ಬೆಲ್ಲಿ ಫ್ಯಾಟ್ ಕರಗಿಸಲು ಹೀಗಿರಲಿ ನಿಮ್ಮ ದಿನಚರಿ
ತೆಳ್ಳಗಿರುವ ಬಳಕುವ ಸೊಂಟ ನಮ್ಮದಾಗಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ, ಇದಕ್ಕಾಗಿ ಆರೋಗ್ಯಕರ ದಿನಚರಿ ಬಹಳ ಮುಖ್ಯ. ನಿಮ್ಮ ದಿನಚರಿಯಲ್ಲಿ ಬದಲಾವಣೆ ಮಾಡುವ ಮೂಲಕ ನೀವು ಸುಲಭವಾಗಿ ನಿಮ್ಮ ಹೊಟ್ಟೆಯ ಫ್ಯಾಟ್ ಕರಗಿಸಬಹುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಬೆಲ್ಲಿ ಫ್ಯಾಟ್ ಕರಗಿಸಲು ನಿತ್ಯ ನಿಯಮಿತ ವ್ಯಾಯಾಮ, ವಾಕಿಂಗ್ ತುಂಬಾ ಅಗತ್ಯ. ನಿತ್ಯ ಕನಿಷ್ಠ ಅರ್ಧ ತಾಸಾದರೂ ವಾಕಿಂಗ್ ಮಾಡಿ.
ಪ್ರೋಟೀನ್ ಯುಕ್ತ ಆಹಾರಗಳು ಹೊಟ್ಟೆಯಲ್ಲಿ ಕೊಬ್ಬು ಶೇಖರಣೆ ಆಗುವುದನ್ನು ತಡೆಯುತ್ತವೆ. ಹಾಗಾಗಿ ನಿಮ್ಮ ದಿನಚರಿಯಲ್ಲಿ ಪ್ರೋಟೀನ್ ಹೆಚ್ಚಿರುವ ಆಹಾರಗಳನ್ನು ಸೇವಿಸಿ.
ನಿತ್ಯ ನಿಮ್ಮ ಆಹಾರದಲ್ಲಿ ತರಕಾರಿಗಳನ್ನು ತಪ್ಪದೇ ಸೇವಿಸಿ. ಇದರಿಂದ ತೂಕ ಕಡಿಮೆ ಆಗುವುದರ ಜೊತೆಗೆ ಹಲವು ಆರೋಗ್ಯ ಸಮಸ್ಯೆಗಳಿಂದಲೂ ದೂರ ಉಳಿಯಬಹುದು.
ನಿಮ್ಮ ದೇಹದ ತೂಕವನ್ನು ನಿಯಂತ್ರಿಸುವಲ್ಲಿ, ದೇಹವನ್ನು ಹೈಡ್ರೇಟ್ ಮಾಡುವಲ್ಲಿ ನೀರು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ನಿತ್ಯ ಸಾಕಷ್ಟು ನೀರು ಕುಡಿಯಿರಿ.
ನಿತ್ಯ ಕನಿಷ್ಠ 7 ಗಂಟೆಯಾದರೂ ನಿದ್ದೆ ಮಾಡಿ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಿರಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.