Darshan Farm house : ನಟ ದರ್ಶನ್ ಅವರ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡಿಸಿದ್ದಾರೆ. ನಿನ್ನೆ ತಡರಾತ್ರಿ ಮೈಸೂರಿನ ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ದರ್ಶನ್ ಅವರ ಫಾರ್ಮ್ ಹೌಸ್ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು ದಾಳಿ ನಡೆಸಿ ಕೆಲವು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ದರ್ಶನ್ ಅವರು ತಮ್ಮ ತೋಟದ ಮನೆಯಲ್ಲಿ ವಿವಿಧ ತಳಿಯ ದೇಶಿ ಮತ್ತು ವಿದೇಶಿಯ ಪ್ರಾಣಿ, ಪಕ್ಷಿಗಳನ್ನು ಸಾಕುತ್ತಿದ್ದಾರೆ. ಆದ್ರೆ ಕೆಲ ವಿದೇಶಿ ತಳಿಯ ಪಕ್ಷಿಗಳನ್ನು ಸಾಕಲು ವನ್ಯಜೀವಿ ಕಾಯ್ದೆಯಡಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿರಬೇಕಾಗುತ್ತದೆ. ದರ್ಶನ್ ಅವರು ಈ ಅನುಮತಿ ಪಡೆದಿದ್ದಿಲ್ಲ. ಈ ಕಾರಣಕ್ಕಾಗಿ ದಾಳಿ ನಡೆದಿದೆ ಎಂದು ಅರಣ್ಯ ಸಂಚಾರಿ ದಳದ ಮುಖ್ಯಸ್ಥ ಡಿಸಿಎಫ್ಒ ಭಾಸ್ಕರ್ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Kantara 2 : 'ಕಾಂತಾರ 2' ಶೂಟಿಂಗ್ ಶುರು, ಬಿಡುಗಡೆ ಯಾವಾಗ? ಇದು ಮುಂದುವರಿದ ಭಾಗವಲ್ಲ!
ʼಬಾರ್ ಹೆಡೆಡ್ ಗೂಸ್ʼ ಎಂಬ 4 ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಾರ್ ಹೆಡೆಡ್ ಗೂಸ್ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ವಲಸೆ ಬಂದಿರತ್ತವೆ. ಇವುಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧವಾಗಿದೆ. ಇದೀಗ ಸಾಕಣೆ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.