Detox Liver: ಶೀತ ವಾತಾವರಣದಲ್ಲಿ ಲಿವರ್ ಆರೋಗ್ಯಕ್ಕೆ ಹೀಗೆ ಮಾಡಿ

Liver Health Care Tips: ಪ್ರತಿಯೊಬ್ಬರೂ ತಮ್ಮ ಲಿವರ್ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಯಕೃತ್ತಿನಲ್ಲಿ ಯಾವುದೇ ರೀತಿಯ ಸಮಸ್ಯೆಯುಂಟಾದರೆ ನಮ್ಮ ದೇಹದ ಕೆಲಸ ಮಾಡುವ ಸಾಮರ್ಥ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

Liver Health Care Tips: ಪಿತ್ತಜನಕಾಂಗವು ನಮ್ಮ ದೇಹದ ಬಹುಮುಖ್ಯ ಅಂಗವಾಗಿದೆ. ಹೀಗಾಗಿಯೇ ಇದರ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ನಾವು ತಿನ್ನುವ ಯಾವುದೇ ಆಹಾರ ಜೀರ್ಣಿಸಿಕೊಳ್ಳಲು ಯಕೃತ್ತು ಸಹಾಯ ಮಾಡುತ್ತದೆ. ಮತ್ತೊಂದೆಡೆ ಯಕೃತ್ತಿನಲ್ಲಿ ಯಾವುದೇ ರೀತಿಯ ಸಮಸ್ಯೆಯುಂಟಾದರೆ ನಮ್ಮ ದೇಹದ ಕೆಲಸ ಮಾಡುವ ಸಾಮರ್ಥ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ ಲಿವರ್ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿವಹಿಸಬೇಕು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಬೆಚ್ಚಗಿನ ನೀರಿನಿಂದ ನಿಂಬೆ ಕುಡಿಯುವುದರ ಮೂಲಕ ನಿಮ್ಮ ಯಕೃತ್ತನ್ನು ಸಹ ನೀವು ಡಿಟಾಕ್ಸ್ ಮಾಡಬಹುದು. ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಳಸಬಹುದು.

2 /5

ಯಕೃತ್ತನ್ನು ಸ್ವಚ್ಛವಾಗಿಡಲು ನಿಮ್ಮ ಆಹಾರದಲ್ಲಿ ನೀವು ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಿಕೊಳ್ಳಬೇಕು. ಇದು ಯಕೃತ್ತಿನಿಂದ ವಿಷವನ್ನು ತೆಗೆದುಹಾಕುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

3 /5

ಮದ್ಯಪಾನ ಮತ್ತು ಧೂಮಪಾನವನ್ನು ತ್ಯಜಿಸುವ ಮೂಲಕ ನಿಮ್ಮ ಯಕೃತ್ತಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಏಕೆಂದರೆ ಆಲ್ಕೋಹಾಲ್ ಸೇವನೆಯು ನಿಮ್ಮ ಯಕೃತ್ತಿಗೆ ತುಂಬಾ ಹಾನಿಕಾರಕವಾಗಿದೆ. ಆದ್ದರಿಂದ ಅದರಿಂದ ಆದಷ್ಟು ದೂರವಿರುವುದು ಉತ್ತಮ.

4 /5

ಪ್ರತಿದಿನವೂ ನೀವು ಸಾಕಷ್ಟು ನೀರು ಕುಡಿಯಬೇಕು. ದಿನಕ್ಕೆ 8 ಗ್ಲಾಸ್ ನೀರು ಕುಡಿಯುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ. ಹೀಗೆ ಮಾಡುವುದರಿಂದ ನಿಮ್ಮ ಯಕೃತ್ತನ್ನು ನಿರ್ವಿಷಗೊಳಿಸಬಹುದು.

5 /5

ಲಿವರ್ ಆರೋಗ್ಯವಾಗಿರಲು ವ್ಯಾಯಾಮ ಮಾಡಬೇಕು. ಪ್ರತಿದಿನ ವ್ಯಾಯಾಮ ಮಾಡುವುದು ಯಕೃತ್ತಿಗೆ ತುಂಬಾ ಪ್ರಯೋಜನಕಾರಿ. ಅದಕ್ಕಾಗಿಯೇ ಪ್ರತಿದಿನ 30 ನಿಮಿಷಗಳ ಕಾಲ ವ್ಯಾಯಾಮ ಮಾಡಿ. (ವಿಶೇಷ ಸೂಚನೆ: ಇಲ್ಲಿ ನೀಡಲಾಗಿರುವ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿ ಆಧರಿಸಿದೆ. ಈ ಸಲಹೆ ಪಾಲಿಸುವ ಮುನ್ನ ನೀವು ಕಡ್ಡಾಯವಾಗಿ ವೈದ್ಯರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)