ಚಾಮರಾಜನಗರ : ಎರಡನೇ ಬಾರಿ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿರುವ ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ವರುಣ ಕಾಡುವ ಆತಂಕ ಶುರುವಾಗಿದೆ. ಸಿಎಂ ಕಾರ್ಯಕ್ರಮದ ಹಿನ್ನೆಲೆಯಲ್ಲಿ 25 ಸಾವಿರ ಆಸನ ವ್ಯವಸ್ಥೆ ಕಲ್ಪಿಸಿರುವ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ.
ಹೌದು, ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಿಎಂ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ ಮಾಡಲಾಗಿದೆ. ಈ ಕಾರ್ಯಕ್ರಮದ ಸಲುವಾಗಿ ಮಂಗಳವಾರ ಬೊಮ್ಮಾಯಿ ಆಗಮಿಸಲಿದ್ದಾರೆ. ಆದರೆ, ಮಳೆ ಬಂದರೆ ಕ್ರೀಡಾಂಗಣದಲ್ಲಿ ನೀರು ನಿಲ್ಲುವುದರಿಂದ ವೇದಿಕೆ ಆವರಣ ಕೆಸರುಮಯವಾಗಿದ್ದು ಅಧಿಕಾರಿಗಳು ಪೇಚಿಗೆ ಸಿಲುಕಿದ್ದಾರೆ.
ಇದನ್ನೂ ಓದಿ : DK Shivakumar challenges BJP: ಮೊದಲು ಪಾಲಿಕೆ ಚುನಾವಣೆ ನಡೆಸಲಿ: ಬಿಜೆಪಿಗೆ ಡಿಕೆಶಿ ಸವಾಲ್
ಮ್ಯಾಂಡೋಸ್ ಚಂಡಮಾರತದ ಪರಿಣಾಮ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಎಡಬಿಡದೇ ಮಳೆಯಾಗುತ್ತಿದೆ. ಇನ್ನೂ 3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸದ್ಯ, ಕೆಸರುಮಯ ಸ್ಥಳಕ್ಕೆ ಮಣ್ಣು ಸುರಿದು ಹದ ಮಾಡುವ ಕೆಲಸ ನಡೆಯುತ್ತಿದೆ. ನೀರು ಕ್ರೀಡಾಂಗಣದ ಒಳಕ್ಕೆ ನುಗ್ಗದಂತೆ ಚರಂಡಿಗಳನ್ನು ಸಹ ತೆಗೆಯಲಾಗಿದೆ. ಆದರೆ ಜೋರು ಮಳೆಯಾದರೆ ಮುಂದೇನು ಎಂಬ ಚಿಂತೆ ಸದ್ಯಕ್ಕೆ ಕಾಡುತ್ತಿದೆ.
ಇನ್ಮು, ಬಸವರಾಜ ಬೊಮ್ಮಾಯಿ ಎರಡನೇ ಬಾರಿ ಜಿಲ್ಲೆಗೆ ಭೇಟಿ ಕೊಡುತ್ತಿದ್ದು ನೂರಾರು ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಚಾಲನೆ ಕೊಡಲಿದ್ದಾರೆ. 25 ಸಾವಿರ ಆಸನ ವ್ಯವಸ್ಥೆ ಕಲ್ಪಿಸಿರುವ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ.
ಇದನ್ನೂ ಓದಿ : ಬಿಜೆಪಿ ಫ್ಲೆಕ್ಸ್ ತೆಗೆಯುವಂತೆ ಎಸ್ಡಿಪಿಐ, ಬಿಎಸ್ಪಿ ಪ್ರತಿಭಟನೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.