Kichcha Sudeep clarification: ದಾವಣೆಗೆರೆಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೊಂದಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬರಲಿಲ್ಲ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿ, ಇಲ್ಲಿದ್ದ ಖುರ್ಚಿಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿ ತಮ್ಮ ಬೇಸರವನ್ನು ಆಕ್ರೋಶದ ರೂಪದಲ್ಲಿ ಹೊರಹಾಕಿದ್ದರು. ಈ ವಿಚಾರ ತಿಳಿದ ನಟ ಕಿಚ್ಚ, ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದು, ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ್ದಾರೆ.
ಇದನ್ನೂ ಓದಿ: ಕಿಚ್ಚ ಬಂದಿಲ್ಲ ಅಂತಾ ರೊಚ್ಚಿಗೆದ್ದ ಫ್ಯಾನ್ಸ್: ಸುದೀಪ್ ಕಾರ್ಯಕ್ರಮದ ಚೇರ್ ಗಳೆಲ್ಲವೂ ಪೀಸ್ ಪೀಸ್!!
“ಸ್ನೇಹಿತರಿಗೆ ನಲ್ಮೆಯ ನಮಸ್ಕಾರ. ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು. ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ. ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ. ಆದರೂ ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ. ನಿಮ್ಮ ಜೊತೆ ಬೆರೆಯಲು ನನಗೂ ಸದಾ ಆತೀವ ಆಸೆ.. ಮುಂದೆ ಖಂಡಿತ ಬರುವೆ. ಪ್ರೀತಿ ಇರಲಿ. ಶಾಂತ ರೀತಿಯಿಂದ ವರ್ತಿಸಿ, ಪ್ರೀತಿಯೊಂದಿಗೆ ನಿಮ್ಮ ಕಿಚ್ಚ” ಎಂದು ಟ್ವೀಟ್ ಮೂಲಕ ಸ್ಪಷ್ಟ ಸಂದೇಶ ನೀಡಿದ್ದಾರೆ.
ಸ್ನೇಹಿತರಿಗೆ ನಲ್ಮೆಯ ನಮಸ್ಕಾರ -ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು.ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ.ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ.ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ.
Cont'd...— Kichcha Sudeepa (@KicchaSudeep) February 9, 2023
ದಾವಣಗೆರೆ ಜಿಲ್ಲೆ ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಇಂದು ಸಂಜೆ 5.30ಕ್ಕೆ ನಟ ಸುದೀಪ್ ಕಾರ್ಯಕ್ರಮ ನಿಗದಿಯಾಗಿತ್ತೆಂದು ಹೇಳಲಾಗಿದೆ. ಸುದೀಪ್ ಹೆಸರು ಕೇಳುತ್ತಿದ್ದಂತೆ ಖುಷಿಯಾದ ಅಭಿಮಾನಿಗಳು, ತಮ್ಮ ನೆಚ್ಚಿನ ನಟನನ್ನು ನೋಡಲೆಂದು ಓಡೋಡಿ ಬಂದಿದ್ದರು. ಆದರೆ ಕೊಂಚ ಸಮಯದ ಬಳಿಕ ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಹಾಜರಾಗುತ್ತಿಲ್ಲ ಎಂಬ ವಿಚಾರ ಅಭಿಮಾನಿಗಳ ಕಿವಿಗೆ ಬಿದ್ದಿದೆ.
ಈ ಮಾತು ಎಲ್ಲೆಡೆ ಹರಿದಾಡುತ್ತಿದ್ದಂತೆ ಆಕ್ರೋಶಗೊಂಡ ಫ್ಯಾನ್ಸ್, ಕಾರ್ಯಕ್ರಮದಲ್ಲಿ ಹಾಕಿದ್ದ ಆಸನಗಳನ್ನು ತೂರಾಡಿ ಆಕ್ರೋಶ ಹೊರಹಾಕಿದ್ದಾರೆ. ಈ ಸಂದರ್ಭದಲ್ಲಿ ಗಲಾಟೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು, ಕೊನೆಗೆ ಲಘು ಲಾಠಿ ಚಾರ್ಜ್ ಮಾಡಿದ್ದಾರೆ.
ಇದನ್ನೂ ಓದಿ: ಮಹಿಳೆಯರ ಪ್ರವೇಶ ನಿಷೇಧವಿರುವ ಈ ದ್ವೀಪಕ್ಕೆ ಪುರುಷರಿಗೂ 'ರಹಸ್ಯ ಪ್ರಯಾಣ'ವಂತೆ!
ಆದರೆ ಕಿಚ್ಚನಿಗೆ ಆಹ್ವಾನವೇ ಸಿಕ್ಕಿಲ್ಲ ಎಂದು ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ಮತ್ತೊಂದೆಡೆ ಅಭಿಮಾನಿಗಳಿಗೆ ಸುದೀಪ್ ಬರ್ತಾರೆ ಎಂದು ಜಾತ್ರಾ ಸಮಿತಿಯವರು ಸಂಜೆವರೆಗೂ ಹೇಳುತ್ತಾ ಬಂದಿದ್ದಾರೆ. ಜಾತ್ರಾ ಸಮಿತಿ ಮಾಡಿದ ಈ ಎಡವಟ್ಟಿನಿಂದ ಅಭಿಮಾನಿಗಳಿಗೆ ಬೇಸರವಾಗಿದ್ದಲ್ಲದೆ, ಕಾರ್ಯಕ್ರಮವೂ ಸಹ ಕಳೆ ಕಳೆದುಕೊಂಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.