ಹೊಸಕೋಟೆ: ರಕ್ತದೊತ್ತಡ, ಸಕ್ಕರೆ ಖಾಯಿಲೆ ನಿಯಂತ್ರಣ ಸೇರಿದಂತೆ ಆರೋಗ್ಯಯುತ ಜೀವನ ನಡೆಸಲು ಯೋಗಾಭ್ಯಾಸ ರಹದಾರಿಯಾಗಿದೆ. ಸದೃಢ ಮನಸ್ಸು ಮತ್ತು ಆರೋಗ್ಯಕ್ಕೆ ಯೋಗಾಸನಗಳು ಪೂರಕವೆಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಹೊಸಕೋಟೆ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜಿನಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾತ್ರಿ ವಾಸ್ತವ್ಯ ಮಾಡಿದ್ದ ಆರ್.ಅಶೋಕ್ ಭಾನುವಾರ ಬೆಳಗ್ಗೆ ವಿದ್ಯಾರ್ಥಿಗಳ ಯೋಗ ಶಿಬಿರದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಇದನ್ನೂ ಓದಿ: Ramesh Jarkiholi : ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರಕ್ಕೆ ಗ್ರ್ಯಾಂಡ್ ಎಂಟ್ರಿ ನೀಡಿದ ರಮೇಶ್ ಜಾರಕಿಹೊಳಿ!
ಸತತ ಯೋಗಾಭ್ಯಾಸದಿಂದ ಒತ್ತಡ ರಹಿತವಾದ ಆರೋಗ್ಯಯುತ ಜೀವನ ನಿರ್ವಹಿಸಬಹುದು. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ಯೋಗಾಸನಗಳಿಂದ ಏಕಾಗ್ರತೆ ಸಾಧ್ಯವಾಗುತ್ತದೆ. ತಾವು ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಕಬಡ್ಡಿ ಆಟಗಾರನಾಗಿದ್ದೆ, ಈವರೆಗೂ ತಮ್ಮ ಬಳಿ ರಕ್ತದೊತ್ತಡ, ಮಧುಮೇಹ ಸುಳಿದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರೂ ಕೂಡ ಪ್ರತಿನಿತ್ಯ ಯೋಗಾಭ್ಯಾಸ ಮಾಡಿ ದೇಶಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಪಪೂ ಕಾಲೇಜು ಪ್ರಾಚಾರ್ಯ ಕಿರಣಕುಮಾರ್ ಮತ್ತು ವಿದ್ಯಾರ್ಥಿಗಳಿಗೆ ಉಚಿತ ಯೋಗಾಭ್ಯಾಸ ತರಬೇತಿ ನೀಡುವ ಆನಂದ್ ಅವರಿಗೆ ಸಚಿವರು ಸನ್ಮಾನಿಸಿದರು.
ಇದನ್ನೂ ಓದಿ: Bengaluru Student Murder :ʼನನ್ನ ಲವ್ ಮಾಡಿ ಇನ್ನೊಬ್ಬನ ಜೊತೆ ಓಡಾಡಿದ್ರೆ ಬಿಟ್ಬಿಡಬೇಕಾ ಸರ್..!ʼ
ವಸತಿ ಕಾಲೇಜಿನಲ್ಲಿ ವಾಸ್ತವ್ಯದ ನೆನಪಿಗೆ ಸಚಿವರು ಸಸಿಗಳನ್ನು ನೆಟ್ಟರು. ಪೌರಾಡಳಿತ, ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಸಚಿವ ಎನ್.ನಾಗರಾಜು(ಎಂಟಿಬಿ), ಜಿಲ್ಲಾಧಿಕಾರಿ ಆರ್.ಲತಾ ಮತ್ತಿತರರು ಉಪಸ್ಥಿತರಿದ್ದರು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.