ದಕ್ಷಿಣ ಕನ್ನಡ : ಕಾಂತಾರ ಸಿನಿಮಾ ನೋಡಲು ಥಿಯೇಟರ್ಗೆ ಹೋಗಿದ್ದ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ಮುಸ್ಲಿಂ ಯುವಕರು ತರಾಟೆಗೆ ತೆಗೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಸಂತೋಷ್ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದ್ದು, ಕಾಲೇಜು ತಪ್ಪಿಸಿ ಕಾಂತಾರ ಸಿನಿಮಾ ವೀಕ್ಷಣೆಗೆ ಬಂದಿದ್ದಕ್ಕೆ ಯುವಕರು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಹಿಜಾಬ್ ಧರಿಸಿದ್ದ ಯುವತಿ ಮತ್ತು ಅದೇ ಸಮುದಾಯದ ಯುವಕ ಕಾಂತಾರ ಸಿನಿಮಾ ವೀಕ್ಷಣೆಗೆ ಥಿಯೇಟರ್ಗೆ ಬಂದಿದ್ದ ಬಗ್ಗೆ ಮಾಹಿತಿ ಪಡೆದ ಯುವಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ : “ಪ್ರಜಾತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ ಕೇಂದ್ರದ ಪ್ರಭುತ್ವಕ್ಕೆ ಕಾಲ ಉತ್ತರಿಸಲಿದೆ”
ವಾಹನ ಪಾರ್ಕಿಂಗ್ ಸ್ಥಳದಲ್ಲಿ ಸ್ಥಳೀಯ ಕೆಲವು ಮುಸ್ಲಿಂ ಯುವಕರು ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಳ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಮುಸ್ಲಿಂ ಯುವಕರ ಎಚ್ಚರಿಕೆ ಬಳಿಕ ವಿದ್ಯಾರ್ಥಿಗಳು ಸ್ಥಳದಿಂದ ತೆರಳಿದ್ದಾರೆ ಎನ್ನಲಾಗಿದೆ. ಅಲ್ಲದೆ, ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ. ಘಟನೆ ಬಗ್ಗೆ ತಿಳಿದ ಸುಳ್ಯ ಪೊಲೀಸರು ಎಲ್ಲರನ್ನೂ ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.
ಈ ಮಧ್ಯ, ಈಗಾಗಲೇ ಅಮೆಜಾನ್ ಪ್ರೈಮ್ ಓಟಿಟಿಯಲ್ಲಿ ಕಾಂತಾರ ಬಿಡುಗಡೆಯಾಗಿದೆ. ಕನ್ನಡ ಭಾಷೆ ಸೇರಿದಂತೆ ಮಲಯಾಳಂ, ತೆಲುಗು, ತಮಿಳು ಭಾಷೆಯಲ್ಲಿ ಸಿನಿಮಾ ಲಭ್ಯವಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.