ಚಳಿಗಾಲದ ಋತುವಿನಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು ಬಹಳ ಮುಖ್ಯ. ಇದಕ್ಕಾಗಿ ಚಳಿಗಾಲದಲ್ಲಿ ಸಿಗುವ ಹಣ್ಣುಗಳನ್ನು ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ.
ನವದೆಹಲಿ: ದೇಶದಲ್ಲಿ ಇದೀಗ ಚಳಿಗಾಲದ ಅಬ್ಬರ ಶುರುವಾಗಿದೆ. ಈ ಋತುವಿನಲ್ಲಿ ಹೆಚ್ಚಿನ ಜನರು ಸೋಂಕು, ಶೀತ, ಗಂಟಲು ನೋವು, ಜ್ವರದಂತಹ ಕಾಯಿಲೆಗಳಿಂದ ತೊಂದರೆಗೊಳಗಾಗುತ್ತಾರೆ. ಇದಕ್ಕಾಗಿಯೇ ಈ ಋತುವಿನಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು ಬಹಳ ಮುಖ್ಯ. ಇದಕ್ಕಾಗಿ ಚಳಿಗಾಲದಲ್ಲಿ ಸಿಗುವ ಹಣ್ಣುಗಳನ್ನು ನಿಮ್ಮ ಆಹಾರದ ಭಾಗವಾಗಿರಿಸಿಕೊಳ್ಳಬೇಕು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕ್ಯಾನ್ ಬೆರ್ರಿ ಸೇವನೆಯು ದೇಹಕ್ಕೆ ತುಂಬಾ ಆರೋಗ್ಯಕರ. ಇವು ಸಣ್ಣ ಕೆಂಪು ಬಣ್ಣದ ಸಿಹಿ ಹಣ್ಣುಗಳಾಗಿವೆ. ಇವುಗಳನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಇದರ ರಸವನ್ನು ಸಹ ನೀವು ಕುಡಿಯಬಹುದು.
ಚಳಿಗಾಲದಲ್ಲಿ ಕಿತ್ತಳೆ ಹಣ್ಣು ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿರುತ್ತದೆ. ಇದರಲ್ಲಿ ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಇದ್ದು, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಚಳಿಗಾಲದಲ್ಲಿ ಪೇರಲ ಹಣ್ಣನ್ನು ತಿನ್ನಬೇಕು. ಏಕೆಂದರೆ ಇದರಲ್ಲಿ ವಿಟಮಿನ್ ಸಿ, ಡಿ ಜೊತೆಗೆ ಕ್ಯಾಲ್ಸಿಯಂ, ಫೈಬರ್ ಮತ್ತು ಕಬ್ಬಿಣವಿದೆ. ಇದಕ್ಕಾಗಿಯೇ ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
ಕಿವಿ ಹಣ್ಣು ಪ್ರತಿ ಋತುವಿನಲ್ಲಿ ಸುಲಭವಾಗಿ ಲಭ್ಯವಿರುತ್ತದೆ. ಚಳಿಗಾಲದಲ್ಲಿ ಇದನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡದ ಸಮಸ್ಯೆ ಇರುವುದಿಲ್ಲ. ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನೂ ಬಲಪಡಿಸುತ್ತದೆ.
ಸೀತಾಫಲ ಹಣ್ಣು ಚಳಿಗಾಲದಲ್ಲಿ ಯಥೇಚ್ಛವಾಗಿ ಲಭ್ಯವಿರುತ್ತದೆ ಮತ್ತು ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ಕ್ಯಾಲ್ಸಿಯಂ ಮತ್ತು ಅನೇಕ ಖನಿಜಗಳು ದೇಹವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.