ನವದೆಹಲಿ: ಇತ್ತೀಚಿನ ದಿನಗಳಲ್ಲಿ ಜನರು ಕೆಟ್ಟ ಜೀವನಶೈಲಿಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತಿದೆ. ಕೆಟ್ಟ ಜೀವನಶೈಲಿಯಿಂದ ಕೊಲೆಸ್ಟ್ರಾಲ್ ಕೂಡ ಹೆಚ್ಚಾಗಲು ಪ್ರಾರಂಭಿಸುತ್ತಿದೆ. ಕೊಲೆಸ್ಟ್ರಾಲ್ ಸಮಸ್ಯೆಯಿದ್ದರೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳ ಅಪಾಯವೂ ಹೆಚ್ಚಾಗುತ್ತದೆ. ಕೊಲೆಸ್ಟರಾಲ್ ಅನ್ನು ಔಷಧಿಗಳ ಸಹಾಯದಿಂದ ಕಡಿಮೆ ಮಾಡಬಹುದು. ಆದರೆ ನೀವು ಮನೆಯಲ್ಲಿ ಕೆಲವು ವಿಧಾನಗಳನ್ನು ಅಳವಡಿಸಿಕೊಂಡರೂ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಕಡಿಮೆ ಮಾಡಬಹುದು. ನೀವು ಕೊಲೆಸ್ಟ್ರಾಲ್ ಅನ್ನು ಹೇಗೆ ಕಡಿಮೆ ಮಾಡಬಹುದು ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಈ ವಿಧಾನಗಳಲ್ಲಿ ಕೊಲೆಸ್ಟ್ರಾಲ್ ನಿಯಂತ್ರಿಸಿ
ಟ್ರಾನ್ಸ್ ಫ್ಯಾಟ್‍ನಿಂದ ದೂರವಿರಿ
ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಿದ್ದರೆ ನೀವು ಸೇವಿಸುವ ಆಹಾರದಲ್ಲಿ ಟ್ರಾನ್ಸ್ ಫ್ಯಾಟ್ ಇರಬಾರದು. ಏಕೆಂದರೆ ಟ್ರಾನ್ಸ್ ಕೊಬ್ಬುಗಳು ಹೃದಯದ ಆರೋಗ್ಯಕ್ಕೆ ಹಾನಿ ಮಾಡುತ್ತದೆ ಮತ್ತು ಕೊಲೆಸ್ಟ್ರಾಲ್ ಹೆಚ್ಚಿಸುತ್ತದೆ. ಅದಕ್ಕಾಗಿಯೇ ನೀವು ಎಣ್ಣೆಯುಕ್ತ ಪದಾರ್ಥಗಳನ್ನು ತಿನ್ನುವುದನ್ನು ತಪ್ಪಿಸಬೇಕು.
ಇದನ್ನೂ ಓದಿ: Weight Loss Tips: ಅಧಿಕ ಕೊಲೆಸ್ಟ್ರಾಲ್, ಬೊಜ್ಜಿಗೆ ದಿನನಿತ್ಯ ಈ ಜ್ಯೂಸ್ ಕುಡಿಯಿರಿ!
ಫೈಬರ್ ಸೇವನೆ ಹೆಚ್ಚಿಸಿ
ನಿಮ್ಮ ಕೊಲೆಸ್ಟ್ರಾಲ್ ಹೆಚ್ಚಿದ್ದರೆ ನೀವು ಫೈಬರ್ ಸೇವನೆಯನ್ನು ಹೆಚ್ಚಿಸಬೇಕು. ಏಕೆಂದರೆ ಫೈಬರ್ ನಿಮ್ಮ ರಕ್ತದಲ್ಲಿನ ಕೊಲೆಸ್ಟ್ರಾಲ್ ಅನ್ನು ಹೀರಿಕೊಳ್ಳುವುದನ್ನು ಕಡಿಮೆ ಮಾಡುತ್ತದೆ. ಇದಕ್ಕಾಗಿ ನಿಮ್ಮ ಆಹಾರದಲ್ಲಿ ಓಟ್ಮೀಲ್, ಬೀನ್ಸ್ ಮತ್ತು ಪೇರಳೆಗಳನ್ನು ಸೇರಿಸಬೇಕು.
ವ್ಯಾಯಾಮ
ಪ್ರತಿದಿನ ವ್ಯಾಯಾಮ ಮಾಡುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರುತ್ತದೆ. ಏಕೆಂದರೆ ವ್ಯಾಯಾಮವು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಪ್ರತಿದಿನ 20 ನಿಮಿಷಗಳ ವ್ಯಾಯಾಮ ಮಾಡಬೇಕು. ಹೀಗೆ ಮಾಡುವುದರಿಂದ ನಿಮ್ಮ ತೂಕವೂ ಕಡಿಮೆಯಾಗುತ್ತದೆ.
ಆಲ್ಕೋಹಾಲ್ & ಸಿಗರೇಟ್‍ನಿಂದ ದೂರವಿರಿ
ನಿಮ್ಮ ದೇಹವು ಯಾವಾಗಲೂ ಫಿಟ್ ಆಗಿರಬೇಕು ಮತ್ತು ಕೊಲೆಸ್ಟ್ರಾಲ್ ಸಮಸ್ಯೆ ಬರಬಾರದು ಎಂದರೆ, ಆಲ್ಕೋಹಾಲ್ ಮತ್ತು ಸಿಗರೇಟ್‌ಗಳಿಂದ ದೂರವಿರಬೇಕು. ಏಕೆಂದರೆ ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಹಾನಿಕಾರಕ.
ಇದನ್ನೂ ಓದಿ: Diabetes ರೋಗಿಗಳಿಗೆ ಒಂದು ಪರಿಣಾಮಕಾರಿ ಮನೆಮದ್ದು ಈ ಚಿರೋಂಜಿ ಮಿಲ್ಕ್!
ತೂಕವನ್ನು ನಿಯಂತ್ರಿಸಿ
ಕೊಲೆಸ್ಟ್ರಾಲ್ ಹೆಚ್ಚಿಸಲು ತೂಕ ಪ್ರಮುಖ ಕಾರಣವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ನೀವು ನಿಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಅದನ್ನು ಕಡಿಮೆ ಮಾಡುವುದು ಸುಲಭವಾಗುತ್ತದೆ.
(ಗಮನಿಸಿರಿ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿ ಆಧರಿಸಿದೆ. ಇದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಬೇಕು. ZEE NEWS ಇದನ್ನು ದೃಢಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.