VEDHA: ಶಿವಣ್ಣನ 125ನೇ ಸಿನಿಮಾ ‘ವೇದ’ ಸಿಕ್ತು ಅದ್ಧೂರಿ ಓಪನಿಂಗ್, ಅಭಿಮಾನಿಗಳಿಂದ ಹೋಮ

ಹಿರಿಯ ನಟ ಶಿವರಾಜಕುಮಾರ್ ಅಭಿನಯದ 125ನೇ ಚಿತ್ರ ‘ವೇದ’ ರಿಲೀಸ್ ಹಿನ್ನೆಲೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಗೀತಾ ಪಿಕ್ಚರ್ಸ್ ನಲ್ಲಿ ‘ವೇದ’ ಸಿನಿಮಾವನ್ನು ಗೀತಾ ಶಿವರಾಜಕುಮಾರ್ ನಿರ್ಮಾಣ ಮಾಡಿದ್ದಾರೆ.

Last Updated : Dec 23, 2022, 11:27 AM IST
  • ಹ್ಯಾಟ್ರಿಕ್ ಶಿವರಾಜಕುಮಾರ್ ಅಭಿನಯದ 125ನೇ ಸಿನಿಮಾ ಅದ್ದೂರಿಯಾಗಿ ಬಿಡುಗಡೆ
  • ಬೆಂಗಳೂರು ಸೇರಿ ರಾಜ್ಯಾದ್ಯಂತ ಸಾವಿರಕ್ಕೂ ಹೆಚ್ಚು ಸ್ಕ್ರೀನ್‍ಗಳಲ್ಲಿ ಸಿನಿಮಾ ರಿಲೀಸ್ ಅಗಿದೆ
  • ‘ವೇದ’ ಸಿನಿಮಾ ರಿಲೀಸ್ ಹಿನ್ನೆಲೆ ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಅಭಿಮಾನಿಗಳಿಂದ ಹೋಮ
VEDHA: ಶಿವಣ್ಣನ 125ನೇ ಸಿನಿಮಾ ‘ವೇದ’ ಸಿಕ್ತು ಅದ್ಧೂರಿ ಓಪನಿಂಗ್, ಅಭಿಮಾನಿಗಳಿಂದ ಹೋಮ title=
‘ವೇದ’ ಅದ್ದೂರಿ ಬಿಡುಗಡೆ

ಬೆಂಗಳೂರು: ಹ್ಯಾಟ್ರಿಕ್ ಶಿವರಾಜಕುಮಾರ್ ಅಭಿನಯದ 125ನೇ ಸಿನಿಮಾ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಬೆಂಗಳೂರು ಸೇರಿ ರಾಜ್ಯಾದ್ಯಂತ ಸಾವಿರಕ್ಕೂ ಹೆಚ್ಚು ಸ್ಕ್ರೀನ್‍ಗಳಲ್ಲಿ ಸಿನಿಮಾ ರಿಲೀಸ್ ಅಗಿದೆ.

ಬೆಳಗ್ಗೆ 5 ಗಂಟೆಗೆ ಮೊದಲ ಶೋ ಶುರುವಾಗಿದ್ದು, ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಬೆಂಗಳೂರಿನ ನರ್ತಕಿ ಥೀಯೇಟರ್‍ಗೆ ಶಿವಣ್ಣನ ಆಗಮನ ಹಿನ್ನೆಲೆ ಭರದಿಂದ ಸಿದ್ಧತೆ ನಡೆದಿದೆ.

ಇದನ್ನೂ ಓದಿ: ಕಾಂತಾರ-2 ಬರುವುದು ಪಕ್ಕಾ...! ನಿರ್ಮಾಪಕರು ಹೇಳಿದ್ದೇನು?

ಚಿತ್ರಮಂದಿರದಲ್ಲಿ ಅಭಿಮಾನಿಗಳಿಂದ ಹೋಮ

ಹಿರಿಯ ನಟ ಶಿವರಾಜಕುಮಾರ್ ಅಭಿನಯದ 125ನೇ ಚಿತ್ರ ‘ವೇದ’ ರಿಲೀಸ್ ಹಿನ್ನೆಲೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಗೀತಾ ಪಿಕ್ಚರ್ಸ್ ನಲ್ಲಿ ‘ವೇದ’ ಸಿನಿಮಾವನ್ನು ಗೀತಾ ಶಿವರಾಜಕುಮಾರ್ ನಿರ್ಮಾಣ ಮಾಡಿದ್ದಾರೆ.

ರಾಜ್ಯಾದ್ಯಂತ ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ರಿಲೀಸ್ ಆಗಿರುವ ‘ವೇದ’ ಸಿನಿಮಾಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನ ಕೆಲವು ಚಿತ್ರಮಂದಿರಗಳಲ್ಲಿ ಬೆಳಗ್ಗೆ 6 ಗಂಟೆಗೆ ‘ವೇದ’ ಸಿನಿಮಾ ಬಿಡುಗಡೆಯಾಗಿದೆ. ಗೌಡನಪಾಳ್ಯದ ಶ್ರೀನಿವಾಸ, ಜೆಪಿನಗರದ ಸಿದ್ದೇಶ್ವರ, ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ವಿಶೇಷ ಶೋ ಆಯೋಜಿಸಲಾಗಿತ್ತು.

ಇದನ್ನೂ ಓದಿ: Vedha : ಶಿವಣ್ಣ ಅಭಿನಯದ 125 ನೇ ಚಿತ್ರ ವೇದ ರಿಲೀಸ್

‘ವೇದ’ ಸಿನಿಮಾ ರಿಲೀಸ್ ಹಿನ್ನೆಲೆ ಪ್ರಸನ್ನ ಚಿತ್ರಮಂದಿರದಲ್ಲಿ ಅಭಿಮಾನಿಗಳು ಹೋಮ ಮಾಡಿಸಿದ್ದಾರೆ. ಬೆಳಗ್ಗೆ 10:30ರ ಶೋಗೆ ನರ್ತಕಿ ಚಿತ್ರಮಂದಿರಕ್ಕೆ ಶಿವಣ್ಣ ದಂಪತಿ ಆಗಮಿಸಿ ಚಿತ್ರವನ್ನು ವೀಕ್ಷಿಸಿದ್ದಾರೆ. ಈ ವೇಳೆ ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಸಾವಿರಾರು ಅಭಿಮಾನಿಗಳು ಚಿತ್ರಮಂದಿರದ ಬಳಿ ಜಮಾಯಿಸಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News