Sania Mirza-Shoaib Malik Divorce: ಸಾನಿಯಾ ಮಿರ್ಜಾ- ಶೋಯೆಬ್ ಮಲಿಕ್ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನಕ್ಕೆ ಮುಂದಾದ ಜೋಡಿ!?

Sania Mirza-Shoaib Malik Divorce: ಸಾನಿಯಾ ಮಿರ್ಜಾ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಮಗ ಇಜಾನ್ ಫೋಟೋವನ್ನು ಹಂಚಿಕೊಂಡಿದ್ದು, ಅವರು ಕಷ್ಟದ ಸಮಯದಲ್ಲಿ ತೆಗೆದುಕೊಂಡ ಕ್ಷಣಗಳ ಬಗ್ಗೆ ಬರೆದಿದ್ದಾರೆ. “ಒಡೆದ ಹೃದಯಗಳು ಎಲ್ಲಿಗೆ ಹೋಗುತ್ತವೆ..?” ಎಂದು ಅದಕ್ಕೆ ಅವರು ಶೀರ್ಷಿಕೆ ನೀಡಿದ್ದಾರೆ.

Written by - Bhavishya Shetty | Last Updated : Nov 7, 2022, 12:34 PM IST
    • ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿ
    • ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿರುವ ಸುದ್ದಿ
    • ಈ ಸುದ್ದಿಗೆ ಇನ್ನಷ್ಟು ಬಲ ನೀಡುತ್ತಿರುವ ಒಂದು ಪೋಸ್ಟ್‌
Sania Mirza-Shoaib Malik Divorce: ಸಾನಿಯಾ ಮಿರ್ಜಾ- ಶೋಯೆಬ್ ಮಲಿಕ್ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನಕ್ಕೆ ಮುಂದಾದ ಜೋಡಿ!?  title=
Sania Mirza

Sania Mirza-Shoaib Malik Divorce: ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಇಬ್ಬರ ನಡುವೆ ಹೊಂದಾಣಿಕೆ ಸರಿಯಿಲ್ಲ. ಹೀಗಾಗಿ ಅವರಿಬ್ಬರು ದೂರವಾಗುತ್ತಿದ್ದಾರೆ ಎಂಬ ಸುದ್ದಿ ಬರುತ್ತಿದೆ. ಈ ಮಧ್ಯೆ ಸಾನಿಯಾ ಮಿರ್ಜಾ ಸೋಶಿಯಲ್ ಮೀಡಿಯಾದಲ್ಲಿ ಮಾಡಿರುವ ಒಂದು ಪೋಸ್ಟ್‌ ಈ ಸುದ್ದಿಗೆ ಇನ್ನಷ್ಟು ಬಲ ನೀಡುತ್ತಿವೆ.

ಇದನ್ನೂ ಓದಿ: T20 World Cup Money Prize: ವಿಶ್ವಕಪ್ ಗೆದ್ದವರ ಪಾಲಾಗಲಿರುವ ಮೊತ್ತವೆಷ್ಟು? ರನ್ನರ್ ಅಪ್ ಗೂ ಸಿಗಲಿದೆಯೇ ಬಹುಮಾನ?

ಸಾನಿಯಾ ಮಿರ್ಜಾ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಮಗ ಇಜಾನ್ ಫೋಟೋವನ್ನು ಹಂಚಿಕೊಂಡಿದ್ದು, ಅವರು ಕಷ್ಟದ ಸಮಯದಲ್ಲಿ ತೆಗೆದುಕೊಂಡ ಕ್ಷಣಗಳ ಬಗ್ಗೆ ಬರೆದಿದ್ದಾರೆ. “ಒಡೆದ ಹೃದಯಗಳು ಎಲ್ಲಿಗೆ ಹೋಗುತ್ತವೆ..?” ಎಂದು ಅದಕ್ಕೆ ಅವರು ಶೀರ್ಷಿಕೆ ನೀಡಿದ್ದಾರೆ. ಇದನ್ನು ಕಂಡ ನೆಟ್ಟಿಗರು ಇಬ್ಬರೂ ಬೇರೆ ಬೇರೆಯಾಗಿ ವಾಸಿಸುತ್ತಿದ್ದು, ಬೇರೆಯಾಗಲು ನಿರ್ಧರಿಸಿದ್ದಾರೆ ಎಂದು ಹೇಳುತ್ತಿದ್ದಾರೆ.

ಮತ್ತೊಂದೆಡೆ, ಶೋಯೆಬ್ ಮಲಿಕ್-ಸಾನಿಮಾ ಮಿರ್ಜಾ ತಮ್ಮ ಮಗ ಇಜಾನ್ ಹುಟ್ಟುಹಬ್ಬವನ್ನು ದುಬೈನಲ್ಲಿ ಆಚರಿಸಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಮಲಿಕ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಸಾನಿಯಾ ಮಿರ್ಜಾ ಒಂದೇ ಒಂದು ಫೋಟೋವನ್ನು ಶೇರ್ ಮಾಡಿಲ್ಲ. ಇದರಿಂದ ಇವರಿಬ್ಬರ ಬಾಂಧವ್ಯ ಚೆನ್ನಾಗಿಲ್ಲ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.

ಸಾನಿಯಾ ಮತ್ತು ಶೋಯೆಬ್ 2003 ರಲ್ಲಿ ಭೇಟಿಯಾಗಿದ್ದು, ಬಳಿಕ 2010 ಅನೇಕ ಟೀಕೆಗಳ ನಡುವೆ, ಇವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರ ಮದುವೆ ಸಂದರ್ಭದಲ್ಲಿ ದೇಶಗಳ ಗಡಿ ವಿಚಾರವೂ ಚರ್ಚೆಗೆ ಬಂದಿತ್ತು. ಹೈದರಾಬಾದ್‌ನಲ್ಲಿ ಇವರ ಮದುವೆ ಅದ್ಧೂರಿಯಾಗಿ ನೆರವೇರಿತ್ತು. ಸಾನಿಯಾ ಮಿರ್ಜಾ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳಿಗೆ ಹಾಜರಾಗುತ್ತಿದ್ದರು. ಅಷ್ಟೇ ಅಲ್ಲದೆ ತಮ್ಮ ಪತಿಗೆ ಬೆಂಬಲ ನೀಡುತ್ತಿದ್ದರು. ವಿಶ್ವದ ಬೆಸ್ಟ್ ಸ್ಟಾರ್ ಜೋಡಿ ಎಂದು ಈ ಜೋಡಿಗೆ ಒಳ್ಳೆಯ ಹೆಸರು ಬಂದಿದೆ. ಎಂಟು ವರ್ಷಗಳ ನಂತರ 2018 ರಲ್ಲಿ, ಇಜಾನ್ ಮಿರ್ಜಾ ಎಂಬ ಮಗುವಿಗೆ ಸಾನಿಯಾ ಜನ್ಮ ನೀಡುತ್ತಾರೆ.

ಇದನ್ನೂ ಓದಿ: Rohit Sharma : ಪಂದ್ಯ ಗೆದ್ದ ಮೇಲೆ ಆಟಗಾರರನ್ನು ಹಾಡಿ ಹೊಗಳಿದ ಕ್ಯಾಪ್ಟನ್ ರೋಹಿತ್! 

ಇವರಿಬ್ಬರ 12 ವರ್ಷಗಳ ಒಟ್ಟಿಗೆ ಪಯಣ ಮುಗಿದಿದ್ದು, ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದು ಕೇವಲ ವದಂತಿ ಎಂದು ಕೆಲವರು ನಿರಾಕರಿಸುತ್ತಿದ್ದಾರೆ. ಈ ಬಗ್ಗೆ ಸಾನಿಯಾ ಮತ್ತು ಶೋಯೆಬ್ ಮಲಿಕ್ ಅಧಿಕೃತವಾಗಿ ಪ್ರತಿಕ್ರಿಯೆ ನೀಡಬೇಕಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News