸಹಾಯ ಮಾಡುತ್ತದೆ.
ಇದನ್ನೂ ಓದಿ-Body Detox Symptoms: ಶರೀರ ಸ್ವಚ್ಛಗೊಳಿಸುವ ಕಾಲ ಬಂದಿದೆ ಎನ್ನುತ್ತವೆ ಈ ಸಂಕೇತಗಳು!
ಚಾಟ್ ರೂಪದಲ್ಲಿ ಸೇವಿಸಬಹುದು
ನೀವು ತೂಕ ಕಳೆದುಕೊಳ್ಳಲು ಬಯಸಿದರೆ, ನೀವು ನಿಮ್ಮ ಆಹಾರದಲ್ಲಿ ಮಖಾನಾ ಚಾಟ್ ಅನ್ನು ಸೇರಿಸಬಹುದು. ಇದಕ್ಕಾಗಿ, ಒಂದು ಬಟ್ಟಲಿನಲ್ಲಿ ಹುರಿದ ಮಖಾನಾವನ್ನು ತೆಗೆದುಕೊಳ್ಳಿ. ಸಣ್ಣಗೆ ಕತ್ತರಿಸಿದ ಈರುಳ್ಳಿ, ಸಣ್ಣದಾಗಿ ಕೊಚ್ಚಿದ ಟೊಮೆಟೊ, ಸಣ್ಣದಾಗಿ ಕೊಚ್ಚಿದ ಹಸಿರು ಮೆಣಸಿನಕಾಯಿ, ಒಂದು ಚಮಚ ಹುರಿದ ಕಡಲೆಕಾಯಿ ಸೇರಿಸಿ ಮತ್ತು ಮಿಶ್ರಣ ಮಾಡಿ. ಈಗ ಸ್ವಲ್ಪ ಕರಿಮೆಣಸಿನ ಪುಡಿ, ಚಾಟ್ ಮಸಾಲಾ, ಒಂದು ಚಮಚ ನಿಂಬೆ ರಸ ಮತ್ತು ರುಚಿಗೆ ತಕ್ಕ ಉಪ್ಪು ಸೇರಿಸಿ. ನಿಮ್ಮ ರುಚಿಕರವಾದ ಮಖಾನಾ ಚಾಟ್ ಸಿದ್ಧವಾಗಿದೆ. ನೀವು ಅದನ್ನು ಉಪಹಾರ ಅಥವಾ ತಿಂಡಿಯ ರೂಪದಲ್ಲಿ ಸೇವಿಸಬಹುದು. ಇದನ್ನು ತಿನ್ನುವುದರಿಂದ ನಿಮಗೆ ಬೇಗನೆ ಹಸಿವಾಗುವುದಿಲ್ಲ, ಇದು ನಿಮ್ಮ ತೂಕವನ್ನು ನಿಯಂತ್ರಿಸಲು ಸುಲಭವಾಗುತ್ತದೆ.
ಇದನ್ನೂ ಓದಿ-Heart Attack Remedies: ಹೃದಯಾಘಾತದ ಈ ಮುನ್ಸೂಚನೆಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ!
(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ