Apartmentನಲ್ಲಿ ಭೀಕರ ಅಗ್ನಿ ಅವಘಡ: 10ಕ್ಕೂ ಹೆಚ್ಚು ಸಾವು ಶಂಕೆ; ಮುಂದುವರೆದ ರಕ್ಷಣಾ ಕಾರ್ಯ

Fire breakout in Dhanbad Apartment: ಅಗ್ನಿಶಾಮಕ ದಳದ ನಿರ್ದೇಶಕ ಅಭಿಜಿತ್ ಪಾಂಡೆ ಮಾತನಾಡಿ, ‘ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ’ ಎಂದರು. ಕಟ್ಟಡದ ಮೊದಲ ಮಹಡಿಯಲ್ಲಿರುವ ಶೂ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಈ ಅವಘಡದಲ್ಲಿ ಅದೃಷ್ಟವಶಾತ್ ಸಾವು ನೋವು ಸಂಭವಿಸಿಲ್ಲ.

Written by - Bhavishya Shetty | Last Updated : Jan 31, 2023, 11:02 PM IST
    • ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ
    • ಅಪಾರ್ಟ್‌ಮೆಂಟ್‌ನಲ್ಲಿ ಸಾಕಷ್ಟು ಮಂದಿ ಸಿಲುಕಿಕೊಂಡಿದ್ದಾರೆ
    • ಅವಘಡದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.
Apartmentನಲ್ಲಿ ಭೀಕರ ಅಗ್ನಿ ಅವಘಡ: 10ಕ್ಕೂ ಹೆಚ್ಚು ಸಾವು ಶಂಕೆ; ಮುಂದುವರೆದ ರಕ್ಷಣಾ ಕಾರ್ಯ title=
dhanbad

Fire breakout in Dhanbad Apartment: ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಜೋರಾಫಟಕ್‌ನ ಆಶೀರ್ವಾದ್ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾರ್ಟ್‌ಮೆಂಟ್‌ನಲ್ಲಿ ಸಾಕಷ್ಟು ಮಂದಿ ಸಿಲುಕಿಕೊಂಡಿದ್ದಾರೆ. ಅವಘಡದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ: Budget 2023: ಬಜೆಟ್ ಮಂಡನೆಗೂ ಮುನ್ನ ಶುಭ ಸುದ್ದಿ: 2023ರಲ್ಲಿ ಹಣದುಬ್ಬರ ಇಳಿಕೆ; ಅಂಕಿ ಅಂಶಗಳು ಹೀಗಿವೆ!

ಮಾಹಿತಿ ಪ್ರಕಾರ, ಅಗ್ನಿ ದುರಂತದಲ್ಲಿ 20 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, 15 ಮಂದಿಯನ್ನು ಈಗಾಗಲೇ ರಕ್ಷಿಸಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

 

ಮೊನ್ನೆಯಷ್ಟೇ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳದ 12 ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿವೆ. ಅಗ್ನಿಶಾಮಕ ದಳದ ನಿರ್ದೇಶಕ ಅಭಿಜಿತ್ ಪಾಂಡೆ ಮಾತನಾಡಿ, ‘ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ’ ಎಂದರು. ಕಟ್ಟಡದ ಮೊದಲ ಮಹಡಿಯಲ್ಲಿರುವ ಶೂ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಈ ಅವಘಡದಲ್ಲಿ ಅದೃಷ್ಟವಶಾತ್ ಸಾವು ನೋವು ಸಂಭವಿಸಿಲ್ಲ.

ಇದನ್ನೂ ಓದಿ: “ಬಿಜೆಪಿ ಜೊತೆ ಕೈಜೋಡಿಸುವ ಬದಲು ಸಾಯುತ್ತೇನೆ”-ನಿತೀಶ್ ಕುಮಾರ್

ಮತ್ತೊಂದೆಡೆ, ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಬಾದ್‌ಶಾ ನಗರದ ಮೆಟ್ರೋ ನಿಲ್ದಾಣದ ಇ-ರಿಕ್ಷಾ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬ್ಯಾಟರಿ ಕೆಲಸ ನಡೆಯುತ್ತಿದ್ದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಲಕ್ನೋದ ಡಿಎಂ ಸೂರ್ಯಪಾಲ್ ಗಂಗ್ವಾರ್ ಹೇಳಿದ್ದಾರೆ. ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಬ್ಯಾಟರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಗಾಯಗೊಂಡು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಉಳಿದ ಎಲ್ಲ ಜನರನ್ನು ರಕ್ಷಿಸಲಾಗಿದೆ. ಬೆಂಕಿ ಅನಾಹುತಕ್ಕೆ ಕಾರಣ ತನಿಖೆ ನಡೆಸಲಾಗುವುದು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News