ಮೈಸೂರು: ಮೈಸೂರಿನ ಅಗ್ನಿಶಾಮಕ ವಸತಿ ಗೃಹದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ 6 ಮಂದಿಗೆ ಗಾಯಗಳಾಗಿದೆ.
ಘಟನೆಯಲ್ಲಿ ಗೃಹಿಣಿ ಗೀತಾ(34)ರಿಗೆ ಗಂಭೀರ ಗಾಯವಾಗಿದೆ. ಅವರ ಪುತ್ರಿ ಮೌನ(10), ಪುತ್ರ ಮಿಥುನ್(6) ಹಾಗೂ ಪಕ್ಕದ ಮನೆ ಸವಿತಾ (38) ಭಾಗ್ಯಮ್ಮ(62)ರಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಸೇರಿ 5 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಾರಿನಲ್ಲಿದ್ದ ಮೊಬೈಲ್ ಸ್ಪೋಟ..!
ಮಂಗಳವಾರ(ಜ.3) ರಾತ್ರಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿತ್ತು. ಇಂದು ಬೆಳಗ್ಗೆ 7.15ರ ವೇಳೆ ಮೈಸೂರಿನ ಬನ್ನಿಮಂಟಪದ ಬಳಿ ಇರುವ ಅಗ್ನಿಶಾಮಕ ವಸತಿ ಗೃಹದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ.
ಅಗ್ನಿಶಾಮಕ ಸಿಬ್ಬಂದಿ ಮಹದೇವ್ ಎಂಬುವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಎಂದಿನಂತೆ ಬೆಳಗ್ಗೆ ಹಾಲು ಕಾಯಿಸಲು ಹೋದಾಗ ಇದ್ದಕ್ಕಿದ್ದಂತೆಯೇ ಸಿಲಿಂಡರ್ ಸ್ಫೋಟಗೊಂಡಿದೆ. ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.