ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದಿನಿಂದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭ

     

Last Updated : Nov 24, 2017, 04:05 PM IST
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದಿನಿಂದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ   ಸಮ್ಮೇಳನ ಆರಂಭ title=

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದಿನಿಂದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಲಿದೆ.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಮೂರು ದಿನಗಳ ಕನ್ನಡ ಅಕ್ಷರ ಜಾತ್ರೆ ನಡೆಯಲಿದ್ದು, ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ್ ಈ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. 

ಮೈಸೂರು ಅರಮನೆಯ ದರ್ಬಾರ್ ಮಾದರಿಯಲ್ಲಿ ಮುಖ್ಯವೇದಿಕೆ ಸಿದ್ಧ ಮಾಡಲಾಗಿದೆ. ಒಟ್ಟು 22 ಗೋಷ್ಠಿಗಳು ನಡೆಯಲಿವೆ. ಪ್ರಧಾನ ವೇದಿಕೆಯಲ್ಲಿ ಸಮ್ಮೇಳನದ ಮೊದಲ ದಿನದ ಸಂಜೆ 5 ಗಂಟೆಗೆ ಮಾಧ್ಯಮ ಮುಂದಿರುವ ಸವಾಲು ಕುರಿತು ಪ್ರಮುಖ ಗೋಷ್ಠಿ ನಡೆಯಲಿದೆ.

11 ಸಾವಿರ ಪ್ರತಿನಿಧಿಗಳು ಸಮ್ಮೇಳನಕ್ಕೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಲು 200 ಕೌಂಟರ್ ತೆರೆಯಲಾಗಿದ್ದು ಊಟಕ್ಕಾಗಿ 2,75 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.

ಸಮ್ಮೇಳನದ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಭಾಷೆ ಬೆಳೆಯಲು ಸಾಹಿತ್ಯವೂ ಅತ್ಯಂತ ಮುಖ್ಯ. ಸಾಹಿತ್ಯ ಮತ್ತು ಸಾಹಿತಿಗಳನ್ನು ಪ್ರೋತ್ಸಾಹಿಸಿ, ಗೌರವಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿದ್ದೇವೆ. ೮೩ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡದ ಕಂಪನ್ನು ನಾಡಿನ ಮೂಲೆಮೂಲೆಗೂ ಹರಡುವಲ್ಲಿ ಯಶಸ್ವಿಯಾಗಲಿ, ಕನ್ನಡ ನಾಡು-ನುಡಿ ಮತ್ತಷ್ಟು ಹೆಮ್ಮರವಾಗಿ ಬೆಳೆಯಲಿ ಎಂದು ಹಾರೈಸುವುದಾಗಿ ಹೇಳಿದ್ದಾರೆ. 

Trending News