Pramod Muthalik: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ಗೆ ಜೀವ ಬೆದರಿಕೆ..!

ತಮಗೆ ಜೀವ ಬೆದರಿಕೆ ಕರೆ ಬಂದ ಹಿನ್ನೆಲೆ ಶ್ರೀರಾಮಸೇನೆ  ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Written by - Zee Kannada News Desk | Last Updated : Nov 4, 2022, 12:17 PM IST
  • ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆ ಆರೋಪ
  • ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ ಎಂದು ಅಪರಿಚಿತ ದುಷ್ಕರ್ಮಿಗಳಿಂದ ಬೆದರಿಕೆ
  • ಅಶ್ಲೀಲ ಶಬ್ದಗಳಿಂದ ನಿಂದಿಸಿ ದೂರವಾಣಿ ಕರೆ ಮೂಲಕ ಮುತಾಲಿಕ್‍ಗೆ ಜೀವ ಬೆದರಿಕೆ
Pramod Muthalik: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ಗೆ ಜೀವ ಬೆದರಿಕೆ..! title=
ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ ಕರೆ!

ಚಿಕ್ಕೋಡಿ: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕಟ್ಟಾ ಹಿಂದುತ್ವವಾದಿಗೆ ಜೀವ ಬೆದರಿಕೆ ಹಾಕಲಾಗಿದೆ.

‘ನಿನ್ನನ್ನು ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ’ ಎಂದು ಅಪರಿಚಿತ ದುಷ್ಕರ್ಮಿಗಳು ಮುತಾಲಿಕ್ ಅವರಿಗೆ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ನಿಂದಿಸಿ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅವಳಿ ಶಿಶು ಧಾರುಣ ಸಾವು ಪ್ರಕರಣ : ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆಗೆ ಹೆಚ್ಡಿಕೆ ಆಗ್ರಹ

ತಮಗೆ ಜೀವ ಬೆದರಿಕೆ ಕರೆ ಬಂದ ಹಿನ್ನೆಲೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಮುತಾಲಿಕ್ ದೂರು ದಾಖಲಿಸಿದ್ದಾರೆ. ಶ್ರೀರಾಮಸೇನೆಯ ಸಂಸ್ಥಾಪಕ‌ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಅವರಿಗೆ ಕರೆ ಮಾಡಿದ ದುಷ್ಕರ್ಮಿಗಳು ಮಂಗಳೂರು ಭಾಗದ ಉರ್ದು ಮಿಶ್ರಿತ ಕನ್ನಡದಲ್ಲಿ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.  

ಇಂತಹ ಬೆದರಿಕೆ ಕರೆಗಳಿಗೆಲ್ಲ ನಾನು ಹೆದರುವುದಿಲ್ಲವೆಂದು ಪ್ರಮೋದ್ ಮುತಾಲಿಕ್ ಜೀವ ಬೆದರಿಕೆ ಕರೆ ಮಾಡಿದ ದುಷ್ಕರ್ಮಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ನನಗೆ ಬೆದರಿಕೆ ಹಾಕುವ ಬದಲು ನೀವು ನ್ಯಾಯಯುತವಾಗಿ ಜೀವನ ಸಾಗಿಸಿ ಎಂದು ಮಾಧ್ಯಮಗಳ ಮೂಲಕ ಮುತಾಲಿಕ್ ಕರೆ ಮಾಡಿದವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಏಷ್ಯಾದಲ್ಲೇ ಅತಿ ಹೆಚ್ಚು ಎಥನಾಲ್ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ: ವಿಜಯ್‌ ನಿರಾಣಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News