India vs Sri Lanka ODI Series: T20 ಸರಣಿಯ ನಂತರ, ಭಾರತ ತಂಡವು ಶ್ರೀಲಂಕಾ ವಿರುದ್ಧ ಮೂರು ODIಗಳನ್ನು ಆಡಬೇಕಾಗಿದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಅನುಭವಿ ಆಟಗಾರರು ಮರಳುತ್ತಿದ್ದಾರೆ. ಈ ಸರಣಿಯಿಂದಲೇ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ಸಿದ್ಧತೆ ಆರಂಭಿಸಲಿದೆ. ಇದೀಗ ಏಕದಿನ ಸರಣಿಗೆ ನಾಯಕ ರೋಹಿತ್ ಶರ್ಮಾ ಭರ್ಜರಿ ತಯಾರಿ ಆರಂಭಿಸಿದ್ದಾರೆ.
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯ ಜನವರಿ 10 ರಂದು ಗುವಾಹಟಿಯಲ್ಲಿ ನಡೆಯಲಿದೆ. ಇದಕ್ಕಾಗಿ ನಾಯಕ ರೋಹಿತ್ ಶರ್ಮಾ ಕಸರತ್ತು ಆರಂಭಿಸಿದ್ದು, ಕಠಿಣ ತಾಲೀಮು ನಡೆಸುತ್ತಿದ್ದಾರೆ. ಅದರ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಇವರ ವರ್ಕೌಟ್ ಕಂಡು ಶ್ರೀಲಂಕಾ ಆಟಗಾರರು ಭಯಭೀತರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಹೇಳುತ್ತಿದ್ದಾರೆ.
ರೋಹಿತ್ ಶರ್ಮಾ ವಿಶ್ವದ ಅತ್ಯಂತ ಅಪಾಯಕಾರಿ ಆರಂಭಿಕ ಬ್ಯಾಟ್ಸ್‌ಮನ್‌ಗಳೆಂದು ಪರಿಗಣಿಸಲ್ಪಟ್ಟಿದ್ದಾರೆ. ಆದರೆ ಕಳೆದ ವರ್ಷ ಅವರು ಉತ್ತಮವಾಗಿ ಆಟವಾಡಿಲ್ಲ. ಕಳೆದ ವರ್ಷ, ಅವರು 40 ಇನ್ನಿಂಗ್ಸ್‌ಗಳಲ್ಲಿ 995 ರನ್ ಗಳಿಸಿದ್ದರು. ಈ ರನ್‌ಗಳು 27.63 ಸರಾಸರಿಯನ್ನು ಹೊಂದಿದೆ. ಇನ್ನೊಂದೆಡೆ ಅವರ ನಾಯಕತ್ವದಲ್ಲಿ ಟೀಮ್ ಇಂಡಿಯಾ ಏಷ್ಯಾಕಪ್ ನ ಸೂಪರ್-4 ಹಂತದಿಂದ ಹೊರಗುಳಿಯಿತು. ಇದಾದ ಬಳಿಕ ಟಿ20 ವಿಶ್ವಕಪ್‌ನಲ್ಲೂ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್‌ನಲ್ಲಿ 10 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು.
ಇದನ್ನೂ ಓದಿ: Team India: ಅಂದು ದೇಶವೇ ಕೊಂಡಾಡುತ್ತಿದ್ದ ಈ ಸ್ಟಾರ್ ಬೌಲರ್ ನಿರ್ಮಿಸಿದ್ದು ಕಳಪೆ ದಾಖಲೆ!
ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 51 ರನ್‌ಗಳ ಇನ್ನಿಂಗ್ಸ್ ಆಡಿದ್ದರು. ಆದರೆ ಗೆಲ್ಲಲು ಸಾಧ್ಯವಾಗಲಿಲ್ಲ. ರೋಹಿತ್ ಶರ್ಮಾ ಭಾರತ ತಂಡಕ್ಕಾಗಿ ಎಲ್ಲಾ ಮೂರು ಮಾದರಿಗಳಲ್ಲಿ ಕ್ರಿಕೆಟ್ ಆಡಿದ್ದಾರೆ. ಭಾರತ ಪರ 45 ಟೆಸ್ಟ್ ಪಂದ್ಯಗಳಲ್ಲಿ 3137 ರನ್, 235 ಏಕದಿನ ಪಂದ್ಯಗಳಲ್ಲಿ 9454 ರನ್ ಗಳಿಸಿದ್ದಾರೆ. 148 ಟಿ20 ಪಂದ್ಯಗಳಲ್ಲಿ 3853 ರನ್ ಗಳಿಸಿದ್ದಾರೆ. ಅವರು ಎಲ್ಲಾ ಮೂರು ಮಾದರಿಗಳಲ್ಲಿ ಒಟ್ಟು 41 ಶತಕಗಳನ್ನು ಗಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.