IND vs BAN Pitch Report: 2ನೇ ಏಕದಿನ ಪಂದ್ಯದಲ್ಲಿ ಅಬ್ಬರಿಸಲಿದ್ದಾರೆ ಟೀಂ ಇಂಡಿಯಾದ ಸ್ಟಾರ್ ಬೌಲರ್: ಸಹಕರಿಸುತ್ತಾ ಈ ಪಿಚ್?

IND vs BAN 2nd ODI Match-Pitch Report: ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪಡೆಯಲಿರುವ ಪಿಚ್ ಸ್ಪಿನ್ ಬೌಲರ್‌ಗಳಿಗೆ ಸಾಕಷ್ಟು ಸಹಾಯ ಮಾಡಲಿದ್ದು, ಈ ಪಿಚ್‌ನಲ್ಲಿ 250 ರನ್ ಗಳಿಸಿದರೆ ಮ್ಯಾಚ್ ವಿನ್ನಿಂಗ್ ಎಂದು ಸಾಬೀತುಪಡಿಸುತ್ತದೆ. ಇದೇ ಮೈದಾನದಲ್ಲಿ ಮೊದಲ ಏಕದಿನ ಪಂದ್ಯವೂ ನಡೆದಿದ್ದು, ಬಾಂಗ್ಲಾದೇಶದ ಆಲ್ ರೌಂಡರ್ ಶಕೀಬ್ ಅಲ್ ಹಸನ್ 10 ಓವರ್ ಗಳಲ್ಲಿ 36 ರನ್ ನೀಡಿ 5 ವಿಕೆಟ್ ಪಡೆದಿದ್ದರು. ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ಅಕ್ಷರ್ ಪಟೇಲ್ ಅವರನ್ನು ಪ್ಲೇಯಿಂಗ್ XI ಗೆ ಸೇರಿಸಿದರೆ, ಈ ಪಿಚ್‌ನಲ್ಲಿ ಅಬ್ಬರಿಸೋದು ಖಚಿತವಾಗಿದೆ.

Written by - Bhavishya Shetty | Last Updated : Dec 6, 2022, 10:04 AM IST
    • ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ
    • ಮೀರ್ಪುರದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ
    • ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲರ್‌ಗಳು ವಿಧ್ವಂಸಕತೆಯನ್ನು ಸೃಷ್ಟಿಸಲಿದ್ದಾರೆ
IND vs BAN Pitch Report: 2ನೇ ಏಕದಿನ ಪಂದ್ಯದಲ್ಲಿ ಅಬ್ಬರಿಸಲಿದ್ದಾರೆ ಟೀಂ ಇಂಡಿಯಾದ ಸ್ಟಾರ್ ಬೌಲರ್: ಸಹಕರಿಸುತ್ತಾ ಈ ಪಿಚ್? title=
india vs bangladesh

IND vs BAN 2nd ODI Match-Pitch Report: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಮೀರ್ಪುರದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಡಿಸೆಂಬರ್ 7ರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಶುಭ ಸುದ್ದಿಯೊಂದು ಸಿಕ್ಕಿದೆ. ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲರ್‌ಗಳು ವಿಧ್ವಂಸಕತೆಯನ್ನು ಸೃಷ್ಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಟೀಮ್ ಇಂಡಿಯಾಗೆ ಮೀರ್‌ಪುರದ ಪಿಚ್ ಅತ್ಯಂತ ಸಹಕಾರಿಯಾಗಲಿದೆ.

ಇದನ್ನೂ ಓದಿ: IND vs BAN 2nd ODI: ಟೀಂ ಇಂಡಿಯಾದ ಆರಂಭಿಕ ಆಟಗಾರ ಚೇಂಜ್! ಧವನ್-ರಾಹುಲ್ ಬದಲು ಎಂಟ್ರಿ ಕೊಟ್ಟಿದ್ಯಾರು?

ಟೀಂ ಇಂಡಿಯಾದ ಬೌಲರ್ ಅಬ್ಬರ!

ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪಡೆಯಲಿರುವ ಪಿಚ್ ಸ್ಪಿನ್ ಬೌಲರ್‌ಗಳಿಗೆ ಸಾಕಷ್ಟು ಸಹಾಯ ಮಾಡಲಿದ್ದು, ಈ ಪಿಚ್‌ನಲ್ಲಿ 250 ರನ್ ಗಳಿಸಿದರೆ ಮ್ಯಾಚ್ ವಿನ್ನಿಂಗ್ ಎಂದು ಸಾಬೀತುಪಡಿಸುತ್ತದೆ. ಇದೇ ಮೈದಾನದಲ್ಲಿ ಮೊದಲ ಏಕದಿನ ಪಂದ್ಯವೂ ನಡೆದಿದ್ದು, ಬಾಂಗ್ಲಾದೇಶದ ಆಲ್ ರೌಂಡರ್ ಶಕೀಬ್ ಅಲ್ ಹಸನ್ 10 ಓವರ್ ಗಳಲ್ಲಿ 36 ರನ್ ನೀಡಿ 5 ವಿಕೆಟ್ ಪಡೆದಿದ್ದರು. ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ಅಕ್ಷರ್ ಪಟೇಲ್ ಅವರನ್ನು ಪ್ಲೇಯಿಂಗ್ XI ಗೆ ಸೇರಿಸಿದರೆ, ಈ ಪಿಚ್‌ನಲ್ಲಿ ಅಬ್ಬರಿಸೋದು ಖಚಿತವಾಗಿದೆ.

ಅಕ್ಷರ್ ಪಟೇಲ್ ಎಡಗೈ ಸ್ಪಿನ್ ಬೌಲರ್ ಆಗಿದ್ದು, ಎರಡನೇ ಏಕದಿನ ಪಂದ್ಯದಲ್ಲಿ ಮಿರ್‌ಪುರ ಪಿಚ್‌ನ ಲಾಭ ಪಡೆಯುವ ಮೂಲಕ ಬಾಂಗ್ಲಾದೇಶದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಬಹುದು. ಬಾಂಗ್ಲಾದೇಶದ ಎಡಗೈ ಸ್ಪಿನ್ನರ್ ಶಕೀಬ್ ಅಲ್ ಹಸನ್ ಮೊದಲ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಟೀಂ ಇಂಡಿಯಾಗೆ ಸೋಲುಣಿಸಿದ್ದರು. ಅದೇ ರೀತಿ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್ ಬೌಲರ್ ಅಕ್ಷರ್ ಪಟೇಲ್ ಬಾಂಗ್ಲಾದೇಶದ ಬ್ಯಾಟಿಂಗ್ ಲೈನ್ ಅಪ್ ಅನ್ನು ಕೆಡವುವ ಎಲ್ಲಾ ಸಾಧ್ಯತೆ ಇದೆ.

ಇದನ್ನೂ ಓದಿ: Team India 2023 schedule: 2023ರಲ್ಲಿ ಹೀಗಿರಲಿದೆ ಟೀಂ ಇಂಡಿಯಾದ ಕ್ರಿಕೆಟ್ ವೇಳಾಪಟ್ಟಿ

ಮಿರ್‌ಪುರದ ಪಿಚ್‌ನಲ್ಲಿ ಟೀಂ ಇಂಡಿಯಾ ಆಟ:

ಟೀಮ್ ಇಂಡಿಯಾದ ಸ್ಪಿನ್ ಬೌಲರ್‌ಗಳು ಮೀರ್‌ಪುರದ ಪಿಚ್‌ನ ಲಾಭವನ್ನು ಪಡೆಯಬಹುದು. ಅಕ್ಷರ್ ಪಟೇಲ್ ಜೊತೆಗೆ ಆಫ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಕೂಡ ಈ ಪಿಚ್‌ನಲ್ಲಿ ತುಂಬಾ ಅಪಾಯಕಾರಿ ಎಂದು ಸಾಬೀತುಪಡಿಸಬಹುದು. ಒಂದು ವೇಳೆ ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇ ಬೇಕಾದರೆ ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ಬೌಲರ್ ಗಳಲ್ಲಿ ಒಬ್ಬರು 5 ವಿಕೆಟ್ ಕಬಳಿಸಬೇಕು. ಭಾರತ ಮತ್ತು ಬಾಂಗ್ಲಾದೇಶ ನಡುವೆ ಇದುವರೆಗೆ ಒಟ್ಟು 36 ಏಕದಿನ ಪಂದ್ಯಗಳು ನಡೆದಿದ್ದು, ಇದರಲ್ಲಿ ಟೀಂ ಇಂಡಿಯಾ 30 ಪಂದ್ಯಗಳನ್ನು ಗೆದ್ದಿದೆ. ಬಾಂಗ್ಲಾದೇಶ ತಂಡವು 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News