ಬೆಂಗಳೂರು : ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಔಷಧಿಗಳಿಲ್ಲದೆ ಈ ರೋಗವನ್ನು ನಿಯಂತ್ರಿಸುವುದು ಕಷ್ಟ. ಆದರೆ ಆಹಾರದಲ್ಲಿ ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು. ಅಡುಗೆಮನೆಯಲ್ಲಿಯೇ ಇರುವ ಕೆಲವು ಸಾಂಬಾರ ಪದಾರ್ಥಗಳನ್ನು ಬಳಸುವ ಮೂಲಕ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಬಹುದು.
ಮೆಂತ್ಯೆ ಕಾಳು :
ಮೆಂತ್ಯೆ ಬೀಜಗಳು ಮಧುಮೇಹ ನಿಯಂತ್ರಣಕ್ಕೆ ಸಹಕಾರಿ. ಮೆಂತ್ಯೆ ಬೀಜಗಳಲ್ಲಿ ಫೈಬರ್ ಪ್ರಮಾಣ ಹೆಚ್ಚಾಗಿರುತ್ತದೆ. ಮೆಂತ್ಯೆ ಬೀಜ ಮಧುಮೇಹ ವಿರೋಧಿ ಗುಣಗಳನ್ನು ಹೊಂದಿರುತ್ತವೆ. ಮೆಂತ್ಯೆ ಕಾಳುಗಳನ್ನು ನೆನೆಸಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಬಹುದು. ಅಲ್ಲದೆ ಮೆಂತ್ಯೆ ಯನ್ನು ಪುಡಿ ಮಾಡಿಟ್ಟುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಕೂಡಾ ಪರಿಣಾಮಕಾರಿಯಾಗಿರುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ ಮೆಂತ್ಯೆ ಬೀಜಗಳ ಸೇವನೆಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ : ಚಳಿಗಾಲದಲ್ಲಿ ಮುದ್ದು ಮಗುವಿನ ಆರೈಕೆ ಮಾಡಲು 7 ಟಿಪ್ಸ್..! ತಪ್ಪದೆ ನೋಡಿ
ಕರಿ ಮೆಣಸು :
ಕರಿಮೆಣಸು ಆ್ಯಂಟಿಆಕ್ಸಿಡೆಂಟ್ ಗುಣಗಳಿಂದ ಸಮೃದ್ದವಾಗಿದ್ದು, ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಕರಿಮೆಣಸಿನ ಪುಡಿಯನ್ನು ಅರಿಶಿನದೊಂದಿಗೆ ಬೆರೆಸಿ ಸೇವಿಸಬೇಕು. ಆಹಾರ ಸೇವಿಸುವ ಒಂದು ಗಂಟೆ ಮೊದಲು ಈ ಮಿಶ್ರಣವನ್ನು ಸೇವಿಸಿದರೆ ಸಕ್ಕರೆ ನಿಯಂತ್ರಣಕ್ಕೆ ಬರುತ್ತದೆ.
ಚಕ್ಕೆ :
ಚಕ್ಕೆಯಲ್ಲಿ ಅನೇಕ ರೀತಿಯ ಔಷಧೀಯ ಗುಣಗಳಿವೆ. ಮಧುಮೇಹ ರೋಗಿಗಳಿಗೂ ಇದು ಬಹಳ ಪ್ರಯೋಜನಕಾರಿ. ಚಕ್ಕೆ ಕಷಾಯವು ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅರಿಶಿನ ಮತ್ತು ಮೆಂತ್ಯೆ ಬೀಜಗಳೊಂದಿಗೆ ಚಕ್ಕೆ ಪುಡಿಯನ್ನು ಕೂಡಾ ತಯಾರಿಸಿಟ್ಟು ಕೊಳ್ಳಿ. ಈ ಪುಡಿಯನ್ನು ಬಿಸಿ ನೀರಿನಲ್ಲಿ ಹಾಕಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಹೀಗೆ ಮಾಡುತ್ತಾ ಬಂದರೆ ರಕ್ತದ ಸಕ್ಕರೆ ಕೂಡಾ ನಿಯಂತ್ರಣಕ್ಕೆ ಬರುತ್ತದೆ.
ಇದನ್ನೂ ಓದಿ : Winter Health tips : ಚಳಿಗಾಲ ಇದೆ ಅಂತ ಮಲ್ಕೊಂಡೆ ಇರ್ಬೇಡಿ.. ಮಾರ್ನಿಂಗ್ ಈ ಕೆಲಸ ಮಾಡಿ..!
ಆಹಾರ ಪದ್ಧತಿ ಹೀಗಿರಬೇಕು :
ಮಧುಮೇಹವನ್ನು ನಿಯಂತ್ರಿಸಬೇಕಾದರೆ ಮುಖ್ಯವಾಗಿ ನಾವು ಸೇವಿಸುವ ಆಹಾರದ ಬಗ್ಗೆ ಗಮನ ಹರಿಸಬೇಕು. ನಾವು ಸೇವಿಸುವ ಆಹಾರವು ತಕ್ಷಣವೇ ದೇಹದಲ್ಲಿ ರಕ್ತದ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಬಯಸುವುದಾದರೆ ಹೆಚ್ಚಿನ ಕಾರ್ಬೋಹೈಡ್ರೇಟ್ ಆಹಾರವನ್ನು ಸೇವಿಸಬಾರದು. ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್, ಹೆಚ್ಚಿನ ಫೈಬರ್, ಪ್ರೋಟೀನ್ ಮತ್ತು ಆಂಟಿ-ಆಕ್ಸಿಡೆಂಟ್‌ಗಳಲ್ಲಿ ಸಮೃದ್ಧವಾಗಿರುವ ವಸ್ತುಗಳನ್ನು ತಿನ್ನುವುದು ಪ್ರಯೋಜನಕಾರಿಯಾಗಿರುತ್ತದೆ.
( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.