ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸುವಲ್ಲಿ ಮಹತ್ವದ ಪಾತ್ರವಹಿಸಿದ ಜೇಮ್ಸ್ ಆಂಡರ್ಸನ್ ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಆರನೇ ಬಾರಿಗೆ ICC ಪುರುಷರ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಟಾಪ್ ಸ್ಥಾನವನ್ನು ಅಲಂಕರಿಸಿದ್ದಾರೆ.
40 ವರ್ಷ ವಯಸ್ಸಿನ ಅನುಭವಿ ಬೌಲರ್ ಜೇಮ್ಸ್ ಆಂಡರ್ಸನ್ ನ್ಯೂಜಿಲೆಂಡ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ 4-18 ವಿಕೆಟ್ ಗಳನ್ನು ಪಡೆಯುವ ಮೂಲಕ ಈಗ ಅವರು ಒಟ್ಟು 682 ವಿಕೆಟ್ ಗಳನ್ನು ಪಡೆದಿದ್ದಾರೆ.ಸಾರ್ವಕಾಲಿಕ ಎರಡನೇ ಸ್ಥಾನದಲ್ಲಿರುವ ಶೇನ್ ವಾರ್ನ್ 708 ವಿಕೆಟ್ ಗಳನ್ನು ಪಡೆದಿದ್ದಾರೆ.ಇನ್ನೊಂದೆಡೆಗೆ ಅಗ್ರಸ್ಥಾನದಲ್ಲಿರುವ ಮುತ್ತಯ್ಯ ಮುರಳೀಧರನ್ 800 ವಿಕೆಟ್‌ಗಳನ್ನು ಪಡೆದಿದ್ದಾರೆ.
Pat Cummins dethroned by Jimmy 👑
Ravindra Jadeja back in the top 10 ⚔️#ICCRankings pic.twitter.com/abrrX1fVxv
— ESPNcricinfo (@ESPNcricinfo) February 22, 2023
ಏತನ್ಮಧ್ಯೆ, ಭಾರತದ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರು ಇತ್ತೀಚಿನ ಐಸಿಸಿ ಪುರುಷರ ಟೆಸ್ಟ್ ಆಟಗಾರರ ಶ್ರೇಯಾಂಕದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿರುವುದನ್ನು ನಾವು ಕಾಣಬಹುದಾಗಿದೆ.ಆಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ಗಾಯಗೊಂಡಿರುವ ವೇಗಿ ಜಸ್ಪ್ರೀತ್ ಬುಮ್ರಾ ಐದನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಜಡೇಜಾ 9 ನೇ ಸ್ಥಾನದಲ್ಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.