ಬೆಂಗಳೂರು : ವೈದಿಕ ಜ್ಯೋತಿಷ್ಯದಲ್ಲಿ ಶನಿ ದೇವನನ್ನು ಬಹಳ ಮುಖ್ಯ ಎಂದು ಹೇಳಲಾಗುತ್ತದೆ. ಶನಿಯು ಎಲ್ಲಾ ಗ್ರಹಗಳಲ್ಲಿ ನಿಧಾನವಾಗಿ ಚಲಿಸುವ ಗ್ರಹವಾಗಿದೆ. ಶನಿದೇವನು ವ್ಯಕ್ತಿಯ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳ ಲೆಕ್ಕ ಇಡುತ್ತಾನೆ. ಅದಕ್ಕೆ ತಕ್ಕಂತೆ ಫಲವನ್ನು ನೀಡುತ್ತಾನೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಕುಂಭ ರಾಶಿಯಲ್ಲಿ ಅಸ್ತಮಿಸಿರುವ ಶನಿ ಮಾರ್ಚ್ 5 ರಂದು ಸಂಪೂರ್ಣವಾಗಿ ಉದಯಿಸುತ್ತಾನೆ. ಶನಿಯ ಉದಯದಿಂದಾಗಿ ಈ ರಾಶಿಯವರು ಯಾವ ಕೆಲಸಕ್ಕೆ ಕೈ ಹಾಕಿದರೂ ಯಶಸ್ಸು ಪಡೆಯುತ್ತಾರೆ. ಯಾವ ಹಾದಿಯಲ್ಲಿ ನಡೆದರೂ ಸುಗಮವಾಗಿಯೇ ಇರುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿಗ್ರಹದ ಉದಯದಿಂದಾಗಿ ವೃಷಭ ರಾಶಿಯವರಿಗೆ ಶುಭ ಫಲಗಳು ದೊರೆಯುತ್ತವೆ. ಈ ಸಮಯದಲ್ಲಿ, ಈ ರಾಶಿಯವರು ಏನು ಮಾಡಿದರೂ ಸಫಲರಾಗುತ್ತಾರೆ. ಜೀವನದಲ್ಲಿ ಪ್ರಗತಿಯ ಹಾದಿ ತೆರೆಯುತ್ತದೆ. ನಿಂತು ಹೋಗಿದ್ದ ಕೆಲಸ ಪೂರ್ಣಗೊಳ್ಳುತ್ತದೆ. ಆರ್ಥಿಕ ಸ್ಥಿತಿಯೂ ಸುಧಾರಿಸಲಿದೆ.
ಶನಿಯು ಕುಂಭ ರಾಶಿಯಲ್ಲಿಯೇ ಉದಯಿಸಲಿದ್ದಾನೆ. ಹಾಗಾಗಿ ಈ ಸಮಯದಲ್ಲಿ, ಈ ರಾಶಿಯವರು ಹೊಸ ಹೊಸ ಅವಕಾಶಗಳನ್ನು ಪಡೆಯುತ್ತಾರೆ. ಹಠಾತ್ ಧನಲಾಭಾವಾಗುವುದು. ಶನಿಯ ಉದಯದಿಂದಾಗಿ ಈ ರಾಶಿಯವರಿಗೆ ಉತ್ತಮ ಉದ್ಯೋಗಾವಕಾಶಗಳು ದೊರೆಯುತ್ತವೆ. ಶುಭ ಫಲಗಳು ಲಭಿಸಲಿವೆ. ಶಿಕ್ಷಣ ಕ್ಷೇತ್ರದಲ್ಲಿ ಶೀಘ್ರ ಪ್ರಗತಿ ಕಾಣುವ ಸಾಧ್ಯತೆ ಇದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿಯ ಉದಯವು ಸಿಂಹ ರಾಶಿಯವರಿಗೆ ಶುಭ ಸಂಕೇತವಾಗಿದೆ. ಶನಿಯ ಉದಯದಿಂದಾಗಿ ಈ ಸಮಯದಲ್ಲಿ ಅನೇಕ ಅವಕಾಶಗಳು ಸಿಗುತ್ತವೆ. ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಯಾಗುತ್ತದೆ. ಸ್ನೇಹಿತರೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಅಷ್ಟೇ ಅಲ್ಲ, ಈ ರಾಶಿಗಳ ಜನರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ಶನಿಯ ಉದಯವು ಮೀನ ರಾಶಿಯವರಿಗೆ ಲಾಭ ತರಲಿದೆ. ಕಳೆದ ತಿಂಗಳು ತೊಂದರೆ ಅನುಭವಿಸಿದವರು ಮಾರ್ಚ್ ತಿಂಗಳಲ್ಲಿ ಒಳ್ಳೆಯ ದಿನಗಳನ್ನು ಕಾಣುವರು. ಈ ಅವಧಿಯಲ್ಲಿ ಶುಭ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಕಳೆದು ಹೋದ ಮನಸ್ಸಿನ ಶಾಂತಿ ಮತ್ತೆ ಸಿಗುವುದು. ( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)