ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಚಿಲುಮೆ ಸಂಸ್ಥೆಗೆ ಇರುವ ಸಂಬಂಧ ಏನು? ಅಂತಾ ಬಿಜೆಪಿ ಪ್ರಶ್ನಿಸಿದೆ. #ಕಾಂಗ್ರೆಸ್ಚಿಲುಮೆ ಹ್ಯಾಶ್ಟ್ಯಾಗ್ ಬಳಸಿ ಭಾನುವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
‘ಮತದಾರರ ಪಟ್ಟಿಯ ಪರಿಷ್ಕರಣೆಯು ಈಗ ಕೇಂದ್ರ ಚುನಾವಣಾ ಆಯೋಗದ ವ್ಯಾಪ್ತಿಯಲ್ಲಿದ್ದು, ಅವರ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಆಯೋಗವು ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲು ನಿರ್ದೇಶನ ನೀಡಿದ್ದು, ಅದರಂತೆ ಕ್ರಮ ವಹಿಸಲಾಗಿದೆ’ ಎಂದು ಬಿಜೆಪಿ ಹೇಳಿದೆ.
ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಈ ಪ್ರಕರಣವು ಇರುವುದಿಲ್ಲ. ಹೀಗಾಗಿ ಬೇರಾವ ಕ್ರಮ ತೆಗೆದುಕೊಳ್ಳುವ ವಿಚಾರವು ಉದ್ಭವಿಸುವುದಿಲ್ಲ. ಐದು ವರ್ಷ @siddaramaiah ನವರಿಗೆ ಇದು ತಿಳಿದಿಲ್ಲವೇ?#ಕಾಂಗ್ರೆಸ್ಚಿಲುಮೆ
— BJP Karnataka (@BJP4Karnataka) November 26, 2022
‘ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಈ ಪ್ರಕರಣವು ಇರುವುದಿಲ್ಲ. ಹೀಗಾಗಿ ಬೇರಾವ ಕ್ರಮ ತೆಗೆದುಕೊಳ್ಳುವ ವಿಚಾರವು ಉದ್ಭವಿಸುವುದಿಲ್ಲ. 5 ವರ್ಷ ಸಿದ್ದರಾಮಯ್ಯವರಿಗೆ ಇದು ತಿಳಿದಿಲ್ಲವೇ? 2017ರಲ್ಲಿ ಪ್ರಥಮ ಬಾರಿಗೆ ನಿಮ್ಮ ಸರ್ಕಾರದ ಅವಧಿಯಲ್ಲಿ ಚುನಾವಣಾ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಚಿಲುಮೆಗೆ ಆದೇಶ ನೀಡಲಾಗಿತ್ತು. ಸಿದ್ದರಾಮಯ್ಯನವರೇ ಇದನ್ನು ನೀವು ಮರೆತಿದ್ದೀರಾ ಅಥವಾ ಜಾಣ ಮರೆವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.
ಇದನ್ನೂ ಓದಿ: ಗಡಿ ವಿವಾದ: ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ!
ಸಿದ್ದರಾಮಯ್ಯ ಹಾಗೂ ಚಿಲುಮೆ ಸಂಸ್ಥೆಗೆ ಇರುವ ಸಂಬಂಧ ಏನು?@siddaramaiah ಅವರೇ ಇದನ್ನು ಮೊದಲು ಸ್ಪಷ್ಟಪಡಿಸಿ. ಅದನ್ನು ಬಿಟ್ಟು ನಮ್ಮ ಸರ್ಕಾರದ ಮೇಲೆ ಹುರುಳಿಲ್ಲದ ಆಪಾದನೆ ಮಾಡಲು ಯಾವ ನೈತಿಕತೆ ಇದೆ?#ಕಾಂಗ್ರೆಸ್ಚಿಲುಮೆ
— BJP Karnataka (@BJP4Karnataka) November 26, 2022
‘ಸಿದ್ದರಾಮಯ್ಯ ಹಾಗೂ ಚಿಲುಮೆ ಸಂಸ್ಥೆಗೆ ಇರುವ ಸಂಬಂಧ ಏನು? ಸಿದ್ದರಾಮಯ್ಯನವರೇ ಇದನ್ನು ಮೊದಲು ಸ್ಪಷ್ಟಪಡಿಸಿ. ಅದನ್ನು ಬಿಟ್ಟು ನಮ್ಮ ಸರ್ಕಾರದ ಮೇಲೆ ಹುರುಳಿಲ್ಲದ ಆಪಾದನೆ ಮಾಡಲು ಯಾವ ನೈತಿಕತೆ ಇದೆ?’ ಅಂತಾ ಬಿಜೆಪಿ ಕಿಡಿಕಾರಿದೆ.
ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದ್ದೇ ಕಾಂಗ್ರೆಸ್
‘ಸಂವಿಧಾನವನ್ನೇ ಬದಲಿಸಲು ಹೊರಟ ಬಿಜೆಪಿ ಸರ್ಕಾರ ಮತದಾರರ ಮಾಹಿತಿ ಕಳ್ಳತನದ ಮೂಲಕ ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದೆ. ಜನರ ಸಂವಿಧಾನದತ್ತವಾದ ಮತದಾನದ ಹಕ್ಕನ್ನೇ ಕಸಿದು ಪ್ರಜಾಪ್ರಭುತ್ವವನ್ನ ಹೈಜಾಕ್ ಮಾಡಲು ಹೊರಟಿದೆ. ಶಾಸಕರ ಖರೀದಿ, ಮತದಾರರ ಮಾಹಿತಿ ಕಳ್ಳತನ ಎಂಬ ಕ್ಷುದ್ರ ರಾಜಕಾರಣದಿಂದ ಬಿಜೆಪಿ ಸಂವಿಧಾನಕ್ಕೆ ಅಪಚಾರ ಎಸಗುತ್ತಿದೆ’ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತ್ತು.
ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದ್ದೆ ಕಾಂಗ್ರೆಸ್
ಸದನದಲ್ಲಿ ಚರ್ಚೆ ಮಾಡದೆ 40 ಸೆಕೆಂಡ್ನಲ್ಲಿ ಇಂದಿರಾ ಗಾಂಧಿ ಕಾನೂನು ರೂಪಿಸಿದ್ದರು.
ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಹೇರಿದ್ದು ಕಾಂಗ್ರೆಸ್.
ಸಂವಿಧಾನ ರಚಿಸಿದ ಡಾ. ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿ ದೇಶದಲ್ಲಿ ಎರಡೆರಡು ಧ್ವಜ ಹಾರಿಸಿದ್ದು ಕಾಂಗ್ರೆಸ್ https://t.co/OC7bGDLHzn
— BJP Karnataka (@BJP4Karnataka) November 27, 2022
ಇದನ್ನೂ ಓದಿ: Bengaluru's potholes: ಹಳೆ ಮುದುಕಿಗೆ ಶೃಂಗಾರ ಅಂದಂಗಾಯ್ತು ಬೆಂಗಳೂರಿನ ರಸ್ತೆಗಳ ಅವಸ್ಥೆ!
ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ, ‘ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದ್ದೆ ಕಾಂಗ್ರೆಸ್’ ಎಂದು ಕಿಡಿಕಾರಿದೆ. ‘ಸದನದಲ್ಲಿ ಚರ್ಚೆ ಮಾಡದೆ 40 ಸೆಕೆಂಡ್ನಲ್ಲಿ ಇಂದಿರಾ ಗಾಂಧಿ ಕಾನೂನು ರೂಪಿಸಿದ್ದರು. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಹೇರಿದ್ದು ಕಾಂಗ್ರೆಸ್. ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿ ದೇಶದಲ್ಲಿ ಎರಡೆರಡು ಧ್ವಜ ಹಾರಿಸಿದ್ದು ಕಾಂಗ್ರೆಸ್’ ಅಂತಾ ಬಿಜೆಪಿ ಕುಟುಕಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.