ನವ ದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 15 ರಿಂದ ಆರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಜನವರಿ 5 ರಂದು ಅಧಿವೇಶನ ಕೊನೆಗೊಳ್ಳಲಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನವು 14 ದಿನಗಳವರೆಗೆ ನಡೆಯಲಿದ್ದು, ಡಿಸೆಂಬರ್ 25 ಮತ್ತು 26 ರಂದು ಕ್ರಿಸ್ಮಸ್ ಪ್ರಯುಕ್ತ ರಜೆ ಇರಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಖಚಿತಪಡಿಸಿದ್ದಾರೆ.
ಚಳಿಗಾಲದ ಅಧಿವೇಶನವನ್ನು ಯಶಸ್ವಿಯಾಗಿ ಮತ್ತು ಫಲಪ್ರದವಾಗಿಸಲು ರಾಜಕೀಯ ಪಕ್ಷಗಳು ಸಹಕಾರ ನೀಡುವ ಮೂಲಕ, ಹೊಸ ವರ್ಷದ ದಿನವೂ ಸೇರಿದಂತೆ ಎಲ್ಲಾ 14 ದಿನಗಳಲ್ಲಿ ಪ್ರತಿಯೊಬ್ಬರೂ ಹಾಜರಿರುತ್ತೆವೆಂದು ನಿರೀಕ್ಷಿಸುತ್ತೇನೆ ಎಂದು ಬಿಜೆಪಿ ನಾಯಕನೊಬ್ಬರು ಹೇಳಿದರು.
ಕಳೆದ ಕೆಲವು ದಿನಗಳಿಂದ, ಆಡಳಿತ ಪಕ್ಷಗಳ ಅಕ್ರಮಗಳು ಮತ್ತು ಗುಜರಾತ್ ನ ರಾಫೆಲ್ ಒಪ್ಪಂದ ಸೇರಿದಂತೆ "ವಂಚನೆಗಳ" ಬಗೆಗಿನ ಚರ್ಚೆಯನ್ನು ತಪ್ಪಿಸಲು ಸರಕಾರ ಅಧಿವೇಶನವನ್ನು ವಿಳಂಬಗೊಳಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು.
ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟದ ಸಮಿತಿಯು ಬುಧವಾರ ಸಭೆ ಸೇರಿ ಈ ನಿರ್ಧಾರ ಕೈಗೊಂಡಿದ್ದು, ಅಧಿವೇಶನ ಜನವರಿ 5 ರಂದು ಕೊನೆಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.