Chanakya Niti: ಆಚಾರ್ಯ ಚಾಣಕ್ಯರನ್ನು ಶ್ರೇಷ್ಠ ರಾಜತಾಂತ್ರಿಕ ಎಂದು ಪರಿಗಣಿಸಲಾಗಿದೆ. ಆಚಾರ್ಯ ಚಾಣಕ್ಯರ ನೀತಿಶಾಸ್ತ್ರ 'ಚಾಣಕ್ಯ ನೀತಿ' ಅವರ ಪ್ರಮುಖ ನೀತಿಗಳ ಸಂಗ್ರಹವಾಗಿದೆ. ಇದರಲ್ಲಿ ಮಾನವ ಜೀವನಕ್ಕೆ ಸಂಬಂಧಿಸಿದ ಕೆಲವು ವಿಷಯಗಳು ಮತ್ತು ಅಭ್ಯಾಸಗಳನ್ನು ಉಲ್ಲೇಖಿಸಲಾಗಿದೆ. ಜೀವನದಲ್ಲಿ ಗುರಿ ಸಾಧಿಸಲು, ಯಶಸ್ಸನ್ನು ಪಡೆಯಲು ಚಾಣಕ್ಯ ನೀತಿಯಲ್ಲಿ ಹಲವು ಸಲಹೆಗಳನ್ನು ನೀಡಲಾಗಿದೆ. ಆಚಾರ್ಯ ಚಾನಕ್ಯರ ನೀತಿಗಳನ್ನು ಅನುಸರಿಸುವ ಮೂಲಕ ಅನೇಕ ಜನರು ಯಶಸ್ಸಿನ ಉತ್ತುಂಗಕ್ಕೆ ಏರಿದ್ದಾರೆ. ಆದರೆ, ಚಾಣಕ್ಯ ನೀತಿಯಲ್ಲಿ ಮನುಷ್ಯನು ಮಾಡುವ ಕೆಲವು ಸಣ್ಣ ತಪ್ಪುಗಳು ಸಹ ಅವರ ಯಶಸ್ಸಿನ ಹಾದಿಗೆ ಅಡಚಣೆ ಉಂಟು ಮಾಡಬಹುದು ಎಂದು ಉಲ್ಲೇಖಿಸಲಾಗಿದೆ. ಅಂತಹ ತಪ್ಪುಗಳು ಯಾವುವು ಎಂದು ತಿಳಿಯೋಣ...
ಮನಸ್ಸಿನ ನಿಯಂತ್ರಣ:
ವಾಸ್ತವವಾಗಿ, ಪರಿಸ್ಥಿತಿ ಎಂತಹದ್ದೇ ಇರಲಿ ನಾವು ಗಟ್ಟಿ ಮನಸ್ಸಿನಿಂದ ಕಷ್ಟಪಟ್ಟು ಪ್ರಯತ್ನಿಸಿದರೆ ಹಿಡಿದ ಕೆಲಸದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ಆಚಾರ್ಯ ಚಾಣಕ್ಯರೂ ಕೂಡ ಈ ಬಗ್ಗೆ ಉಲ್ಲೇಖಿಸಿದ್ದಾರೆ. ಆಚಾರ್ಯ ಚಾಣಕ್ಯರ ಪ್ರಕಾರ, ಮನುಷ್ಯನು ತನ್ನ ಮನಸ್ಸನ್ನು ಹೇಗೆ ನಿಯಂತ್ರಿಸಬೇಕೆಂದು ಮೊದಲು ತಿಳಿದಿರಬೇಕು. ತನ್ನ ಮನಸ್ಸನ್ನು ನಿಯಂತ್ರಿಸಲು ಸಾಧ್ಯವಾಗದ ವ್ಯಕ್ತಿಗೆ ಯಶಸ್ಸು ಸಿಗುವುದಿಲ್ಲ.
ಇದನ್ನೂ ಓದಿ- Chanakya Niti : ಹೆಣ್ಣಿನ ಈ ಗುಣಗಳಿಗೆ ತಲೆ ಬಾಗಲೇಬೇಕಂತೆ ಪುರುಷರು!
ಚಾಣಕ್ಯ ನೀತಿಯಲ್ಲಿ ಒಂದು ಪದ್ಯ ಈ ರೀತಿ ಇದೆ...
ಅಸ್ಥಿರ ಯಸ್ಯ ನ ಜನೇ ನ ವನೇ ಸುಖಮ್, ಜನೋ ದಹತಿ ಸಂಸರ್ಗಾತ್ ವಾನ್ ಸಂವಿವರ್ಜನಾತ್.
ಮನುಷ್ಯನ ಒಂದೇ ಒಂದು ತಪ್ಪು ಅವನ ಯಶಸ್ಸಿನ ಹಾದಿಯಲ್ಲಿ ಅಡ್ಡಿಯಾಗುತ್ತದೆ ಮತ್ತು ಅವನು ಮತ್ತೆ ಮತ್ತೆ ವೈಫಲ್ಯವನ್ನು ಎದುರಿಸಬೇಕಾಗುತ್ತದೆ ಎಂಬುದು ಈ ಶ್ಲೋಕದ ಅರ್ಥ. ಆ ತಪ್ಪು ನಿಮ್ಮ ಮನಸ್ಸನ್ನು ನಿಯಂತ್ರಿಸದಿರುವುದು.
ಆಚಾರ್ಯ ಚಾಣಕ್ಯರ ಪ್ರಕಾರ, ಒಬ್ಬರ ಮನಸ್ಸನ್ನು ನಿಯಂತ್ರಿಸದಿರುವುದು ಮನುಷ್ಯನ ದೊಡ್ಡ ದೋಷವಾಗಿದೆ ಮತ್ತು ಈ ನ್ಯೂನತೆಯು ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. ಏಕೆಂದರೆ ಒಬ್ಬ ವ್ಯಕ್ತಿಯು ಮನಸ್ಸನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ, ಅವನು ಯಾವುದೇ ಕೆಲಸವನ್ನು ದೃಢತೆಯಿಂದ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಅವನ ಕೆಲಸದಲ್ಲಿ ಯಶಸ್ಸನ್ನು ಪಡೆಯಲು ಪಡೆಯಲು ಸಹ ಸಾಧ್ಯವಾಗುವುದಿಲ್ಲ. ಯಾವುದೇ ಒಬ್ಬ ವ್ಯಕ್ತಿ ನಿರ್ದಿಷ್ಟ ಗುರಿಯನ್ನು ತಲುಪಲು ಅವನ ಮನಸ್ಸನ್ನು ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ.
ಇದನ್ನೂ ಓದಿ- Chanakya Niti: ಇಂತಹ ಜನರು ಬಡತನದಲ್ಲಿ ಹುಟ್ಟಿದರೂ ಕೂಡ ಇವರ ಮೇಲೆ ತಾಯಿ ಲಕ್ಷ್ಮಿಯ ಅಪಾರ ಕೃಪೆ ಇರುತ್ತದೆ
ಇಂತಹವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ:
ಯಾರು ತಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ತಮ್ಮ ಕೆಲಸವನ್ನು ಪೂರ್ಣ ಸಮರ್ಪಣಾ ಭಾವದಿಂದ ಮಾಡುತ್ತಾರೋ ಅವರಿಗೆ ಖಂಡಿತ ಯಶಸ್ಸು ಸಿಗುತ್ತದೆ. ಏಕೆಂದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯಲು, ಸ್ಥಿರವಾದ ಮನಸ್ಸನ್ನು ಹೊಂದಿರುವುದು ಬಹಳ ಮುಖ್ಯ. ಬುದ್ದಿವಂತನಾಗಿದ್ದರೂ ತನ್ನ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಲು ಸಾಧ್ಯವಾಗದ ವ್ಯಕ್ತಿ ತನ್ನ ಸಾಮರ್ಥ್ಯದ ಪೂರ್ಣ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನೀವು ಯಶಸ್ಸನ್ನು ಪಡೆಯಲು ಬಯಸಿದರೆ, ಮೊದಲು ನಿಮ್ಮ ಮನಸ್ಸನ್ನು ನಿಯಂತ್ರಿಸಿ. ತನ್ನ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವ ವ್ಯಕ್ತಿ ಯಶಸ್ವಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.