Video: ಅಂದು ಆಟದಿಂದ ಕೈಬಿಡಿ ಅಂತಿದ್ದ ಆಟಗಾರನಿಂದಲೇ… ಇಂದು ಟೆಸ್ಟ್ ಪಂದ್ಯಕ್ಕೆ ಸಿಕ್ತು ಬಿಗ್ ಟ್ವಿಸ್ಟ್!

KL Rahul Stunning Catch: ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಶುಕ್ರವಾರ ಆರಂಭವಾದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. 168 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡರು.

Written by - Bhavishya Shetty | Last Updated : Feb 17, 2023, 05:48 PM IST
    • ಭಾರತ ಆಸ್ಟ್ರೇಲಿಯಾ ನಡುವೆ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಎರಡನೇ ಪಂದ್ಯ
    • ಸದ್ಯ ಈ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ
    • ಈ ವೇಳೆ ಕೆಎಲ್ ರಾಹುಲ್ ಪ್ರವಾಸಿ ತಂಡಕ್ಕೆ ದೊಡ್ಡ ಪೆಟ್ಟು ನೀಡಿದರು.
Video: ಅಂದು ಆಟದಿಂದ ಕೈಬಿಡಿ ಅಂತಿದ್ದ ಆಟಗಾರನಿಂದಲೇ… ಇಂದು ಟೆಸ್ಟ್ ಪಂದ್ಯಕ್ಕೆ ಸಿಕ್ತು ಬಿಗ್ ಟ್ವಿಸ್ಟ್!  title=
KL Rahul

KL Rahul Stunning Catch, Delhi Test: ಭಾರತ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಎರಡನೇ ಪಂದ್ಯವನ್ನು ದೆಹಲಿಯಲ್ಲಿ ಆಡುತ್ತಿದೆ. ಸದ್ಯ ಈ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಮೊದಲ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ನಡೆದಿದ್ದು, ಕಳಪೆ ಪ್ರದರ್ಶನದ ನಂತರ ಟೀಂ ಇಂಡಿಯಾದಿಂದ ಈ ಆಟಗಾರನನ್ನು ಹೊರಗಿಡಬೇಕೆಂಬ ಒತ್ತಡ ಕೇಳಿ ಬಂದಿತ್ತು. ಇದೀಗ ಅದೇ ಕ್ರಿಕೆಟಿಗ ಮೈದಾನದಲ್ಲಿ ಫೀಲ್ಡಿಂಗ್ ಮಾಡುವಾಗ ಅದ್ಭುತ ಕ್ಯಾಚ್ ಹಿಡಿದಿದ್ದಾರೆ. ಇವರ ವಿಡಿಯೋ ನೋಡಿ ನೀವೇ ಶಾಕ್ ಆಗ್ತೀರಾ.

ಇದನ್ನೂ ಓದಿ: Mohammad Shami: ಟೆಸ್ಟ್ ಪಂದ್ಯದಲ್ಲಿ ಶಮಿ ಎಸೆದ ‘ಮ್ಯಾಜಿಕ್ ಬೌಲ್’ಗೆ ಕ್ಲೀನ್ ಬೌಲ್ಡ್ ಆದ ಡೇವಿಡ್ ವಾರ್ನರ್! ವಿಡಿಯೋ ನೋಡಿ

ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಶುಕ್ರವಾರ ಆರಂಭವಾದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. 168 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡರು. ಈ ವೇಳೆ ಕೆಎಲ್ ರಾಹುಲ್ ಪ್ರವಾಸಿ ತಂಡಕ್ಕೆ ದೊಡ್ಡ ಪೆಟ್ಟು ನೀಡಿದರು. ಉಸ್ಮಾನ್ ಖವಾಜಾ ಅವರ ಕ್ಯಾಚ್ ಅನ್ನು ಅದ್ಭುತ ರೀತಿಯಲ್ಲಿ ಹಿಡಿದಿದ್ದಾರೆ. ಇದರಿಂದಾಗಿ ಖವಾಜಾಗೆ ಶತಕ ಪೂರೈಸಲು ಸಾಧ್ಯವಾಗಲಿಲ್ಲ.

 

ನಾಗ್ಪುರದಲ್ಲಿ ನಡೆದ ಸರಣಿಯ ಆರಂಭಿಕ ಟೆಸ್ಟ್ ಪಂದ್ಯದಲ್ಲಿ ಓಪನರ್ ಕೆಎಲ್ ರಾಹುಲ್ ಅವರು ಬ್ಯಾಟ್‌ನಿಂದ ವಿಶೇಷವಾದ ಸಾಧನೆಯನ್ನು ಮಾಡಲು ಸಾಧ್ಯವಾಗಲಿಲ್ಲ. 71 ಎಸೆತಗಳನ್ನು ಎದುರಿಸಿದ ಅವರು ಕೇವಲ 20 ರನ್ ಗಳಿಸಿ ಔಟಾದರು. ಅಂತಹ ಪರಿಸ್ಥಿತಿಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ,ಮಾಜಿ ಕ್ರಿಕೆಟಿಗ ಸೇರಿದಂತೆ ಅನೇಕ ಬಳಕೆದಾರರು ರಾಹುಲ್ ಅವರನ್ನು ದೆಹಲಿ ಟೆಸ್ಟ್‌ನಿಂದ ಹೊರಗಿಡಬೇಕೆಂದು ಒತ್ತಾಯಿಸಿದರು. ಆದರೆ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್, ಅವರ ಮೇಲೆ ನಂಬಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: ZEE News Sting Operation Big Impact : ಬಣ್ಣ ಬಯಲಾಗುತ್ತಿದ್ದಂತೆ BCCI ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ರಾಜೀನಾಮೆ

ಉಸ್ಮಾನ್ ಖವಾಜಾ ಪಂದ್ಯದಲ್ಲಿ ಅಪಾಯಕಾರಿಯಾಗಿ ಕಾಣಿಸಿಕೊಂಡಿದ್ದರು. ರವೀಂದ್ರ ಜಡೇಜಾ ಇನಿಂಗ್ಸ್ ನ 46ನೇ ಓವರ್ ನಲ್ಲಿ ಖವಾಜಾ ವಿಕೆಟ್ ಉರುಳಿಸಿದರು. ಖವಾಜಾ ಓವರ್‌ನ 5ನೇ ಎಸೆತದಲ್ಲಿ ರಿವರ್ಸ್ ಸ್ವೀಪ್ ಶಾಟ್ ಆಡಿದರು. ಆದರೆ ಚಾಲಾಕಿ ಕೆಎಲ್ ರಾಹುಲ್ ಡೈವಿಂಗ್ ಮಾಡಿ ಒಂದೇ ಕೈಯಲ್ಲಿ ಅಮೋಘ ಕ್ಯಾಚ್ ಹಿಡಿದರು. ಅವರ ಕ್ಯಾಚ್‌ನ ವಿಡಿಯೋವನ್ನು ಬಿಸಿಸಿಐ ಕೂಡ ಹಂಚಿಕೊಂಡಿದೆ. ಖವಾಜಾ 125 ಎಸೆತಗಳನ್ನು ಎದುರಿಸಿ 12 ಬೌಂಡರಿ, 1 ಸಿಕ್ಸರ್‌ ನೆರವಿನಿಂದ 81 ರನ್ ಗಳಿಸಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News