IND vs SL 3rd ODI : ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತದ ಬೌಲಿಂಗ್ ಮತ್ತು ಬ್ಯಾಟಿಂಗ್ ದಾಳಿಗೆ ಶ್ರೀಲಂಕಾ (IND vs SL) ತತ್ತರಿಸಿದೆ. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 390 ರನ್ ಗಳಿಸಿತು. ಇದನ್ನ ಬೆನ್ನಟ್ಟಿದ ಶ್ರೀಲಂಕಾ 22 ಓವರ್‌ಗೆ 73 ರನ್ ಗಳಿಸಿ ಆಲ್ ಔಟ್ ಆದರು. ಟೀಂ ಇಂಡಿಯಾ 317 ರನ್ ಗಳಿಂದ ಜಯಗಳಿಸಿದೆ.
ವಿರಾಟ್ ಕೊಹ್ಲಿ ಈ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದರು, ಅವರು 166 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರೆ, ಶುಭಮನ್ ಗಿಲ್ 116 ರನ್ ಗಳಿಸಿದರು.
ಇದನ್ನೂ ಓದಿ : IND vs SL 3rd ODI : ಟೀಂ ಇಂಡಿಯಾಗೆ ಬಿಗ್ ಶಾಕ್ : ಶತಕ ಸಿಡಿಸಿ ಶುಭಮನ್ ಗಿಲ್ ಔಟ್!
ಟೀಂ ಇಂಡಿಯಾ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವಿನ ಮೂರನೇ ಏಕದಿನ ಪಂದ್ಯ ನಡೆಯಿತು.
ಟೀಂ ಇಂಡಿಯಾ 3-0 ಅಂತರದಲ್ಲಿ ಸರಣಿ ವಶ
ಶ್ರೀಲಂಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 317 ರನ್‌ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 390 ರನ್ ಗಳಿಸಿತ್ತು, ಇದಕ್ಕೆ ಉತ್ತರವಾಗಿ ಶ್ರೀಲಂಕಾ ತಂಡ 73 ರನ್‌ಗಳಿಗೆ ಆಲೌಟ್ ಮಾಡಿತು.
ಭಾರತದ ಭರ್ಜರಿ ಬ್ಯಾಟಿಂಗ್ ಮತ್ತು ಬೌಲಿಂಗ್
ಭಾರತದ ಬ್ಯಾಟ್ಸ್‌ಮನ್‌ಗಳ ನಂತರ ಬೌಲರ್‌ಗಳು ಕೂಡ ಭರ್ಜರಿ ಬೌಲಿಂಗ್ ಮಾಡಿದರು. ಶ್ರೀಲಂಕಾ ತಂಡದ ಅರ್ಧದಷ್ಟು ಆಟಗಾರರು ಕೇವಲ 37 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದ್ದಾರೆ.
390 ರನ್ ಕಲೆ ಹಾಕಿದ ಟೀಂ ಇಂಡಿಯಾ
ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 390 ರನ್ ಗಳಿಸಿತು. ವಿರಾಟ್ ಕೊಹ್ಲಿ ಭಾರತದಿಂದ ಈ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದರು, ಅವರು 166 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರೆ, ಶುಭಮನ್ ಗಿಲ್ 116 ರನ್ ಗಳಿಸಿದರು.
46ನೇ ಏಕದಿನ ಶತಕ ಸಿಡಿಸಿದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 46ನೇ ಶತಕ ಪೂರೈಸಿದ್ದಾರೆ. 85 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ.
ಬಿರುಸಿನ ಶತಕ ಸಿಡಿಸಿದ ಶುಭಮನ್ ಗಿಲ್
ಶುಭಮನ್ ಗಿಲ್ 89 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಶುಭಮನ್ ವೃತ್ತಿ ಜೀವನದ ಎರಡನೇ ಶತಕವಾಗಿದೆ. ಹಾಗೆ, ವಿರಾಟ್ ಕೊಹ್ಲಿ 48 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಈ ಪಂದ್ಯದಲ್ಲಿ ಭಾರತ ತಂಡ ಎರಡು ಪ್ರಮುಖ ಬದಲಾವಣೆ ಮಾಡಿದೆ. ಹಾರ್ದಿಕ್ ಪಾಂಡ್ಯ ಮತ್ತು ಉಮ್ರಾನ್ ಮಲಿಕ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್ ಗೆ ಅವಕಾಶ ನೀಡಿದ್ದಾರೆ.
ಎರಡು ತಂಡಗಳ ಪ್ಲೇಯಿಂಗ್-11:
ಭಾರತದ ಪ್ಲೇಯಿಂಗ್-11: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಶ್ರೀಲಂಕಾದ ಪ್ಲೇಯಿಂಗ್-11: ಅವಿಷ್ಕಾ ಫೆರ್ನಾಂಡೊ, ಎನ್. ಫೆರ್ನಾಂಡೋ, ಕುಸಾಲ್ ಮೆಂಡಿಸ್, ಅಶಾನ್ ಭಂಡಾರ, ಚರಿತ್ ಅಸ್ಲಂಕಾ, ದಾಸುನ್ ಶನಕ, ವನಿಂದು ಹಸರಂಗ, ಜೆ. ವಂಡರ್ಸೆ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತ, ಲಹಿರು ಕುಮಾರ.
ಇದನ್ನೂ ಓದಿ : Virat Kohli Records: ಲಂಕಾ ವಿರುದ್ಧ 166 ರನ್ ಗಳ ‘ವಿರಾಟ’ ಪರ್ವ: ತವರಿನಲ್ಲಿ ತೆಂಡೂಲ್ಕರ್-ಜಯವರ್ಧನೆ ದಾಖಲೆ ಪುಡಿಪುಡಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.