WPL 2023: ಮತ್ತೆ ಸೋಲುಂಡ ಬೆಂಗಳೂರು: ಮುಂಬೈ ಇಂಡಿಯನ್ಸ್’ಗೆ ಸತತ ಗೆಲುವಿನ ಸಂಭ್ರಮ

Mumbai Indians VS Royal Challengers Bangalore: ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಈ ಲೀಗ್ ಅನ್ನು ಗೆಲುವಿನೊಂದಿಗೆ ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ತಂಡವು ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಸತತ ಎರಡನೇ ಗೆಲುವನ್ನು ದಾಖಲಿಸಿದೆ.

Written by - Bhavishya Shetty | Last Updated : Mar 6, 2023, 11:39 PM IST
    • ಮಹಿಳಾ ಪ್ರೀಮಿಯರ್ ಲೀಗ್‌ 2023ರ ಮೊದಲ ಸೀಸನ್ ಅಬ್ಬರದಿಂದ ಆರಂಭವಾಗಿದೆ
    • ಮುಂಬೈ ಇಂಡಿಯನ್ಸ್‌ಗೆ ಸತತ ಎರಡನೇ ಗೆಲುವು
    • ಬೆಂಗಳೂರು ತನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು
WPL 2023: ಮತ್ತೆ ಸೋಲುಂಡ ಬೆಂಗಳೂರು: ಮುಂಬೈ ಇಂಡಿಯನ್ಸ್’ಗೆ ಸತತ ಗೆಲುವಿನ ಸಂಭ್ರಮ title=
Women's Premier League 2023

Mumbai Indians VS Royal Challengers Bangalore: ಮಹಿಳಾ ಪ್ರೀಮಿಯರ್ ಲೀಗ್‌ 2023ರ ಮೊದಲ ಸೀಸನ್ ಅಬ್ಬರದಿಂದ ಆರಂಭವಾಗಿದೆ. ಈ ಲೀಗ್‌’ನ ನಾಲ್ಕನೇ ಪಂದ್ಯ ಭಾರತದ ಇಬ್ಬರು ದೊಡ್ಡ ಮಹಿಳಾ ಕ್ರಿಕೆಟಿಗರ ತಂಡಗಳ ನಡುವೆ ನಡೆದಿದೆ. ಈ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಅವರ ಮುಂಬೈ ಇಂಡಿಯನ್ಸ್ ಮತ್ತು ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದ್ದು, ಮುಂಬೈ ಗೆಲುವು ಸಾಧಿಸಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದಿದೆ.

ಇದನ್ನೂ ಓದಿ:  “AB de Villiers ಶ್ರೇಷ್ಠ ಆಟಗಾರನಲ್ಲ, ಚಿನ್ನಸ್ವಾಮಿಯಲ್ಲಿ ಯಾರು ಬೇಕಾದ್ರೂ ರನ್ ಗಳಿಸಬಹುದು…!” ‘ಗಂಭೀರ’ ಹೇಳಿಕೆ

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.4 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಯಿತು. ಮುಂಬೈನ ಹೀಲಿ ಮ್ಯಾಥ್ಯೂಸ್ ಗರಿಷ್ಠ 3 ವಿಕೆಟ್ ಪಡೆದರು. ಆರ್ ಸಿ ಬಿ ಪರ, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಚಾ ಘೋಷ್ ಗರಿಷ್ಠ 28 ರನ್ ಗಳಿಸಿದರು. ಆದರೆ ಇದಕ್ಕಾಗಿ ಅವರು 26 ಎಸೆತಗಳನ್ನು ಪಡೆದುಕೊಂಡರು. 156 ರನ್‌ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 14.2 ಓವರ್‌ಗಳಲ್ಲಿ 1 ವಿಕೆಟ್ ನಷ್ಟದಲ್ಲಿ ಸಾಧಿಸಿತು. ಹೀಲಿ ಮ್ಯಾಥ್ಯೂಸ್ ಮುಂಬೈ ಇಂಡಿಯನ್ಸ್ ಪರ ಅಜೇಯ 77 ರನ್ ಗಳಿಸಿದರು.

ಮುಂಬೈ ಇಂಡಿಯನ್ಸ್‌ಗೆ ಸತತ ಎರಡನೇ ಗೆಲುವು:

ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಈ ಲೀಗ್ ಅನ್ನು ಗೆಲುವಿನೊಂದಿಗೆ ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ತಂಡವು ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯದಲ್ಲೂ ತಂಡವು ತನ್ನ ಗೆಲುವಿನ ಖಾತೆ ತೆರೆಯುವಲ್ಲಿ ವಿಫಲವಾಗಿದೆ.

ಮುಂಬೈ ಪ್ಲೇಯಿಂಗ್ 11:

ಯಾಸ್ತಿಕಾ ಭಾಟಿಯಾ (ವಿ.ಕೀ), ಹೀಲಿ ಮ್ಯಾಥ್ಯೂಸ್, ನ್ಯಾಟ್ ಶಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ಕ್ಯಾ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸಿ ವಾಂಗ್, ಅಮನ್‌ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್.

ಇದನ್ನೂ ಓದಿ: IND vs PAK: ಭಾರತಕ್ಕೆ ಮತ್ತೆ ಪಾಕಿಸ್ತಾನ ಎಂಟ್ರಿ! ಮಹಾ ಸುಳಿವು ನೀಡಿದ ಪಾಕ್ ನಾಯಕ ಬಾಬರ್ ಅಜಂ

ಆರ್ ಸಿ ಬಿ ಪ್ಲೇಯಿಂಗ್ 11:

ಸ್ಮೃತಿ ಮಂಧಾನ (ಕ್ಯಾ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕ್ಯಾಸಟ್, ರಿಚಾ ಘೋಷ್ (ವಿ.ಕೀ), ಹೀದರ್ ನೈಟ್, ಕನಿಕಾ ಅಹುಜಾ, ಮೇಗನ್ ಶುಟ್, ಶ್ರೇಯಾಂಕಾ ಪಾಟೀಲ್, ಪ್ರೀತಿ ಬೋಸ್, ರೇಣುಕಾ ಸಿಂಗ್.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News