ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಮಹತ್ವ : ಸಿಎಂ ಬೊಮ್ಮಾಯಿ

ಕೇಂದ್ರ ಗೃಹ ಸಚಿವರು ಗಡಿವಿವಾದ ದ ಬಗ್ಗೆ ಚರ್ಚಿಸಲೆಂದೇ ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು  ದೆಹಲಿಗೆ ಕರೆದಿದ್ದಾರೆ.  ಅಲ್ಲಿ ನಮ್ಮ ನಿಲುವಿನ ಬಗ್ಗೆ ಹೇಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   

Written by - Prashobh Devanahalli | Edited by - Ranjitha R K | Last Updated : Dec 13, 2022, 12:29 PM IST
  • ಚಾಮರಾಜನಗರ ಅಭಿವೃದ್ಧಿಗೆ ಮಹತ್ವ ಕೊಟ್ಟೇ ಕೊಡುತ್ತೇವೆ
  • ಸಿಎಂ ಆದ ಬಳಿಕ ಮೂರನೇ ಬಾರಿಗೆ ಜಿಲ್ಲೆ ಭೇಟಿ
  • ಮಾಂಡೋಸ್ ಚಂಡಮಾರುತ: ಬೆಳೆ ಹಾನಿ ಸಮೀಕ್ಷೆ
ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಮಹತ್ವ  : ಸಿಎಂ ಬೊಮ್ಮಾಯಿ title=
CM Basavaraja Bommai

ಮೈಸೂರು : ಚಾಮರಾಜನಗರ ಜಿಲ್ಲೆಯೂ ಕೂಡ 31 ಜಿಲ್ಲೆಗಳ ಪೈಕಿ ಮಹತ್ವದ ಜಿಲ್ಲೆ. ನಿಸರ್ಗಭರಿತ, ಐತಿಹಾಸಿಕ ಗಡಿ ಜಿಲ್ಲೆಯಾಗಿದೆ. ಈ ಜಿಲ್ಲೆಯ ಅಭಿವೃದ್ಧಿಗೆ ಮಹತ್ವ ಕೊಟ್ಟೇ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿಯಾದ ನಂತರ ಮೂರನೇ ಬಾರಿಗೆ ಜಿಲ್ಲೆ ಭೇಟಿ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. 

ಗಡಿವಿವಾದದ ಬಗ್ಗೆ ಚರ್ಚೆ : 
ಕೇಂದ್ರ ಗೃಹ ಸಚಿವರು ಗಡಿವಿವಾದ ದ ಬಗ್ಗೆ ಚರ್ಚಿಸಲೆಂದೇ ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆದಿದ್ದಾರೆ.  ಅಲ್ಲಿ ನಮ್ಮ ನಿಲುವಿನ ಬಗ್ಗೆ ಹೇಳುತ್ತೇವೆ. ಈಗಾಗಲೇ ರಾಜ್ಯ ಪುನರ್ ವಿಂಗಡನಾ ಕಾಯ್ದೆ, ಪ್ರಕ್ರಿಯೆ, ಸುಪ್ರೀಂ ಕೋರ್ಟ್ ಪ್ರಕರಣ ಸೇರಿದಂತೆ ಎಲ್ಲಾ ಮಾಹಿತಿಯನ್ನು ಗೃಹ ಸಚಿವರಿಗೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ : ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಿಎಂ ಬಸವರಾಜ ಬೊಮ್ಮಾಯಿ

ಮಾಂಡೋಸ್ ಚಂಡಮಾರುತ : ಬೆಳೆ ಹಾನಿ ಸಮೀಕ್ಷೆ
ಮಾಂಡೋಸ್ ಚಂಡ ಮಾರುತದಿಂದ ಕೆಲವು ತೊಂದರೆಗಳಗಾಗಿದೆ.  ವಿಶೇಷವಾಗಿ ಬೆಳೆಗಳ ಮೇಲೆ ಆಗಿರುವ ಪ್ರಭಾವ ಏನೆಂದು ಸಮೀಕ್ಷೆ ಮಾಡಲಾಗುತ್ತಿದೆ. ರಾಗಿ, ಬೆಳೆದು ನಿಂತಿದೆ. ಕಾಟಾವು ಮಾಡಿದವರಿಗೆ ಕಷ್ಟವಾಗುತ್ತಿದೆ ಎಂಬ ವರದಿ ಬಂದಿದೆ. ಕೃಷಿ ಇಲಾಖೆಯಿಂದ ಈ ಬಗ್ಗೆ  ಸಂಪೂರ್ಣ ಮಾಹಿತಿ ತರಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. 

ಸಚಿವ ಸಂಪುಟ ವಿಸ್ತರಣೆ :
ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಹೋಗುತ್ತಿದ್ದೇವೆ. ಅನಂತರ ಸಚಿವ ಸಂಪುಟ  ವಿಸ್ತರಣೆ ಬಗ್ಗೆ ಚರ್ಚೆಯಾದರೆ ಚರ್ಚಿಸಲಾಗುವುದು. ಈ ಬಗ್ಗೆ ಸಿದ್ಧತೆ ಮಾಡಿಕೊಂಡು ಹೋಗಿರುತ್ತೇನೆ  ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. 

ಇದನ್ನೂ ಓದಿ : ಕಾಂಗ್ರೆಸ್ ನಾಯಕರು ಸ್ವಂತಿಕೆ ಮರೆತು ‘ಜೀ ಹುಜೂರ್’ ಸಂಸ್ಕೃತಿಗೆ ಶರಣಾಗಿದ್ದಾರೆ: ಬಿಜೆಪಿ

ಚೀನಾವನ್ನು ಸಮರ್ಥವಾಗಿ ಹಿಮ್ಮೆಟ್ಟಿಸುತ್ತೇವೆ :
ದೇಶದ ಗಡಿಯಲ್ಲಿ ಚೀನಾ ಮತ್ತು ಭಾರತದ ಸೈನಿಕರ ನಡುವೆ ಸಂಘರ್ಷ ಉಂಟಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ, ಈಗ ಹಿಂದಿನಂಥ ಸರ್ಕಾರವಿಲ್ಲ. ರಕ್ಷಣಾ ಪಡೆಗಳೂ ಸನ್ನದ್ಧವಾಗಿವೆ. ಅಂದಿನ ನಾಯಕತ್ವ ರಕ್ಷಣಾ ಪಡೆಗಳಿಗೆ ಯಾವುದೇ  ನಿರ್ದೇಶನ ನೀಡಲಿಲ್ಲ. ಈಗ ಸ್ಪಷ್ಟ ನಿರ್ದೇಶನವಿದೆ. ರಸ್ತೆ, ಸೇತುವೆ, ಸಲಕರಣೆ ಮುಂತಾದ ಸಂಪರ್ಕ ಸಾಧನಗಳನ್ನು ಬಲಪಡಿಸಲಾಗಿದೆ.  ಚೀನಾವನ್ನು ಸಮರ್ಥವಾಗಿ ಹಿಮ್ಮೆಟ್ಟಿಸುತ್ತೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News