ಸ್ಯಾಂಡಲ್ವುಡ್ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಕೈಗೆ ಗಾಯಮಾಡಿಕೊಂಡಿದ್ದಾರೆ. ಶೂಟಿಂಗ್ ಈ ಘಟನೆ ನಡೆದಿದ್ದು, ವೈದ್ಯರ ಸಲಹೆ ಮೇಲೆ ಬೆಡ್ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Ragini Dwivedi Photos : ಸ್ಯಾಂಡಲ್ವುಡ್ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಕೈಗೆ ಗಾಯಮಾಡಿಕೊಂಡಿದ್ದಾರೆ. ಶೂಟಿಂಗ್ ಈ ಘಟನೆ ನಡೆದಿದ್ದು, ವೈದ್ಯರ ಸಲಹೆ ಮೇಲೆ ಬೆಡ್ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಸ್ಯದ್ಯ ರಾಗಿಣಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಚೆನ್ನೈನಲ್ಲಿ ಶೂಟಿಂಗ್ನಲ್ಲಿ ಕೈಗೆ ಏಟು ಬಿದ್ದಿದೆ. ವೈದ್ಯರು ನಾಲ್ಕು ದಿನ ಬೆಡ್ರೆಸ್ಟ್ ತೆಗೆದುಕೊಳ್ಳಿ ಅಂತ ವೈದ್ಯರು ತಿಳಿಸಿದ್ದಾರೆ.
ʼನಾನು ಒಬ್ಬ ಭಾರತೀಯʼ ಚಿತ್ರದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ತಮ್ಮ ಅಭಿಮಾನಿಗಳಿಗೆ ಫೋಟೋ ಹಂಚಿಕೊಂಡು, ಆದಷ್ಟು ಬೇಗ ರಿಕವರ್ ಆಗುತ್ತೇನೆ ಅಂತ ರಾಗಿಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಾಬು ಗಣೇಶ್ ನಿರ್ದೇಶನ ʼನಾನು ಒಬ್ಬ ಭಾರತೀಯʼ ಸಿನಿಮಾದಲ್ಲಿ ರಾಗಿಣಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಆರ್ಮಿ ಕಮಾಂಡೊ ಆಫೀಸರ್ ಪಾತ್ರದಲ್ಲಿ ರಾಗಿಣಿ ಅಭಿನಯಿಸುತ್ತಿದ್ದಾರೆ.
ಇತ್ತೀಚಿಗೆ ನಟಿ ರಾಗಿಣಿ ದ್ವಿವೇದಿ ನಟನೆಯ ʼಬಿಂಗೊʼ ಸಿನಿಮಾದ ಮುಹೂರ್ತ ನೆರವೇರಿತು. ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣ ವಾಗುತ್ತಿದೆ.
ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ರಾಗಿಣಿ ಅವರು ಆಗಾಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇತ್ತೀಚಿಗೆ ಅವರ ಬಿಕಿನಿ ಫೋಟೋಗಳು ಸಖತ್ ವೈರಲ್ ಆಗಿದ್ದವು.