ಮೋದಿಯವರೇ ಪೇಟಿಎಂ ಲೂಟಿಯಲ್ಲಿ ನಿಮಗೂ ಪಾಲಿದೆಯೇ...?; ಸಿದ್ದರಾಮಯ್ಯ

Siddaramaiah : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಕರ್ನಾಟಕಕ್ಕೆ ಭೇಟಿ ನೀಡಿದ್ದರ ಬೆನ್ನಲ್ಲಿಯೇ ಕಾಂಗ್ರೇಸ್‌ ಸರಣಿ ಟ್ವೀಟ್‌ ಗಳ ಮೂಲಕ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಯುತ್ತಿದೆ. ಅಲ್ಲದೇ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ಗಳ ಮೂಲಕ ಪ್ರಧಾನಿಯವರಿಗೆ ಪ್ರಶ್ನಿಸುತ್ತಿದಾರೆ. " ಕರ್ನಾಟಕ ಬಿಜೆಪಿಯ ಪೇಟಿಯಂ, ಬಿಜೆಪಿ ಭ್ರಷ್ಟಾಚಾರದ ಹೊರೆಯನ್ನೇ ಹೊತ್ತಿದೆ,  ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದಾರೆ. 

Written by - Zee Kannada News Desk | Last Updated : Mar 12, 2023, 05:06 PM IST
  • ನಿಮ್ಮ ಸಚಿವರು ಮತ್ತು ಶಾಸಕರು ಕೋಟಿ ಕೋಟಿ ಲೂಟಿ ಮಾಡಿ ನಿರ್ಭೀತಿಯಿಂದ ಇದ್ದಾರೆ.
  • ಕೇಂದ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದರೂ ನಮ್ಮ ಸರ್ಕಾರದ ವಿರುದ್ಧದ ಎಂಟು ಆರೋಪಗಳನ್ನು ಧೈರ್ಯದಿಂದ ಸಿಬಿಐ ತನಿಖೆಗೆ ಒಪ್ಪಿಸಿದ್ದೆ ಗೊತ್ತಾ?.
  • ನಾನು ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸಂತೋಷ್ ಲಾಡ್ ಅವರ ಮೇಲೆ ಅಕ್ರಮ ಗಣಿಗಾರಿಕೆಯ ಆರೋಪ ಕೇಳಿ ಬಂದಿದ್ದಕ್ಕಾಗಿ ರಾಜೀನಾಮೆ ಕೊಡಿಸಿದ್ದೆ.
ಮೋದಿಯವರೇ ಪೇಟಿಎಂ ಲೂಟಿಯಲ್ಲಿ ನಿಮಗೂ ಪಾಲಿದೆಯೇ...?; ಸಿದ್ದರಾಮಯ್ಯ  title=

" ಕರ್ನಾಟಕ ರಾಜ್ಯ ಬಿಜೆಪಿಯ ಪೇಟಿಎಂ? ಹಿಂದೆ ಕರ್ನಾಟಕಕ್ಕೆ ಬಂದಿದ್ದ ನೀವು ರಾಜ್ಯದ ಕಾಂಗ್ರೆಸ್ ದೆಹಲಿಯ ಹೈಕಮಾಂಡ್‌ಗೆ ಎಟಿಎಂ ಎಂದು ಗೇಲಿ ಮಾಡಿದ್ದೀರಿ. ನಿಮ್ಮ ಸಚಿವರು ಮತ್ತು ಶಾಸಕರು ಕೋಟಿ ಕೋಟಿ ಲೂಟಿ ಮಾಡಿ ನಿರ್ಭೀತಿಯಿಂದ ಇದ್ದಾರೆ ಎಂದರೆ ಕರ್ನಾಟಕ ರಾಜ್ಯ ನಿಮ್ಮ ಪಕ್ಷದ ಎಟಿಎಂ ಎಂದು ಅರ್ಥೈಸಬಹುದಾ. ನಾನು ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸಂತೋಷ್ ಲಾಡ್ ಅವರ ಮೇಲೆ ಅಕ್ರಮ ಗಣಿಗಾರಿಕೆಯ ಆರೋಪ ಕೇಳಿ ಬಂದಿದ್ದಕ್ಕಾಗಿ ರಾಜೀನಾಮೆ ಕೊಡಿಸಿದ್ದೆ. ಕೇಂದ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದರೂ ನಮ್ಮ ಸರ್ಕಾರದ ವಿರುದ್ಧದ ಎಂಟು ಆರೋಪಗಳನ್ನು ಧೈರ್ಯದಿಂದ ಸಿಬಿಐ ತನಿಖೆಗೆ ಒಪ್ಪಿಸಿದ್ದೆ ಗೊತ್ತಾ?. 

 

           ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ ಜಗತ್ತಿನ ಮುಂದೆ ಬಿಚ್ಚಿಟ್ಟರೂ ನೀವು ಮಾತ್ರ ಬಾಯಿ ಬಿಚ್ಚುತ್ತಿಲ್ಲ ಯಾಕೆ? ಅವರ ಲೂಟಿಯಲ್ಲಿ ನಿಮಗೂ ಪಾಲಿದೆಯಾ 

ಇದನ್ನೂ ಓದಿ-CM Bommai: ʼಮಂಡ್ಯ ಇಸ್ ಇಂಡಿಯಾʼ - ಸಿ.ಎಂ.ಬೊಮ್ಮಾಯಿ

ವಾಜಪೇಯಿ ನೇತೃತ್ವದಲ್ಲಿ ಇದ್ದಾಗ ಮುಖ್ಯಮಂತ್ರಿ ಮಾತ್ರವಲ್ಲ ಜನಾರ್ದನ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಸಂಪಂಗಿ ಮೊದಲಾದವರು ಭ್ರಷ್ಟಾಚಾರದ ಆರೋಪದಲ್ಲಿ ಸಚಿವ ಸ್ಥಾನವನ್ನು ಕಳೆದುಕೊಂಡು ಜೈಲುಪಾಲಾದರಲ್ಲಾ? ಈಗ್ಯಾಕೆ ಹೀಗೆ ಅಟಲಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಪಕ್ಷದ ಅಧ್ಯಕ್ಷರಾಗಿದ್ದ ಬಂಗಾರು ಲಕ್ಷ್ಮಣ್ ಎಂಬ ದಲಿತ ನಾಯಕರು ಲಂಚ ಪಡೆಯುವಾಗ ಕ್ಯಾಮೆರಾದ ಕಣ್ಣಲ್ಲಿ ಸಿಕ್ಕಿ ಹಾಕಿಕೊಂಡಿದ್ದರು. ತಕ್ಷಣ ವಾಜಪೇಯಿ ಅವರು ಲಕ್ಷ್ಮಣ್ ಅವರಿಂದ ರಾಜೀನಾಮೆ ಕೊಡಿಸಿಲ್ಲವೇ " ಎಂದು ಸಿದ್ದರಾಮಯ್ಯ ಮೋದಿ ವಿರುದ್ದ ಕಿಡಿ ಕಾರಿದ್ದಾರೆ. 

ಇದನ್ನೂ ಓದಿ-ModiMosa ಎಂಬ ಹ್ಯಾಷ್‌ಟ್ಯಾಗ್ ಮೂಲಕ ಮೋದಿಯನ್ನು ಕರ್ನಾಟಕಕ್ಕೆ ಸ್ವಾಗತಿಸಿದ ಕಾಂಗ್ರೇಸ್..!‌ 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News