Mr Bachelor: ನಾಳೆ ‘MR ಬ್ಯಾಚುಲರ್’ ಆಗಮನ…

ನಾನು ಇಲ್ಲಿಯವರೆಗೆ ಯಾವ ಚಿತ್ರದಲ್ಲೂ ಹಾಕಿರದಷ್ಟು ಬಟ್ಟೆಗಳನ್ನು ಈ ಚಿತ್ರದಲ್ಲಿ ಹಾಕಿದ್ದೇನೆ. ಅದಕ್ಕೆ ನಿರ್ದೇಶಕರೆ ಕಾರಣ. ಅವರಿಗೆ ಸಾಕಷ್ಟು ಅಭಿರುಚಿಯಿದೆ. ಮಿಲನ ನಾಗರಾಜ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ ಎಂದು ನಾಯಕ ಡಾರ್ಲಿಂಗ್ ಕೃಷ್ಣ ಹೇಳಿದ್ದಾರೆ.

Written by - Zee Kannada News Desk | Last Updated : Jan 5, 2023, 11:02 AM IST
  • ಡಾರ್ಲಿಂಗ್ ಕೃಷ್ಣ ನಟಿಸಿರುವ "Mr ಬ್ಯಾಚುಲರ್" ಸಿನಿಮಾ ನಾಳೆ ಬಿಡುಗಡೆಯಾಗಲಿದೆ
  • ಈ ಚಿತ್ರ ಒಪ್ಪಿಕೊಂಡ ನಂತರವೇ ನಿರ್ಮಾಪಕನಾಗಿ "ಲವ್ ಮಾಕ್ಟೇಲ್" ಚಿತ್ರ ಮಾಡಿದ್ದು ಎಂದ ಕೃಷ್ಣ
  • "Mr ಬ್ಯಾಚುಲರ್"ನ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟಿ-ನಿರ್ಮಾಪಕಿ ಮಿಲನಾ ನಾಗರಾಜ್
Mr Bachelor: ನಾಳೆ ‘MR ಬ್ಯಾಚುಲರ್’ ಆಗಮನ…  title=
"Mr ಬ್ಯಾಚುಲರ್" ನಾಳೆ ಬಿಡುಗಡೆ

ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "Mr ಬ್ಯಾಚುಲರ್" ಚಿತ್ರ ಜನವರಿ 6ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನಡೆಯಿತು.

‘ನಾನು ಮೊದಲೇ ಹೇಳಿದ ಹಾಗೆ ಈ ಚಿತ್ರದ ಮೇಲೆ ನನಗೆ ವಿಶೇಷ ಪ್ರೀತಿ. ಏಕೆಂದರೆ ನಾನು ಈ ಚಿತ್ರ ಒಪ್ಪಿಕೊಂಡ ನಂತರ ನಿರ್ಮಾಪಕನಾಗಿ "ಲವ್ ಮಾಕ್ಟೇಲ್" ಚಿತ್ರ ಮಾಡಿದ್ದು. ಇನ್ನು ಚಿತ್ರದ ಬಗ್ಗೆ ‌ಹೇಳಬೇಕೆಂದರೆ ನಿರ್ದೇಶಕ ನಾಯ್ಡು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಅವರು ಕಥೆ ಹೇಳಲು ಬಂದಾಗಲೇ ಕಥೆ ಕೇಳಿ ಸಾಕಷ್ಟು ಎಂಜಾಯ್ ಮಾಡಿದ್ದೆ’ ಎಂದು ನಾಯಕ ಡಾರ್ಲಿಂಗ್ ಕೃಷ್ಣ ಹೇಳಿದರು.

ಇದನ್ನೂ ಓದಿ: ಸೀಕ್ರೆಟ್ ಡೇಟಿಂಗ್ ನಲ್ಲಿ ರಶ್ಮಿಕಾ - ವಿಜಯ್ .! ಕತೆ ಹೇಳುತ್ತಿದೆ ಈ ಫೋಟೋ

‘ನಾನು ಇಲ್ಲಿಯವರೆಗೆ ಯಾವ ಚಿತ್ರದಲ್ಲೂ ಹಾಕಿರದಷ್ಟು ಬಟ್ಟೆಗಳನ್ನು ಈ ಚಿತ್ರದಲ್ಲಿ ಹಾಕಿದ್ದೇನೆ. ಅದಕ್ಕೆ ನಿರ್ದೇಶಕರೆ ಕಾರಣ. ಅವರಿಗೆ ಸಾಕಷ್ಟು ಅಭಿರುಚಿಯಿದೆ. ಮಿಲನ ನಾಗರಾಜ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ನಿಮಿಕ ರತ್ನಾಕರ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಚೆನ್ನಾಗಿದೆ’ ಎಂದು ಕೃಷ್ಣ ಹೇಳಿದರು.  

‘ನಾಯ್ಡು ಅವರು ಈ ಚಿತ್ರದ ಕಥೆ ಹೇಳಿದಾಗಲೇ ಇಷ್ಟವಾಯಿತು. ನಾನು ಕೂಡ ಈ ಚಿತ್ರದಲ್ಲಿ ಅತಿಥಿಪಾತ್ರದಲ್ಲಿ ಅಭಿನಯಿಸಿದ್ದೇನೆ . ಚಿತ್ರಕ್ಕೆ ಒಳ್ಳೆಯದಾಗಲಿ’ ಎಂದು ನಟಿ-ನಿರ್ಮಾಪಕಿ ಮಿಲನ ನಾಗರಾಜ್ ಹೇಳಿದರು.

ಇದನ್ನೂ ಓದಿ: ನಿರ್ದೇಶಕ ಸಿಂಪಲ್ ಸುನಿ ಮುಂದಿನ ಚಿತ್ರಕ್ಕೆ ವಿನಯ್ ರಾಜ್ ಕುಮಾರ್ ನಾಯಕ

ತಮ್ಮ ಪಾತ್ರದ ಬಗ್ಗೆ ಹಾಗೂ ಚಿತ್ರದ ಕುರಿತು ನಿಮಿಕ ರತ್ನಾಕರ್ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ಸಾಕಷ್ಟು ಕಲಾವಿದರು ತಮ್ಮ‌ ಅನುಭವ ಹಂಚಿಕೊಂಡರು. ‘ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಡಾರ್ಲಿಂಗ್ ಕೃಷ್ಣ ಸೇರಿದಂತೆ ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ’ ಎಂದು ನಿರ್ದೇಶಕ ನಾಯ್ಡು ತಿಳಿಸಿದರು.

ನಿರ್ಮಾಪಕರಾದ ಶ್ರೀನಿವಾಸ್, ಹನುಮಂತ ರಾವ್ ಹಾಗೂ ಸ್ವರ್ಣಲತಾ, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ಛಾಯಾಗ್ರಾಹಕ & ಸಂಕಲನಕಾರ ಶ್ರೀ ಕ್ರೇಜಿಮೈಂಡ್ಸ್ ಹಾಗೂ ವಿತರಕ ಬೆಂಗಳೂರು ಕುಮಾರ್ ತಮ್ಮ ಅಭಿಪ್ರಾಯ ಹಂಚಿಕೊಂಡರು. ನಿರ್ಮಾಪಕ ಹಾಗೂ ನಿರ್ದೇಶಕ ಗುರು ದೇಶಪಾಂಡೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News