Shukra Gochar 2023: ನವಗ್ರಹಗಳಲ್ಲಿ ಎಲ್ಲಾ ಗ್ರಹಗಳಿಗೂ ಅದರದೇ ಆದ ಮಹತ್ವವಿದೆ. ಪ್ರತಿ ಗ್ರಹದ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಕೂಡ ದ್ವಾದಶ ರಾಶಿಗಳ ಮೇಲೆ ಶುಭ ಅಶುಭ ಪರಿಣಾಮಗಳನ್ನು ಉಂಟು ಮಾಡಲಿದೆ. ಇದೀಗ ಇನ್ನೆರಡು ದಿನಗಳಲ್ಲಿ ಅಂದರೆ ಜನವರಿ 22, 2023 ರಂದು ಮಧ್ಯಾಹ್ನ 3.34ರ ಸುಮಾರಿಗೆ ಸುಖ-ಸಂಪತ್ತು, ಐಶಾರಾಮಿ ಜೀವನಕಾರಕ ಶುಕ್ರನು ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಇನ್ನೆರಡು ದಿನಗಳಲ್ಲಿ ಶುಕ್ರನು ತನ್ನ ಮಿತ್ರಗ್ರಹ ಶನಿಯ ರಾಶಿಚಕ್ರ ಚಿಹ್ನೆ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. ಇದರ ಪ್ರಭಾವದಿಂದಾಗಿ ನಾಲ್ಕು ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಇದೇ ವೇಳೆ ಒಂದು ರಾಶಿಯವರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲಾಗುತ್ತಿದೆ.
ಕುಂಭ ರಾಶಿಗೆ ಶುಕ್ರನ ಪ್ರವೇಶ, 4 ರಾಶಿಯವರಿಗೆ ಭಾರೀ ಅದೃಷ್ಟ :
ಮೇಷ ರಾಶಿ:
ಶುಕ್ರ ಸಂಕ್ರಮಣದ ಪ್ರಭಾವದಿಂದ ಈ ರಾಶಿಯವರು ತಮ್ಮ ಮಾತಿನ ಮೂಲಕವೇ ಇತರರನ್ನು ತಮ್ಮತ್ತ ಆಕರ್ಷಿಸುತ್ತಾರೆ. ವೃತ್ತಿ ರಂಗದಲ್ಲಿ ನಿಮ್ಮ ಕೆಲಸಕ್ಕೆ ಉನ್ನತ ಅಧಿಕಾರಿಗಳಿಂದ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಹಣಕಾಸಿನ ಮೂಲಗಳು ಹೆಚ್ಚಾಗಲಿದ್ದು ಆರ್ಥಿಕ ಸ್ಥಿತಿಯೂ ಸುಧಾರಿಸಲಿದೆ.
ಮಿಥುನ ರಾಶಿ:
ಶುಕ್ರನ ರಾಶಿ ಪರಿವರ್ತನೆಯ ಪರಿಣಾಮದಿಂದಾಗಿ ಈ ರಾಶಿಯವರಿಗೆ ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ಅಗತ್ಯವಿರುವವರಿಗೆ ನಿಮ್ಮ ಕೈಲಾದಷ್ಟು ದಾನ ಮಾಡುವುದು ಕೂಡ ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ವ್ಯಾಪಾರ-ವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರಯಾಣವು ಲಭಾದಾಯಕವಾಗಿರುತ್ತದೆ.
ಇದನ್ನೂ ಓದಿ- Shani Gachar 2023: ಎರಡೂವರೆ ವರ್ಷಗಳ ಕಾಲ ಕುಂಭ ರಾಶಿಯಲ್ಲಿರುವ ಶನಿ ನಿಮ್ಮ ಮೇಲೆ ಏನು ಪರಿಣಾಮ ಬೀರಲಿದ್ದಾನೆ?
ಸಿಂಹ ರಾಶಿ:
ಶುಕ್ರನ ಸಂಕ್ರಮಣದಿಂದಾಗಿ ಈ ರಾಶಿಯವರಿಗೆ ಸುವರ್ಣ ದಿನಗಳು ಆರಂಭವಾಗಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಪ್ರಶಂಸಿಸಲಾಗುತ್ತದೆ. ನೀವು ಕೆಲವು ಹೊಸ ಜವಾಬ್ದಾರಿಗಳನ್ನು ಸಹ ಪಡೆಯಬಹುದು. ಮದುವೆಗಾಗಿ ಯತ್ನಿಸುತ್ತಿರುವವರಿಗೆ ಸಮಯ ಉತ್ತಮವಾಗಿದ್ದು ಕಂಕಣ ಬಲ ಕೂಡಿಬರಲಿದೆ.
ಧನು ರಾಶಿ:
ಈ ಸಮಯದಲ್ಲಿ ಶುಕ್ರನು ಬರವಣಿಗೆಗೆ ಸಂಬಂಧಿಸಿದ ಜನರ ಅದೃಷ್ಟದ ಬಾಗಿಲನ್ನು ತೆರೆಯಲಿದ್ದಾನೆ. ಈ ಸಮಯದಲ್ಲಿ ನಿಮ್ಮ ಕೌಶಲ್ಯ ಸುಧಾರಿಸಲಿದ್ದು ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರಶಂಸೆಯನ್ನು ಪಡೆಯಲಿದ್ದೀರಿ. ಧಾರ್ಮಿಕ ಚಟುವಟಿಕೆಗಳಲ್ಲಿ ಒಲವು ಹೆಚ್ಚಾಗಲಿದೆ. ಶುಕ್ರ ಮಂತ್ರವನ್ನು ಪಠಿಸುವುದರಿಂದ ಈ ರಾಶಿಯವರಿಗೆ ನಿಮ್ಮ ಮನದ ಆಸೆಗಳು ಪೂರ್ಣಗೊಳ್ಳಲಿವೆ.
ಇದನ್ನೂ ಓದಿ- Budha Margi 2023: ಬುಧನ ನೇರ ಸಂಚಾರ ಪರಿಣಾಮ, ನಾಳೆಯಿಂದ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ
ಶುಕ್ರ ಸಂಕ್ರಮಣದ ಸಮಯದಲ್ಲಿ ಈ ರಾಶಿಯವರು ಎಚ್ಚರಿಕೆಯಿಂದ ಇರುವುದು ಅಗತ್ಯ:
ಮೀನ ರಾಶಿ:
ಶನಿಯ ರಾಶಿಯಲ್ಲಿ ಶುಕ್ರನ ರಾಶಿ ಪರಿವರ್ತನೆಯ ಸಮಯದಲ್ಲಿ ಮೀನ ರಾಶಿಯವರು ಬಹಳ ಎಚ್ಚರಿಕೆಯಿಂದ ಇರುವುದು ಅಗತ್ಯವಾಗಿದೆ. ಈ ಸಮಯದಲ್ಲಿ ಹಣಕಾಸಿನ ವಿಷಯಗಳಲ್ಲಿ ಬಹಳ ಜಾಗರೂಕರಾಗಿರಿ. ಇಲ್ಲದಿದ್ದರೆ ಆರ್ಥಿಕ ನಷ್ಟ ಅನುಭವಿಸುವ ಸಾಧ್ಯತೆ ಇರುತ್ತದೆ. ಯಾವುದೇ ವಿಚಾರದಲ್ಲಿ ಅನಗತ್ಯ ವಾದ ಮಾಡುವುದನ್ನು ತಪ್ಪಿಸಿ. ನಿಮ್ಮ ಆರೋಗ್ಯದ ಬಗ್ಗೆಯೂ ನಿಗಾವಹಿಸಿ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.