"ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ" ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು

ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಈ ಹಬ್ಬವನ್ನು ದಕ್ಷಿಣದ ರಾಜ್ಯಗಳಾದ ಕರ್ನಾಟಕದಲ್ಲಿ 'ಸಂಕ್ರಾಂತಿ' ಎಂದರೆ, ತಮಿಳುನಾಡಿನಲ್ಲಿ 'ಪೊಂಗಲ್' ಎಂದು ಕರೆಯುತ್ತಾರೆ.

Last Updated : Jan 15, 2019, 08:08 AM IST

Trending Photos

"ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ" ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು title=

ಸಂಕ್ರಾಂತಿ ಹಬ್ಬವು ಸುಗ್ಗಿಯ ಸಂಕೇತ. ಅವರವರ ಅನುಕೂಲಕ್ಕೆ ತಕ್ಕಂತೆ ಹಬ್ಬ ಆಚರಿಸುತ್ತಾರೆ. ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆ.

ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಈ ಹಬ್ಬವನ್ನು ದಕ್ಷಿಣದ ರಾಜ್ಯಗಳಾದ ಕರ್ನಾಟಕದಲ್ಲಿ 'ಸಂಕ್ರಾಂತಿ' ಎಂದರೆ, ತಮಿಳುನಾಡಿನಲ್ಲಿ 'ಪೊಂಗಲ್' ಎಂದು ಕರೆಯುತ್ತಾರೆ.

ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಸಂಕ್ರಾಂತಿಯ ದಿನದಂದು ಗಾಳಿಪಟಗಳನ್ನು ಹಾರಿಬಿಡುವ ಸಂಪ್ರದಾಯವಿದೆ. ಮಹಾರಾಷ್ಟ್ರದಲ್ಲಿಯೂ, ಎಳ್ಳು ಮತ್ತು ಸಕ್ಕರೆಯ ಕುಸುರಿಕಾಳನ್ನು ಬಂಧು ಮಿತ್ರರಿಗೆ ಹಂಚುವ ರೂಢಿ ಇದೆ. ಪ್ರಮುಖವಾಗಿ ಅವರು, ಎಳ್ಳಿನ ಉಂಡೆ ಗಳನ್ನು ಹಂಚುತ್ತಾರೆ. ಅದಕ್ಕೆ ಅವರು ಲಡ್ಡು ಎನ್ನುತ್ತಾರೆ. ಪಂಜಾಬ್ ಮತ್ತು ಹರಿಯಾಣಗಳಲ್ಲಿ ಸಂಕ್ರಾಂತಿಗೆ "ಲೋಹರಿ" ಎಂದು ಹೆಸರು.

ಮುಖ್ಯವಾಗಿ ದಕ್ಷಿಣ ಭಾರತದ ಹಬ್ಬವಾದರೂ, ಇತರ ಸ್ಥಳಗಳಲ್ಲಿ ಸಹ ಬೇರೆ ಬೇರೆ ಹೆಸರುಗಳಲ್ಲಿ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. 

ಈ ದಿನ ಸೂರ್ಯಗ್ರಹವು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸುತ್ತದೆ. ಇಂದಿನಿಂದ ಸೂರ್ಯಗ್ರಹವು ಆರು ತಿಂಗಳ ಕಾಲ ಅಂದರೆ ಜೂನ್ 21ರವರೆಗೆ ಉತ್ತರಾಯಣದಲ್ಲಿರುತ್ತಾನೆ. ಬಳಿಕ ದಕ್ಷಿಣಾಯಾನಕ್ಕೆ ಮುಖ ಮಾಡುತ್ತಾನೆ. ಉತ್ತರಾಯಣದಲ್ಲಿ ಸಾಕಷ್ಟು ಶುಭಕಾರ್ಯಗಳು ನಡೆಯುತ್ತವೆ. ಸಂಕ್ರಾಂತಿ ಸೂರ್ಯಾರಾಧನೆಯ ಹಬ್ಬವಾಗಿದೆ. ಮಕರ ಸಂಕ್ರಾಂತಿ ಪ್ರಸಿದ್ದವಾಗಿರುವ ಸುಗ್ಗಿಯ ಕಾಲದ ಹಬ್ಬ. ಇದನ್ನು ಪೊಂಗಲ್ ಎಂದು ಕರೆಯಲಾಗುತ್ತದೆ. ಪೊಂಗಲ್ ಎಂದರೆ ಅಕ್ಕಿ ತುಪ್ಪ, ಹಾಲು, ಸಕ್ಕರೆ ಅಥವಾ ಬೆಲ್ಲಗಳಿಂದ ಮಾಡಿದ ಸಿಹಿ ಖಾದ್ಯ. ಸುಗ್ಗಿಯ ಉತ್ಪನ್ನಗಳಿಂದ ಮಾಡಿದ ಇದನ್ನು ಸೂರ್ಯದೇವನಿಗೆ ನೈವೇದ್ಯಮಾಡಲಾಗುವುದು.

ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು "ಎಳ್ಳು ಬೆಲ್ಲ". ಮನೆಯಲ್ಲಿ ಎಳ್ಳ್ಳು ಬೆಲ್ಲವನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ "ಎಳ್ಳುಹಂಚುವುದು" ಸಂಕ್ರಾಂತಿಯ ಸಂಪ್ರದಾಯ. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು, ಹಣ್ಣು ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ, ಒಣ ಕೊಬ್ಬರಿ, ಹುರಿಗಡಲೆ, ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ "ಎಳ್ಳು ಬೆಲ್ಲ" ತಯಾರಿಸಲಾಗುತ್ತದೆ. 

ರೈತರಿಗೆ ಇದು ಸುಗ್ಗಿಯ ಹಬ್ಬ. ಈ ಮಂಗಳಕರ ದಿನದಂದು, ಹೆಣ್ಣುಮಕ್ಕಳು (ಮಕ್ಕಳು ಮತ್ತು ಹದಿಹರೆಯದವರು) ಹೊಸ ಬಟ್ಟೆಗಳನ್ನು ಧರಿಸಿ ಒಂದು ತಟ್ಟೆಯಲ್ಲಿ ಎಳ್ಳುಬೆಲ್ಲದೊಂದಿಗೆ ಹತ್ತಿರದ ಜನರನ್ನು ಮತ್ತು ಸಂಬಂಧಿಗಳನ್ನು ಭೇಟಿಯಾಗಿ ಎಳ್ಳುಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. "ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ" ಎಂದು ಹೇಳಿಕೊಳ್ಳುತ್ತಾರೆ. 

ಕಬ್ಬು ಈ ಭಾಗಗಳಲ್ಲಿ ಪ್ರಧಾನ ಏಕೆಂದರೆ ಹಬ್ಬದ ಋತುವಿನ ಸುಗ್ಗಿಯ ಸೂಚಿಸುತ್ತದೆ. ಕರ್ನಾಟಕದ ಕೆಲವು ಭಾಗಗಳಲ್ಲಿ, ಹೊಸದಾಗಿ ಮದುವೆಯಾದ ಮಹಿಳೆ ಯರು ತನ್ನ ಮದುವೆಯ ಮೊದಲ ವರ್ಷದಿಂದ ಐದು ವರ್ಷಗಳ ಕಾಲ ಬಾಳೆಹಣ್ಣುಗಳನ್ನು ಮುತ್ತೈದೆಯರಿಗೆ ಕೊಡುವ ಸಂಪ್ರದಾಯ ಇದೆ. ಬಾಳೆಹಣ್ಣುಗಳ ಸಂಖ್ಯೆಯನ್ನು ಪ್ರತಿವರ್ಷ ಐದರಿಂದ ಹೆಚ್ಚಿಸಲಾಗುತ್ತದೆ. ಉತ್ತರ ಕರ್ನಾಟಕದಲ್ಲಿ, ಸಮುದಾಯದ ಸದಸ್ಯರೊಂದಿಗೆ ಗಾಳಿಪಟ ಹಾರಿಸುವ ಸಂಪ್ರದಾಯವಿದೆ.

Trending News