Ayurvedic oil for joint pain: ನಿಮಗೂ ಕೀಲು ನೋವಿನ ಸಮಸ್ಯೆ ಕಾಡುತ್ತಿದೆಯೇ? ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಮನೆಯಲ್ಲಿಯೇ ಸುಲಭವಾಗಿ ಲಭ್ಯವಿರುವ ಕೆಲವು ತೈಲಗಳನ್ನು ಬಳಸುವ ಮೂಲಕ ನೀವು ಈ ಸಮಸ್ಯೆಯಿಂದ ಸುಲಭ ಪರಿಹಾರ ಪಡೆಯಬಹುದು.
Ayurvedic oil for joint pain: ಕೀಲು ನೋವು ವಯೋಸಹಜ ಕಾಯಿಲೆ. ಆದರೆ, ಪ್ರಸ್ತುತ ಬದಲಾದ ಜೀವನ ಶೈಲಿಯಿಂದಾಗಿ ಅತಿ ಸಣ್ಣ ವಯಸ್ಸಿನಲ್ಲಿಯೂ ಕೂಡ ಕೀಲು ನೋವು ಹಲವರನ್ನು ಬಾಧಿಸುತ್ತದೆ. ಅದರಲ್ಲೂ ಚಳಿಗಾಲ ಬಂತೆಂದರೆ ಕೀಲು ನೋವಿನ ಸಮಸ್ಯೆ ಹೆಚ್ಚು ಕಾಡುತ್ತದೆ. ನಿಮಗೂ ಕೀಲು ನೋವಿನ ಸಮಸ್ಯೆ ಕಾಡುತ್ತಿದೆಯೇ? ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಮನೆಯಲ್ಲಿಯೇ ಸುಲಭವಾಗಿ ಲಭ್ಯವಿರುವ ಕೆಲವು ತೈಲಗಳನ್ನು ಬಳಸುವ ಮೂಲಕ ನೀವು ಈ ಸಮಸ್ಯೆಯಿಂದ ಸುಲಭ ಪರಿಹಾರ ಪಡೆಯಬಹುದು. ಆಯುರ್ವೇದದ ಪ್ರಕಾರ, ಕೀಲು ನೋವಿನಿಂದ ಪರಿಹಾರ ಪಡೆಯಲು ಮನೆಯಲ್ಲಿ ಲಭ್ಯವಿರುವ ಈ ತೈಲಗಳಿಂದ ಮಸಾಜ್ ಮಾಡಿದರೆ ಅಷ್ಟೇ ಸಾಕು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಾದಾಮಿ ಎಣ್ಣೆ: ಬಾದಾಮಿಯನ್ನು ಮೆದುಳಿನ ಆರೋಗ್ಯಕ್ಕೆ ಉತ್ತಮ ಎಂದು ಪರಿಗಣಿಸಲಾಗಿದೆ. ಅಂತೆಯೇ ಬಾದಾಮಿ ಎಣ್ಣೆಯಲ್ಲಿ ವಿಟಮಿನ್ ಇ ಸಮೃದ್ಧವಾಗಿದ್ದು ಈ ತೈಲದಿಂದ ಮಸಾಜ್ ಮಾಡುವುದರಿಂದ ಮೂಳೆಗಳು ಬಲಗೊಳ್ಳುತ್ತವೆ ಎಂದು ಹೇಳಲಾಗುತ್ತದೆ. ಇದಕ್ಕಾಗಿ, ಬಾದಾಮಿ ಎಣ್ಣೆಯನ್ನು ಸ್ವಲ್ಪ ಬೆಚ್ಚಗೆ ಮಾಡಿ ಕೀಲುಗಳಿಗೆ ಮಸಾಜ್ ಮಾಡಿ.
ತೆಂಗಿನ ಎಣ್ಣೆ: ಪ್ರತಿ ಮನೆಯಲ್ಲಿಯೂ ತೆಂಗಎಣ್ಣೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಇದನ್ನು ಕೊಬ್ಬರಿ ಎಣ್ಣೆ ಎಂದು ಕರೆಯಲಾಗುತ್ತದೆ. ಕೀಲು ನೋವಿನಿಂದ ಪರಿಹಾರವನ್ನು ಪಡೆಯಲು ಬಯಸುವವರಿಗೆ ಕೊಬ್ಬರಿ ಎಣ್ಣೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಈ ಎಣ್ಣೆಯು ಉರಿಯೂತದ ಮತ್ತು ನೋವು ನಿವಾರಕ ಗುಣಗಳನ್ನು ಹೊಂದಿದ್ದು ಇದನ್ನು ಸ್ವಲ್ಪ ಬಿಸಿ ಮಾಡಿ ಮಸಾಜ್ ಮಾಡುವುದರಿಂದ ಕೀಲು ನೋವಿನಿಂದ ಸುಲಭವಾಗಿ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ.
ಸಾಸಿವೆ ಎಣ್ಣೆ: ಆಯುರ್ವೇದದ ಪ್ರಕಾರ, ಸಾಸಿವೆ ಎಣ್ಣೆ ಕೂಡ ಕೀಲು ನೋವಿಗೆ ಪರಿಹಾರ ನೀಡುತ್ತದೆ. ಕೀಲು ನೋವಿನ ಸಮಸ್ಯೆ ಇರುವವರು ಒಂದೆರಡು ಚಮಚ ಸಾಸಿವೆ ಎಣ್ಣೆಯೊಂದಿಗೆ ಒಂದೆರಡು ಎಸಳು ಬೆಳ್ಳುಳ್ಳಿ ಹಾಕಿ ಬಿಸಿ ಮಾಡಿ ಅದು ಸ್ವಲ್ಪ ತಣ್ಣಗಾದ ಬಳಿಕ ಅದರಿಂದ ಮಸಾಜ್ ಮಾಡುವುದು ಅತ್ಯುತ್ತಮ ಪರಿಹಾರ ನೀಡುತ್ತದೆ ಎಂದು ಪರಿಗಣಿಸಲಾಗಿದೆ.
ಆಲಿವ್ ಎಣ್ಣೆ: ಆಯುರ್ವೇದದಲ್ಲಿ ಆಲಿವ್ ಆಯಿಲ್ ಅನ್ನು ಕೀಲು ನೋವಿಗೆ ಅತ್ಯುತ್ತಮ ಔಷಧ ಎಂದು ಪರಿಗಣಿಸಲಾಗಿದೆ. ಆಲಿವ್ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ರಕ್ತಪರಿಚಲನೆ ಸರಾಗವಾಗಿ ನೋವಿನಿಂದಲೂ ಪರಿಹಾರ ದೊರೆಯುತ್ತದೆ ಎನ್ನಲಾಗುತ್ತದೆ.
ಎಳ್ಳೆಣ್ಣೆ: ಹೆಚ್ಚು ಮಾಯಿಶ್ಚರೈಸರ್ ಅನ್ನು ಹೊಂದಿರುವ ಎಳ್ಳೆಣ್ಣೆಯಿಂದ ಮಸಾಜ್ ಮಾಡುವುದರಿಂದ ಕೀಲುಗಳಿಗೆ ಸಾಕಷ್ಟು ಪರಿಹಾರ ದೊರೆಯುತ್ತದೆ ಎಂದು ಹೇಳಲಾಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.